ಮಂಡ್ಯ | ಬೆಟ್ಟಿಂಗ್ ದಂಧೆಯ ನಿಯಂತ್ರಣಕ್ಕೆ ನಿರ್ದಿಷ್ಟ ಕಾಯ್ದೆ ಜಾರಿಗೆ ಬಿ ಟಿ ವಿಶ್ವನಾಥ್ ಆಗ್ರಹ

Date:

ರಾಜ್ಯದಲ್ಲಿ ಬೆಟ್ಟಿಂಗ್ ದಂಧೆಯನ್ನು ಮಟ್ಟ ಹಾಕಲು ನಿರ್ದಿಷ್ಟವಾದ ಕಾಯಿದೆ ಇಲ್ಲ. ಈಗಿರುವ ಕಾನೂನು 1886ರಲ್ಲಿ ಬ್ರಿಟೀಷರು ರಚಿಸಿದ್ದು, ಇದು ಹಲ್ಲಿಲ್ಲದ ಹಾವಿನಂತ ಕಾನೂನು . ಏನು ಉಪಯೋಗ ಇಲ್ಲ. ಶೀಘ್ರವಾಗಿ ಕಾಯಿದೆಗೆ ತಿದ್ದುಪಡಿ ಆಗಬೇಕೆಂದು ನ್ಯಾಯವಾದಿ ಬಿ.ಟಿ ವಿಶ್ವನಾಥ್ ಆಗ್ರಹಿಸಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ನೀಡಿರುವ ಅವರು, ಎಐಎಲ್‌ಯು ಬೆಟ್ಟಿಂಗ್ ದಂಧೆ ವಿರುದ್ಧ ಪ್ರಗತಿಪರ ಸಂಘಟನೆಗಳು ಏರ್ಪಡಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮತ್ತು ಸಭೆಯ ಅಹವಾಲು ಪರಿಗಣಿಸಿ ಜಿಲ್ಲಾಧಿಕಾರಿಗಳು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ್ದೆ. ಸಭೆಯಲ್ಲಿ ಪೊಲೀಸ್ ಇಲಾಖೆ ಕೂಡ ಭಾಗವಹಿಸಿತ್ತು. ಬೆಟ್ಟಿಂಗ್ ದಂಧೆಯ ಜನರ ವಿರುದ್ಧ ಇನ್ನು ಮುಂದೆ ಕಲಿಸಲು ಜನರಿಗೆ ಸಹಾಯ ಮಾಡುವುದಾಗಿ ಪೊಲೀಸ್ ಇಲಾಖೆ ಸಭೆಯಲ್ಲಿ ಆಶ್ವಾಸನೆ ಇತ್ತಿತ್ತು ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ನಿರ್ದಿಷ್ಟ ಪ್ರಕರಣ ಒಂದರಲ್ಲಿ ಆ ದಿನ ಎಫ್‌ಐಆರ್ ದಾಖಲಿಸಲು ಪೊಲೀಸ್ ವರಿಷ್ಠಾಧಿಕಾರಿಗಳು ಪೊಲೀಸರಿಗೆ ಆದೇಶವನ್ನು ಮಾಡಿದ್ದರು. ಆನಂತರ ವಕೀಲರು ಒಬ್ಬರು ನನಗೆ ಕರೆ ಮಾಡಿ ಸದರಿ ಎಫ್ಐಆರ್ ಮಾಡಲು ಯಾವ ಯಾವ ಕಲಂಗಳಡಿ ಕೇಸು ದಾಖಲು ಮಾಡಬೇಕು ಗೊತ್ತಾಗ್ತಿಲ್ಲ, ಸ್ವಲ್ಪ ನೋಡಿ ಹೇಳಿ ಸರ್ ಅಂದಿದ್ದರು. ಬೆಟ್ಟಿಂಗ್ ಸಂಬಂಧದ ಕಾನೂನುಗಳ ಕುರಿತು ನಾನು ಹುಡುಕಾಡಲು ಶುರು ಮಾಡಿದಾಗಲಷ್ಟೇ ನನಗೆ ಗೊತ್ತಾಗಿದ್ದು ಬೆಟ್ಟಿಂಗ್ ಸಂಬಂಧ ದೇಶದಲ್ಲಿ ಒಂದು ಸಮಗ್ರ ಕಾನೂನೇ ಇಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

ಬೆಟ್ಟಿಂಗ್ ಸಂಬಂಧ ಅತ್ಯಂತ ಹಳೆಯ ಕಾನೂನು ಇರುವುದು 1886ರಲ್ಲಿ ಬ್ರಿಟಿಷರು ರಚಿಸಿದ್ದು. ನೂರಿನ್ನೂರು ರೂಪಾಯಿ ದಂಡ ಹಾಕುವಂಥದ್ದು. ಹಾಗೆ ನೋಡಿದರೆ 2021ರಲ್ಲಿ ಕರ್ನಾಟಕ ಪೊಲೀಸ್ ಕಾಯ್ದೆಗೆ ಒಂದು ತಿದ್ದುಪಡಿ ಮಾಡಿ ಬೆಟ್ಟಿಂಗ್ ವಿರುದ್ಧ ಸಮರ ಸಾರಲು ಪ್ರಯತ್ನ ಮಾಡಿತ್ತು. ಆದರೆ ಕರ್ನಾಟಕ ಉಚ್ಛ ನ್ಯಾಯಾಲಯ ಆ ತಿದ್ದುಪಡಿಗಳು ಸಂವಿಧಾನ ವಿರೋಧಿಯಾಗಿ ಇವೆ ಎಂದು ಆದೇಶ ಒಂದರ ಮೂಲಕ ರದ್ದು ಮಾಡಿತ್ತು ಎಂದು ಬೇಸರ ವ್ಯಕ್ತಪಡಿಸಿದರು.

ಇದನ್ನು ಓದಿದ್ದೀರಾ? ಮರಕುಂಬಿ ಪ್ರಕರಣ | ಜೀವಾವಧಿ ಶಿಕ್ಷೆಗೊಳಗಾಗಿದ್ದ 98 ಅಪರಾಧಿಗಳ ಪೈಕಿ 97 ಜನರಿಗೆ ಹೈಕೋರ್ಟ್‌ ಜಾಮೀನು

ಪ್ರಕರಣದ ಸಮಗ್ರ ಕಥೆ ಕೇಳಿಸಿಕೊಂಡ ನಾನು ಪ್ರಕರಣಕ್ಕೆ ಹೊಂದುವಂತೆ ಭಾರತೀಯ ನ್ಯಾಯ ಸಂಹಿತೆಯ ಇತರ ಕಲಂಗಳನ್ನು ಬಳಸಿ ದೂರನ್ನು ಸಿದ್ಧಪಡಿಸಿ ಕೊಟ್ಟಿದ್ದೆ. ಬೆಟ್ಟಿಂಗ್‌ನಂತಹ ಜ್ವಲಂತ ಸಮಸ್ಯೆಯ ಬಗ್ಗೆ ಸರಕಾರಗಳು ಕಾಯ್ದೆ ಕಾನೂನುಗಳನ್ನು ತ್ವರಿತವಾಗಿ ರಚಿಸಬೇಕಾಗಿದೆ. ಬೆಟ್ಟಿಂಗ್, ಜೂಜು, ಕೆಸಿನೋಗಳಿಂದ ಹಣ ಮಾಡಿದವರೆ ರಾಜಕೀಯ ಪ್ರವೇಶಿಸುತ್ತಿದ್ದು, ಸರಕಾರದ ಭಾಗವಾಗಿ ಬಿಡುತ್ತಿರುವುದರಿಂದ ಇಂತಹ ಕಾನೂನುಗಳು ಜಾರಿಯಾಗುವುದಕ್ಕೆ ಇನ್ನೆಷ್ಟು ಕಾಲ ಹಿಡಿಯುತ್ತದೆ. ಅಷ್ಟು ಹೊತ್ತಿಗೆ ಈ ಹುಚ್ಚು ಹಿಡಿಸಿಕೊಂಡ ನಮ್ಮ ಹಳ್ಳಿಗಳ ಯುವಕರು ಆದೆಷ್ಟು ಜನ ರೈಲಿಗೆ ತಲೆ ಕೊಡಲಿದ್ದಾರೋ ಗೊತ್ತಿಲ್ಲ ಎಂದು ನ್ಯಾಯವಾದಿ ಬಿ.ಟಿ ವಿಶ್ವನಾಥ್ ಕಳವಳ ವ್ಯಕ್ತಪಡಿಸಿದ್ದಾರೆ.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರಿಂದ ನಿವೇಶನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ ಜಿಲ್ಲೆಯ ಸಾಲಿಗ್ರಾಮ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಸ್ವಂತ ನಿವೇಶನ ಹೊಂದಿಲ್ಲದ...

ಶಿವಮೊಗ್ಗ | ರಂಗದಸರಾ ಪ್ರಯುಕ್ತ ಜಿಲ್ಲಾ ಮಟ್ಟದ ಏಕಪಾತ್ರಾಭಿನಯ ಸ್ಪರ್ಧೆ ಕಾರ್ಯಕ್ರಮ

ಶಿವಮೊಗ್ಗ ಮಹಾನಗರ ಪಾಲಿಕೆಯು ದಸರಾ-2026ರ ಪ್ರಯುಕ್ತ ರಂಗ ದಸರಾ-2026ರ ಅಡಿಯಲ್ಲಿ 15...

ರಾಯಚೂರು | ವಿದ್ಯುತ್ ಅವಘಡ: ರೈತ ಸಾವು

ಹೊಲದಲ್ಲಿ ವಿದ್ಯುತ್ ಅವಘಡಕ್ಕೆ ವ್ಯಕ್ತಿಯೋರ್ವ ಸಾವನ್ನಪ್ಪಿದ್ದ ಘಟನೆ ಮಾನ್ವಿ ತಾಲ್ಲೂಕಿನ ಕಾತರಕಿ...

ಬಳ್ಳಾರಿ | 7,561 ಮತದಾರರ ಹೆಸರು ಪರಿಷ್ಕರಣೆ: ಅಕ್ರಮದ ಆರೋಪ

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಳ್ಳಾರಿ ನಗರ ಕ್ಷೇತ್ರದ 7,561 ಮತದಾರರ ಹೆಸರುಗಳನ್ನು ಮರುಪರಿಶೀಲನೆಗೆ...