ಬೃಹತ್ ಬೆಂಗಳೂರು ಆಡಳಿತ ಮಸೂದೆಗೆ ಖಂಡನೆ; ಬೆಂಗಳೂರು ನವನಿರ್ಮಾಣ ಪಕ್ಷ ರ‍್ಯಾಲಿಗೆ ಕರೆ

Date:

ವಿಧಾನಸಭೆಯಿಂದ ಅಂಗೀಕರಿಸಲ್ಪಟ್ಟ ಬೃಹತ್ ಬೆಂಗಳೂರು ಆಡಳಿತ ಮಸೂದೆ ಖಂಡಿಸಿ ತಿದ್ದುಪಡಿ ಮಾಡಿಸುವ ಉದ್ದೇಶದಿಂದ ಬೆಂಗಳೂರು ನವನಿರ್ಮಾಣ ಪಕ್ಷ(ಬೆನಪ) ಮಾರ್ಚ್ 16ರಂದು ಫ್ರೀಡಂ ಪಾರ್ಕ್‌ನಲ್ಲಿ ಒಂದು ದಿನದ ಉಪವಾಸ ಸತ್ಯಾಗ್ರಹ ಮತ್ತು ಜಾಗೃತಿ ರ‍್ಯಾಲಿಗೆ ಕರೆ ಬೀಡಿದೆ.

- Advertisement -

“ಕರ್ನಾಟಕ ವಿಧಾನಸಭೆಯಲ್ಲಿ ಅಂಗೀಕರಿಸಲಾದ ಮಹಾನಗರ ಬೃಹತ್ ಬೆಂಗಳೂರು ಆಡಳಿತ ಮಸೂದೆ ಬೆಂಗಳೂರಿನ ಸ್ವಾಯತ್ತ ಆಡಳಿತ ಹಕ್ಕನ್ನು ದುರ್ಬಲಗೊಳಿಸುತ್ತಿದ್ದು, ರಾಜ್ಯ ಸರ್ಕಾರ ಹಾಗೂ ಶಾಸಕರ ನಿಯಂತ್ರಣವನ್ನು ಬಲಪಡಿಸುವ ಮೂಲಕ ಭಾರತೀಯ ಸಂವಿಧಾನದ 243ಡಬ್ಲ್ಯೂ ವಿಧಿಯನ್ನು ಉಲ್ಲಂಘಿಸುತ್ತದೆ” ಎಂದು ಬೆಂಗಳೂರು ನವನಿರ್ಮಾಣ ಪಕ್ಷ(ಬೆನಪ) ತೀವ್ರವಾಗಿ ವಿರೋಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

“ಈ ಮಸೂದೆಯು ಬೆಂಗಳೂರಿನ ಸ್ವ-ಆಡಳಿತದ ಹಕ್ಕಿನ ಮೇಲಿನ ಹಲ್ಲೆಯಾಗಿದ್ದು, ನಗರದ ಸ್ವಾಯತ್ತತೆಯನ್ನು ದುರ್ಬಲಗೊಳಿಸುತ್ತದೆ ಮತ್ತು ಪುರಸಭೆಯ ವ್ಯವಹಾರಗಳಲ್ಲಿ ರಾಜ್ಯ ಸರ್ಕಾರ ಮತ್ತು ಶಾಸಕರ ಹಸ್ತಕ್ಷೇಪವನ್ನು ಬಲಪಡಿಸುತ್ತದೆ. ನಗರದ ಮೇಯರ್ ಮತ್ತು ಪುರಸಭೆಗೆ ಅಧಿಕಾರ ನೀಡುವ ಬದಲು, ಮಸೂದೆಯು ಬೆಂಗಳೂರಿನ ಆಡಳಿತದಲ್ಲಿ ಶಾಸಕರು ಮತ್ತು ರಾಜ್ಯ ಸರ್ಕಾರದ ಹಸ್ತಕ್ಷೇಪವನ್ನು ಬಲಪಡಿಸುತ್ತದೆ” ಎಂದು ಬೆನಪ ವಾದಿಸಿದೆ.

ಬೆನಪದ 23 ಬೇಡಿಕೆಗಳು ಮತ್ತು ಆನ್‌ಲೈನ್ ಮನವಿ

“ಬೆಂಗಳೂರು ನವನಿರ್ಮಾಣ ಪಕ್ಷ(ಬೆನಪ) ಈಗಾಗಲೇ 23 ಪ್ರಮುಖ ನಿರ್ಧಾರಗಾರರಿಗೆ ಬೇಡಿಕೆಗಳ ಪಟ್ಟಿ ಸಲ್ಲಿಸಿದ್ದು, ಈ ಮಸೂದೆಯನ್ನು ತಕ್ಷಣ ತಿದ್ದುಪಡಿ ಮಾಡಬೇಕು ಎಂಬ ಆಗ್ರಹದೊಂದಿಗೆ ಆನ್‌ಲೈನ್ ಮನವಿ ಆರಂಭಿಸಿದೆ. ಜಿಬಿಜಿಬಿ ಸ್ಥಳೀಯ ಆಡಳಿತದ ಅಧಿಕಾರವನ್ನೂ ಜನರು ಪಾಲ್ಗೊಳ್ಳುವ ಅವಕಾಶವನ್ನೂ ಮರೆಸುತ್ತದೆ. ಈ ಮಸೂದೆ ಮೇಯರ್‌ಗೆ ನಿರ್ಧಾರ ಕೈಗೊಳ್ಳುವ ಪ್ರಾಮಾಣಿಕ ಅಧಿಕಾರ ನೀಡುವುದಿಲ್ಲ. ಶಾಸಕರು ಹಾಗೂ ರಾಜ್ಯ ಸರ್ಕಾರ ಬೆಂಗಳೂರು ಪಾಲಿಕೆಯ ಕೆಲಸಗಳಲ್ಲಿ ಅನಗತ್ಯವಾಗಿ ಮಧ್ಯಪ್ರವೇಶಿಸುವಂತೆ ಮಾಡುತ್ತದೆ. ಸರ್ಕಾರವನ್ನು ಜನರಿಗೆ ಜವಾಬ್ದಾರಿಯುತಗೊಳಿಸದೆ, ಬದಲಾಗಿ ಆಡಳಿತವನ್ನು ಜನತೆಯಿಂದ ದೂರ ಮಾಡುತ್ತದೆ” ಎಂದು ಪಕ್ಷದ ಸಂಸ್ಥಾಪಕ ಮತ್ತು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ನರಸಿಂಹನ್ ಆರೋಪಿಸಿದ್ದಾರೆ.‌

ಈ ಸುದ್ದಿ ಓದಿದ್ದೀರಾ? ಮದ್ದೂರು | ಬದಲಾಗದ ಪೌರಕಾರ್ಮಿಕರ ಬದುಕು; ನಗರಕೆರೆ ಗ್ರಾ.ಪಂ ಜನಪ್ರತಿನಿಧಿ, ಅಧಿಕಾರಿ ವಿರುದ್ಧ ಕ್ರಮಕ್ಕೆ ಆಗ್ರಹ

ವಾರ್ಡ್ ಸಮಿತಿಗಳನ್ನು ಬಲಪಡಿಸಬೇಕು

“ಬಿಬಿಎಂಪಿ ಕಾಯ್ದೆಯ ಪ್ರಕಾರ ಪ್ರತಿ ತಿಂಗಳು ವಾರ್ಡ್ ಸಮಿತಿ ಸಭೆ ನಡೆಸಲು ಕಡ್ಡಾಯವಿದ್ದರೂ, ಕೇವಲ ಶೇ.32ರಷ್ಟು ಸಭೆಗಳು ಮಾತ್ರ ನಡೆದಿವೆ. ನಗರಾಭಿವೃದ್ಧಿ ಯೋಜನೆಯಲ್ಲಿ ಜನರು ಭಾಗವಹಿಸಬೇಕು. ಶಾಸಕರು ಅಥವಾ ರಾಜ್ಯ ಸರ್ಕಾರವಲ್ಲ. ವಾರ್ಡ್ ಸಮಿತಿಗಳು ʼಏರಿಯಾ ಸಭಾʼಗಳಿಂದ ನೇರ ಮಾಹಿತಿಯನ್ನು ಪಡೆದು, ಸ್ಥಳೀಯ ಅಭಿವೃದ್ಧಿ ಯೋಜನೆ ರೂಪಿಸುವಂತಾಗಬೇಕು. ಬೆಂಗಳೂರು ಮೆಟ್ರೋಪಾಲಿಟನ್ ಪ್ಲಾನಿಂಗ್ ಕಮಿಟಿ ಅಥವಾ ನಗರ ಪಾಲಿಕೆ ನಿರ್ಧಾರಗಳಿಗೆ ಮಾತ್ರ ಅವಲಂಬಿತವಾಗಬಾರದು. ವಾರ್ಡ್ ಮಟ್ಟದ ಕಾಮಗಾರಿಗಳ ಸ್ವತಂತ್ರವಾಗಿ ಪರಿಶೀಲನೆ ನಡೆಸುವ ಅಧಿಕಾರ ಕೂಡಾ ಅವರಿಗೆ ನೀಡಬೇಕು ಎಂದು ಆಡಳಿತ ಮಂಡಳಿ ಸದಸ್ಯೆ ಮತ್ತು ಬೆಂಗಳೂರು ನವನಿರ್ಮಾಣ ಪಕ್ಷದ ಬೆಂಗಳೂರು ದಕ್ಷಿಣದ ವಲಯದ ನಾಯಕಿ ಪೂಂಗೊತೈ ಪರಮಶಿವಂ ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...