ಉಡುಪಿ | ಬೌದ್ಧ ಧರ್ಮಕ್ಕೆ ಬ್ರಾಹ್ಮಣ ಧರ್ಮದಿಂದ ಅಪಾಯ – ಜಯನ್ ಮಲ್ಪೆ

Date:

Advertisements

ಬೌದ್ಧ ಧರ್ಮಕ್ಕೆ ಇಸ್ಲಾಮಿನಿಂದ ಅಪಾಯವಿಲ್ಲ. ಆದರೆ ಬ್ರಾಹ್ಮಣ ಧರ್ಮದಿಂದ ಅಪಾಯವಿದೆ. ಏಕೆಂದರೆ ಅವರು ಸಮಾಜದ ಶ್ರೇಣೀಕೃತ ಅಸಮಾನತೆ ಹಾಗೇ ಇರಲೆಂದೇ ಬಯಸುತ್ತಾರೆ. ಬೌದ್ಧ ಧರ್ಮ ಸಮಾನತೆಯನ್ನು ನಂಬುತ್ತದೆ ಮತ್ತು ಬೌದ್ಧ ಧರ್ಮವು ಬ್ರಾಹ್ಮಣರ ಅಹಂ ಮತ್ತು ಅಧಿಕಾರದ ಬುಡಕ್ಕೆ ಕೊಡಲಿಯೇಟು ಹಾಕುತ್ತದೆ. ಅದಕ್ಕಾಗಿ ಅದನ್ನು ದ್ವೇಷಿಸುತ್ತಾರೆ ಎಂದು ದಲಿತ ಚಿಂತಕ ಹಾಗೂ ಜನಪರ ಹೋರಾಟಗಾರ ಜಯನ್ ಮಲ್ಪೆ ಹೇಳಿದ್ದಾರೆ.

ಅವರು ಸೋಮವಾರ ಮಲ್ಪೆ ಸರಸ್ವತಿ ಬಯಲು ರಂಗಮಂದಿರದಲ್ಲಿ ಉಡುಪಿ ಜಿಲ್ಲಾ ಅಂಬೇಡ್ಕರ್ ಯುವಸೇನೆ ಆಯೋಜಿಸಿದ ೨೫೬೯ನೇ ವೈಶಾಖ ಪೂರ್ಣಿಮೆಯ ಬುದ್ಧ ಜಯಂತಿಯನ್ನು ಉದ್ಘಾಟಿಸಿ ಮಾತನಾಡುತ್ತಾ, ಇಂದು ಭಾರತ ಮತ್ತು ಪಾಕಿಸ್ಥಾನದ ನಡುವೆ ದಾಳಿ ನಡೆಯುತ್ತಿದೆ. ನಮಗೆ ಮಾನವ ಜನಾಂಗದ ಎದುರಿಗೆ ಇರುವ ಬುದ್ಧ ಮತ್ತು ಯುದ್ಧ ಎಂಬ ಎರಡು ಆಯ್ಕೆಗಳಲ್ಲಿ ಒಂದನ್ನು ಆರಿಸಿಕೊಳ್ಳಬೇಕಾದ ಅನಿವಾರ್ಯತೆ ಎದುರಾದರೆ ನಾವು ಯಾವುದನ್ನು ಆಯ್ಕೆ ಮಾಡುತ್ತೀರಿ?ಎಂದ ಜಯನ್ ಮಲ್ಪೆ ಜೀವ ಜಗತ್ತಿನ ಬಗ್ಗೆ ಕಿಂಚಿತ್ತಾದರೂ ಪ್ರೀತಿಯುಳ್ಳ ಮನುಷ್ಯ ವರ್ಗವು ಬುದ್ಧನನ್ನು ಮತ್ತು ಬುದ್ದನ ವಿಚಾರಗಳನ್ನು ಅಪ್ಪಿಕೊಳ್ಳದೇ ಬೇರೆ ದಾರಿ ಕಾಣುವುದಿಲ್ಲ.ಬುದ್ದನ ಶಾಂತಿ ಮಂತ್ರವೇ ಭೂಮಿಯ ಮೇಲಿನ ಜೀವಸಂಕುಲದ ಉಳಿವಿಗೆ ರಕ್ಷಾಕವಚವಾಗಬಲ್ಲದು ಎಂದರು.

ಅಂಬೇಡ್ಕರ್ ಯುವಸೇನೆಯ ಜಿಲ್ಲಾಧ್ಯಕ್ಷರಾದ ಗಣೇಶ್ ನೆರ್ಗಿ ಮಾತನಾಡಿ ಸಮಕಾಲೀನ ಜಾಗತಿಕ ಘಟನೆಗಳಿಗೆ, ಹಿಂಸೆಯ ಪ್ರಚೋದನೆ, ಭಯೋತ್ಪಾದನೆ, ಭ್ರಷ್ಟಾಚಾರ, ಅನೈತಿಕ ರಾಜಕಾರಣ, ಕೋಮುದ್ವೇಷ ಮುಂತಾದವುಗಳಿಗೆ ಪ್ರತಿರೋಧವೊಡ್ಡಲು ಬುದ್ಧನನ್ನು ಅಸ್ತ್ರವನ್ನಾಗಿ ಬಳಸಿಕೊಳ್ಳಬೇಕಾಗಿದೆ ಎಂದರು.

Advertisements

ಅಂಬೇಡ್ಕರ್ ಯುವಸೇನೆಯ ಸ್ಥಾಪಕ ಅಧ್ಯಕ್ಷರಾದ ಹರೀಶ್ ಸಾಲ್ಯಾನ್ ಮಾತನಾಡಿ ಭವಿಷ್ಯದಲ್ಲಿ ಅಂಬೇಡ್ಕರ್ ಕನಸಿನ ಪ್ರಬುದ್ಧ ಭಾರತ ಸಕಾರಗೊಳ್ಳಬೇಕಾದರೆ ದಲಿತರು ಅಂಬೇಡ್ಕರ್‌ರವರನ್ನು ತಮ್ಮ ಸಂಕುಚಿತ ಸ್ವಾರ್ಥಕ್ಕೆ ಸಾಧನವಾಗಿ ಬಳಸುವುದನ್ನು ಬಿಟ್ಟು ಧಮ್ಮ ಚಳವಳಿಯನ್ನು ಮುನ್ನಡೆಸಬೇಕಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಹಿರಿಯ ದಲಿತ ಮುಖಂಡರಾದ ದಯಾಕರ ಮಲ್ಪೆ, ಸಂತೋಷ್ ಕಪ್ಪೆಟ್ಟು,ರವಿ ಲಕ್ಷ್ಮೀಂದ್ರನಗರ, ಗುಣವಂತ ತೊಟ್ಟಂ, ದೀಪಕ್ ಕೊಡವೂರು, ಸತೀಶ್ ಕಪ್ಪೆಟ್ಟು, ಸಾಧು ಚಿಟ್ಪಾಡಿ, ಪ್ರಸಾದ್ ಮಲ್ಪೆ, ಅರುಣ್ ಸಲ್ಯಾನ್, ನವೀನ್ ಬನ್ನಂಜೆ, ಸಕಿ ಕುಮಾರ್ ಕಪ್ಪೆಟ್ಟು, ಮಾಸ್ಟರ್ ಹಷೀಲ್ ಮುಂತಾದವರು ಉಪಸ್ಥಿತರಿದ್ದರು.

ಸಮಾರಂಭದ ಬಳಿಕ ಮಲ್ಪೆ ಸುತ್ತುಮುತ್ತಲಿನ ದಲಿತ ಕಾಲೋನಿಯ ನೂರಾರು ಮಂದಿ ಗೌತಮಬುದ್ಧನಿಗೆ ಹೂವು ಗುಚ್ಚ ಅರ್ಪಿಸಿ ವಂದನೆ ಸಲ್ಲಿಸಿದರು. ವಿನಯ ಕೊಡಂಕೂರು ಸ್ವಾಗತಿಸಿ, ಸಂತೋಷ್ ಮೂಡುಬೆಟ್ಟು ವಂದಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

ಚಿಕ್ಕಮಗಳೂರು l ತೆಂಗಿನಕಾಯಿ ಕಳ್ಳತನ ಆರೋಪ: ವ್ಯಕ್ತಿಯ ಹತ್ಯೆ; ಆರೋಪಿಗಳ ಬಂಧನ

ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

Download Eedina App Android / iOS

X