ಬೆಂಗಳೂರು ವಿವಿಗೆ ‘ಐಎಸ್‌ಒ’ ಮಾನ್ಯತೆ

Date:

  • ಎಂಬಿಎ ಸಂಜೆ ಕಾಲೇಜು ಆರಂಭಿಸಲಿದೆ ಬೆಂಗಳೂರು ವಿವಿ
  • ನ್ಯಾಕ್ ಮಾನ್ಯತೆಗೆ ‘ಐಎಸ್‌ಒ’ ಬಹುಮುಖ್ಯ ಪಾತ್ರವಹಿಸುತ್ತದೆ

ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಮೊಟ್ಟಮೊದಲ ಬಾರಿಗೆ ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ ಮಾನ್ಯತೆ ಪಡೆದಿದೆ.  

ಈ ಬಗ್ಗೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ವಿಶ್ವವಿದ್ಯಾಲಯದ ಉಪಕುಲಪತಿ ಡಾ.ಜಯಕರ ಎಸ್‌ಎಂ, “ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತೆ ಮಂಡಳಿ (ನ್ಯಾಕ್) ಮಾನ್ಯತೆ ಪಡೆಯುವಲ್ಲಿ ವಿಶ್ವವಿದ್ಯಾಲಯಗಳಿಗೆ ಐಎಸ್‌ಒ ಪ್ರಮಾಣೀಕರಣ ಪತ್ರ ಅತಿ ಮುಖ್ಯ ಪಾತ್ರ ವಹಿಸುತ್ತದೆ” ಎಂದು ತಿಳಿಸಿದರು.

“ನ್ಯಾಕ್ ಮಾನ್ಯತೆಗಾಗಿ ಮುಂದಿನ ವಾರಗಳಲ್ಲಿ ನಾಲ್ಕನೆ ಹಂತದ ಅರ್ಜಿ ಸಲ್ಲಿಸಲಾಗುತ್ತದೆ. ಶಿಕ್ಷಣ ಸಂಸ್ಥೆಯ ಗುಣಮಟ್ಟದ ಆಡಳಿತ ತತ್ವಗಳನ್ನು ಪರಿಗಣಿಸಿ ಬೆಂಗಳೂರು ವಿಶ್ವವಿದ್ಯಾಲಯ ಐಎಸ್‌ಒ-9001-2015 ಮಾನ್ಯತೆ ನೀಡಲಾಗಿದೆ” ಎಂದು ಅವರು ವಿವರಿಸಿದರು.

ಈ ಸುದ್ದಿ ಓದಿದ್ದೀರಾ?: ಮಾರ್ಚ್‌ 31ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ

“ವಿದ್ಯಾರ್ಥಿಗಳ ಬೇಡಿಕೆಯ ಮೇರೆಗೆ ವಿಶ್ವವಿದ್ಯಾಲಯವು ಈ ಶೈಕ್ಷಣಿಕ ವರ್ಷದಿಂದ ಎಂಬಿಎ ಸಂಜೆ ತರಗತಿಗಗಳನ್ನು ಪುನರಾರಂಭಿಸಲಾಗಿದೆ. 2017ರಲ್ಲಿ ಸಂಜೆ ತರಗತಿಗಳನ್ನು ನಿಲ್ಲಿಸಲಾಗಿತ್ತು. ಲಭ್ಯವಿರುವ 66 ಸೀಟುಗಳಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲು ನಿರ್ಧರಿಸಿದೆ. ಅರ್ಹ ಪದವಿ ವಿದ್ಯಾರ್ಥಿಗಳು ಕೋರ್ಸ್‌ಗೆ ಅರ್ಜಿ ಸಲ್ಲಿಸಬಹುದು” ಎಂದು ಅವರು ತಿಳಿಸಿದ್ದಾರೆ.

ಐಎಸ್‌ಒ ಮಾನ್ಯತೆಗೆ ಪ್ರಮಾಣೀಕರಣ ಪ್ರಕ್ರಿಯೆಯ ಶಿಕ್ಷಣದ ಗುಣಮಟ್ಟ, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ, ಮೂಲಸೌಕರ್ಯ, ದಾಖಲಾತಿ ಮತ್ತು ಪದವಿ ಸೇರಿದಂತೆ ವಿಶ್ವವಿದ್ಯಾನಿಲಯದ ವಿವಿಧ ಅಂಶಗಳ ಸಮಗ್ರ ಲೆಕ್ಕಪರಿಶೋಧನೆಯನ್ನು ಒಳಗೊಂಡಿರುತ್ತದೆ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

Subscribe

ಹೆಚ್ಚು ಓದಿಸಿಕೊಂಡ ಲೇಖನಗಳು

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಕರ್ನಾಟಕ’ ನಾಮಕರಣಕ್ಕೆ 50ರ ಸಂಭ್ರಮ | ವರ್ಷವಿಡಿ ವಿಶೇಷ ಕಾರ್ಯಕ್ರಮ: ಸಚಿವ ಶಿವರಾಜ್ ತಂಗಡಗಿ

'ರಾಜ್ಯ 'ಕರ್ನಾಟಕ' ಎಂದು ನಾಮಕರಣಗೊಂಡು 50 ವರ್ಷ ಪೂರೈಸುತ್ತಿದೆ' ವರ್ಷವಿಡಿ ಕಾರ್ಯಕ್ರಮ ಆಯೋಜಿಸಲು...

ಚಿತ್ರದುರ್ಗ | ಮನೆ ಬಾಗಿಲಿಗೆ ಇ-ಸ್ವತ್ತು ‘ಜನಸ್ನೇಹಿ ಕಾರ್ಯಕ್ರಮ’ಕ್ಕೆ ಮತ್ತೆ ಚಾಲನೆ ನೀಡಿದ ಸಿಇಒ ದಿವಾಕರ್

ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಖಲೆಗಳನ್ನು ಸರ್ಕಾರವು ಡಿಜಿಟಲೀಕರಣಗೊಳಿಸಿದ್ದು, ಮನೆಯ ಖಾಯಂ ಹಕ್ಕು...

ಶಾಸಕ ಪ್ರದೀಪ್ ಈಶ್ವರ್ ಸಹಾಯ ಅರಸಿ ಬಂದ ವೃದ್ಧೆ; ಬರಿಗೈನಲ್ಲೇ ವಾಪಸ್

ಸದ್ಯ ರಾಜ್ಯ ರಾಜಕಾರಣದಲ್ಲಿ ತೆಲುಗು-ಕನ್ನಡ ಮಿಶ್ರಿತ ಡೈಲಾಗ್‌ಗಳಿಂದ ಅಬ್ಬರಿಸಿ ಬೊಬ್ಬಿರಿಯುತ್ತಿರುವವರು ಶಾಸಕ...

ಭ್ರಷ್ಟ ಪಿಡಿಒಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ

ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಪಿಡಿಒಗಳ ಮೇಲಿನ ತನಿಖೆಯನ್ನು ಚುರುಕುಗೊಳಿಸಿ ಅಂತಹವರ ವಿರುದ್ಧ...