ರಸ್ತೆಗಾಗಿ ನಿರ್ಮಿಸಿದ್ದ ಸೇತುವೆ ಕುಸಿದಿದ್ದು, ಟ್ರ್ಯಾಕ್ಟರ್‌ವೊಂದು ಸೇತುವೆ ಮಧ್ಯೆ ಸಿಲುಕಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಮೊರಬ ಆಯಟ್ಟಿ ಬಳಿ ನಡೆದಿದೆ.
ಬುಧವಾರ, ಯೋಗೀಶ್ ತೋಟದ ಎಂಬವರು ತಮ್ಮ ಜಮೀನಿಗೆ ಟ್ರ್ಯಾಕ್ಟರ್‌ನಲ್ಲಿ ತೆರಳುತ್ತಿದ್ದರು. ಟ್ರ್ಯಾಕ್ಟರ್ ಸೇತುವೆ ಮೇಲೆ ಹೋಗುತ್ತಿದ್ದಾಗ ಏಕಾಏಕಿ ಸೇತುವೆ ಕುಸಿದಿದೆ. ಟ್ರ್ಯಾಕ್ಟರ್ ಸೇತುವೆ ಮಧ್ಯೆ ಸಿಲುಕಿಕೊಂಡಿದೆ. ಅದೃಷ್ಠವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಇಬ್ಬರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.
ಕಳೆದ ಕೆಲ ವರ್ಷಗಳ ಹಿಂದೆಯಷ್ಟೇ ಗ್ರಾಮದ ತುಪ್ಪರಿಹಳ್ಳಕ್ಕೆ ಸೇತುವೆ ಕಟ್ಟಲಾಗಿತ್ತು. ಇದೀಗ, ಸೇತುವೆ ಕುಸಿದಿದೆ.