ಕಾಂತರಾಜು ಆಯೋಗದ ವರದಿ ಹಾಗೂ ಸದಾಶಿವ ಆಯೋಗದ ವರದಿ ಜಾರಿಗೊಳಿಸಿ ಸಾಮಾಜಿಕ ನ್ಯಾಯಕ್ಕಾಗಿ ಒಳಮೀಸಲಾತಿ ಕಲ್ಪಿಸುವಂತೆ ಬಹುಜನ ಸಮಾಜ ಪಕ್ಷ ಬೀದರ್ ಜಿಲ್ಲಾ ಘಟಕ ಒತ್ತಾಯಿಸಿದೆ.
ನಗರದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಮುಖ್ಯ ಮಂತ್ರಿಗಳಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಜಿಲ್ಲಾಡಳಿತಕ್ಕೆ ಸಲ್ಲಿಸಿದರು.
“ಚುನಾವಣೆ ಸಮಯದಲ್ಲಿ ಮಾದಿಗ ಮತ್ತು ಮಾದಿಗ ಸಂಬಂಧಿತ ಜಾತಿಗಳಿಗೆ ಆಗಿರುವ ಅನ್ಯಾಯವನ್ನು ಸರಿಪಡಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿಮಾಡುವುದಾಗಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ತಮ್ಮ ಪ್ರನಾಳಿಕೆಗಳಲ್ಲಿ ಘೋಷಿಸಿ ಗೆದ್ದ ನಂತರ ಮೌನ ವಹಿಸಿ ಈ ಸಮಾಜಕ್ಕೆ ನಿರಂತರವಾಗಿ ದ್ರೋಹ ಮಾಡುತ್ತಾ ಬಂದಿವೆ” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
“2023ರ ಚುನಾವಣಾ ಪೂರ್ವದಲ್ಲಿ ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬಂದರೆ ಮೊದಲನೇ ಸಚಿವ ಸಂಪುಟದ ಚರ್ಚಿಸಿ ಸದಾಶಿವ ಆಯೋಗದ ವರದಿಯನ್ನು ಜಾರಿಗೊಳಸುವುದಾಗಿ ಕಾಂಗ್ರೇಸ್ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿತ್ತು. ಆದರೆ ಗೆದ್ದು ಅಧಿಕಾರಕ್ಕೆ ಬಂದು 6 ತಿಂಗಳು ಕಳೆಯುತ್ತಿದ್ದರೂ ಇದೂವರೆಗೂ ಈ ಬಗ್ಗೆ ಮೌನವಹಿಸಿರುವುದು ಖಂಡನೀಯ. ಪರಿಶಿಷ್ಟ ಜಾತಿಯ ಮೀಸಲಾತಿ ಹಂಚಿಕೆಯಲ್ಲಿ ತಾರತಮ್ಯ ಸೃಷ್ಠಿಗೆ ಕಾರಣ 75 ವರ್ಷಗಳ ಕಾಲ ದೇಶದ ಆಡಳಿತ ನಡೆಸಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಪಕ್ಷಗಳೇ ಕಾರಣ ಎಂಬುದನ್ನು ಅರ್ಥಮಾಡಿಕೊಳ್ಳಬೇಕಾಗಿದೆ” ಎಂದು ದೂರಿದರು.
“ಸಂವಿಧಾನದ ಆಶಯದಂತೆ ಸಾಮಾಜಿಕ ನ್ಯಾಯ ಎತ್ತಿಹಿಡಿಯುವ ಕಾಂತರಾಜು ಆಯೋಗದ ವರದಿ ಮತ್ತು ಸದಾಶಿವ ಆಯೋಗದ ವರದಿಯನ್ನು ವಿಧಾನಸಭೆಯಲ್ಲಿ ಮಂಡಿಸಿ, ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡಬೇಕೆಂದು” ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ಬೀದರ್ | ಡಿ. 23 ರಂದು ಬೆಂಗಳೂರಿನಲ್ಲಿ ರೈತ ಸಮಾವೇಶ: ರೈತರ ಸಂಪೂರ್ಣ ಸಾಲ ಮನ್ನಾ ಘೋಷಣೆಗೆ ಆಗ್ರಹ
ಈ ಸಂದರ್ಭದಲ್ಲಿ ಪಕ್ಷದ ರಾಜ್ಯಕಾರ್ಯದರ್ಶಿ ದತ್ತು ಸೂರ್ಯವಂಶಿ, ಜಿಲ್ಲಾಧ್ಯಕ್ಷ ಕಪಿಲ್ ಗೋಡಬೋಲೆ, ಜಿಲ್ಲಾ ಕಾರ್ಯಕಾರಣಿ ಸದಸ್ಯ ಸತ್ಯದೀಪ ಹಾವನೂರ್, ಬೀದರ ಲೋಕಸಭಾ ಉಸ್ತುವಾರಿ ಡಾ.ಗುಣವಂತ ಸೂರ್ಯವಂಶಿ, ಜಿಲ್ಲಾ ಉಪಾಧ್ಯಕ್ಷ ಜಿ. ಆಸ್ಕರ್, ಜಾಫರ್ ಖುರೇಷಿ, ಬೀದರ ಲೋಕಸಭಾ ಉಸ್ತುವಾರಿ ಸಂಜುಕುಮಾರ ಮೇಧಾ, ಜಿಲ್ಲಾ ಕಾರ್ಯದರ್ಶಿ ಯೋಹಾನ್ ಡಿಸೋಜಾ, ಜಿಲ್ಲಾ ಖಜಾಂಚಿ ರಿಚರ್ಡ್ ಬಾಬುರಾವ, ಜಿಲ್ಲಾ ಉಪಾಧ್ಯಕ್ಷರು ಶಕ್ತಿಕಾಂತ ಭಾವಿದೊಡ್ಡಿ, ಅಶೋಕ ಮಂಠಾಳಕರ್, ದತ್ತಾತ್ರಿ ಭಂಡಾರಿ, ಶಂಕರ ಫುಲೇ, ನಗನಾಥ ಬಂಗಾರೆ, ಉಮೇಶ್ ಗುತ್ತೇದಾರ, ರಜನಿಕಾಂತ ನಾಯಕ, ಮಹೇಶ್ ಭೋಲಾ, ಶಂಕರ ಪುಲೆ, ಪ್ರದೀಪ ಫುಲೆ, ನಾಗನಾಥ ಭಂಗಾರೆ, ರಾಜು, ದತ್ತು ಸೇರಿದಂತೆ ಇತರರಿದ್ದರು.