ಚಿತ್ರದುರ್ಗ | ಶಾಸಕಿ ಕೆ ಪೂರ್ಣಿಮಾ ಕಾಂಗ್ರೆಸ್ ಸೇರುವುದಿಲ್ಲ; ಬಿಎಸ್‌ವೈ ಸ್ಪಷ್ಟನೆ

Date:

  • ಹಿರಿಯೂರಿನ ಜನಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡ ಶಾಸಕಿ
  • ಕಾಂಗ್ರೆಸ್‌ ಸೇರ್ಪಡೆ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ

ಹಿರಿಯೂರಿನ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರುವುದಿಲ್ಲ. ಅವರು ನಮ್ಮ ಜೊತೆಗಿದ್ದು, ಪಕ್ಷದ ಕೆಲಸದಲ್ಲಿ ಪಾಲ್ಗೊಳ್ಳುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹಿರಿಯೂರಿನಲ್ಲಿ ಸ್ಪಷ್ಟನೆ ನೀಡಿದ್ದಾರೆ.

ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಇಂದು ಮಧ್ಯಾಹ್ನ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಭಾಗವಹಿಸಿದ್ದ ಯಡಿಯೂರಪ್ಪ ಸುದ್ದಿಗಾರರೊಂದಿಗೆ ಮಾತನಾಡಿದರು. “ಪೂರ್ಣಿಮಾ ಯಾವುದೇ ಕಾರಣಕ್ಕೂ ಬಿಜೆಪಿ ಬಿಟ್ಟು ಹೋಗುವುದಿಲ್ಲ. ರಾಜ್ಯದಲ್ಲಿ ಎಲ್ಲರ ನಿರೀಕ್ಷೆ ಮೀರಿ ಬಿಜೆಪಿ ಪರವಾದ ವಾತಾವರಣ ಸೃಷ್ಟಿಯಾಗಿದೆ” ಎಂದು ಹೇಳಿದರು.

“ಮುಂಬರುವ ಚುನಾವಣೆಯಲ್ಲಿ ಬಿಜೆಪಿ 140ಕ್ಕೂ ಹೆಚ್ಚಿನ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿ ಅಧಿಕಾರಕ್ಕೆ ಬರಲಿದೆ. ಆದರೆ, ಕೆಲವರು ‘ಮುಂದಿನ ಮುಖ್ಯಮಂತ್ರಿ ನಾವೇ’ ಆಗುತ್ತೇವೆಂದು ಬೊಬ್ಬೆ ಹೊಡೆಯುತ್ತಿದ್ದಾರೆ” ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಕಳೆದ ಕಲವು ದಿನಗಳಿಂದ ಹಿರಿಯೂರು ಕ್ಷೇತ್ರದ ಬಿಜೆಪಿ ಶಾಸಕಿ ಕೆ ಪೂರ್ಣಿಮಾ ಶ್ರೀನಿವಾಸ್ ಕಾಂಗ್ರೆಸ್ ಪಕ್ಷಕ್ಕೆ ಮರಳಲಿದ್ದಾರೆ. ಅವರನ್ನು ಪಕ್ಷಕ್ಕೆ ಕರೆತರಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಶ್ರಮಿಸುತ್ತಿದ್ದಾರೆ ಎಂಬ ಮಾತುಗಳು ಕೇಳಿಬಂದಿತ್ತು. ಈ ಬಗ್ಗೆ ಶಾಸಕಿ ಪೂರ್ಣಿಮಾ ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ. ಆದರೆ, ಬಿ ಎಸ್‌ ಯಡಿಯೂರಪ್ಪನವರ ಜೊತೆ ಕಾಣಿಸಿಕೊಳ್ಳುವ ಮೂಲಕ ಗೊಂದಲಕ್ಕೆ ತೆರೆ ಎಳೆಯುವ ಪ್ರಯತ್ನ ಮಾಡಿದ್ದಾರೆ ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಕಾರ್ಖಾನೆಗಳ ಸಹವಾಸ ಸಾಕೆಂದು ಆಲೆಮನೆ ಮೊರೆ ಹೋಗುತ್ತಿರುವ ರೈತರು

ಕಬ್ಬಿಗೆ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರು ಹೋರಾಟ ಮಾಡುತ್ತಲೇ...

ಧಾರವಾಡ | ಮಹದಾಯಿ ಯೋಜನೆ; ಸದನದಲ್ಲಿ ಚರ್ಚೆಯಾಗದಿದ್ದಲ್ಲಿ ಸುವರ್ಣ ಸೌಧಕ್ಕೆ ಮುತ್ತಿಗೆಯ ಎಚ್ಚರಿಕೆ

ಕಳಸಾ ಬಂಡೂರಿ ನಾಲಾ ಮಹದಾಯಿಗಾಗಿ ಉತ್ತರ ಕರ್ನಾಟಕದ ರೈತರು ಸಾಕಷ್ಟು ಹೋರಾಟ...

ಬೆ.ಗ್ರಾಮಾಂತರ | ಮೋಡ ಕವಿದ ವಾತಾವರಣ; ರೇಷ್ಮೆಹುಳುಗಳಿಗೆ ಹಾಲು ತೊಂಡೆ ರೋಗದ ಭೀತಿ

ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿ ತಾಲೂಕಿನಾದ್ಯಂತ ಮೂರು ದಿನಗಳಿಂದ ಮೋಡ ಮುಸುಕಿದ...

ಭವಾನಿ ರೇವಣ್ಣ ವರ್ತನೆ ಮಾಜಿ ಪ್ರಧಾನಿ ಕುಟುಂಬಕ್ಕೆ ಶೋಭೆ ತರುವಂತದಲ್ಲ: ಬಿ.ಟಿ.ನಾಗಣ್ಣ

ಅಪಘಾತಕ್ಕೆ ಸಂಬಂಧಿಸಿದಂತೆ ಹೊಳೆನರಸೀಪುರ ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ...