ಬಜೆಟ್‌ | ಬೆಂಗಳೂರು ಅಭಿವೃದ್ಧಿಗೆ ₹100 ಕೋಟಿ ಅನುದಾನ ನೀಡುವಂತೆ ಬಿಜೆಪಿ ನಿಯೋಗದಿಂದ ಸಿಎಂಗೆ ಮನವಿ

Date:

ಬೆಂಗಳೂರು ನಗರದ ಬಿಜೆಪಿ ಶಾಸಕರು ಹಾಗೂ ಸಂಸದರ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಭೇಟಿಯಾಗಿ ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ಅಭಿವೃದ್ಧಿಗೆ ಬಜೆಟ್‌ನಲ್ಲಿ ₹100 ಕೋಟಿ ಅನುದಾನ ಒದಗಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಿದರು.

- Advertisement -

ಬೆಂಗಳೂರು ನಗರದ ಕಾವೇರಿ ನಿವಾಸದಲ್ಲಿ ಶುಕ್ರವಾರ ಭೇಟಿ ಮಾಡಿ ಮನವಿ ಸಲ್ಲಿಸಿದ್ದು, “ಈ ಬಾರಿಯ ಬಜೆಟ್​​ನಲ್ಲಿ ಬಿಜೆಪಿ ಶಾಸಕರುಗಳ ಕ್ಷೇತ್ರಗಳಿಗೆ ಮೂಲಸೌಕರ್ಯ ಒದಗಿಸಲು ಹಾಗೂ ಇತರೆ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನ ಒದಗಿಸಬೇಕು” ಎಂದು ಕೋರಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

“ರಾಜ್ಯದ ಒಟ್ಟಾರೆ ಆಯವ್ಯಯಕ್ಕೆ ಬೆಂಗಳೂರು ನಗರದಿಂದಲೇ ಹೆಚ್ಚಿನ ಆದಾಯ ಬರುತ್ತಿರುವುದರಿಂದ ಬೆಂಗಳೂರು ಬಿಜೆಪಿ ಶಾಸಕರುಗಳ ಕ್ಷೇತ್ರಗಳನ್ನು ಗಮನದಲ್ಲಿರಿಸಿಕೊಂಡು ಶಾಸಕರ ಕ್ಷೇತ್ರಾಭಿವೃದ್ಧಿ ಹಾಗೂ ಬೆಂಗಳೂರು ನಗರದ ಅಭಿವೃದ್ಧಿ ಸೇರಿದಂತೆ ರಸ್ತೆ, ಉದ್ಯಾನ ಹಾಗೂ ಇತರೆ ಮೂಲಸೌಕರ್ಯ ಅಭಿವೃದ್ಧಿಗೆ ಬಜೆಟ್​​ನಲ್ಲಿ ₹100 ಕೋಟಿ ಅನುದಾನ ಮೀಸಲಿಡಬೇಕು” ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಉಡುಪಿ | ಸಂಭವನೀಯ ಪ್ರಕೃತಿ ವಿಕೋಪದ ಮಾಹಿತಿಗಳನ್ನು ಸಾರ್ವಜನಿಕರಿಗೆ ನೀಡಿ – ಡಿಸಿ ಡಾ. ಕೆ ವಿದ್ಯಾ ಕುಮಾರಿ

ಮೆಟ್ರೋ ದರ ಮತ್ತಷ್ಟು ಇಳಿಸುವ ಕೋರಿಕೆಗೆ ಮುಖ್ಯಮಂತ್ರಿಯವರು ಪ್ರತಿಕ್ರಿಯಿಸಿದ್ದು, ”ಈಗಾಗಲೇ ಅವೈಜ್ಞಾನಿಕ ದರ ಏರಿಕೆಯನ್ನು ಹಿಂತೆಗೆದುಕೊಳ್ಳುವಂತೆ ಕೇಂದ್ರ, ಮೆಟ್ರೋಗೆ ಪತ್ರ ಬರೆಯಲಾಗಿದೆ. ಸಾರ್ವಜನಿಕರಿಗೆ ಹೊರೆಯಾಗದಂತೆ ಮೆಟ್ರೋ ದರ ಇಳಿಸುವ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ನಿಯಮಾನುಸಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸುತ್ತೇನೆ” ಎಂದು ತಿಳಿಸಿದರು.

ವಿಧಾನಸಭೆಯ ಪ್ರತಿಪಕ್ಷದ ನಾಯಕ ಆರ್ ಅಶೋಕ್, ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಸೇರಿದಂತೆ ‌ನಿಯೋಗದಲ್ಲಿ ಬಿಜೆಪಿ ಪಕ್ಷದ ಶಾಸಕರು, ಸಂಸದರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ...

ಅ.17ರಿಂದ ಮೂರು ದಿನಗಳ ಕಾಲ ಅದ್ದೂರಿ ಚಾಮರಾಜನಗರ ದಸರಾ

ಚಾಮರಾಜನಗರದಲ್ಲಿ ಅಕ್ಟೋಬರ್ 17, 18 ಮತ್ತು 19ರಂದು ಮೂರು ದಿನಗಳ ಕಾಲ...

ಧಾರವಾಡ | ಪಶ್ಚಿಮ ಪದವೀಧರರ ಕ್ಷೇತ್ರ ಕಣದಲ್ಲಿ 14 ಅಭ್ಯರ್ಥಿಗಳು; ಅ.23ರಂದು ಮತದಾನ

ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಗೆ ಅಕ್ಟೋಬರ್ 23ರಂದು...

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...