ಮೈಸೂರು | ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್: ಬಡಗಲಪುರ ನಾಗೇಂದ್ರ

Date:

ಮೈಸೂರಿನಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷರಾದ ಬಡಗಲಪುರ ನಾಗೇಂದ್ರ, ಯಾವುದೇ ಹೊಸ ಭರವಸೆ ಹುಟ್ಟು ಹಾಕದ ಬಜೆಟ್ ಎಂದು ಲೇವಡಿ ಮಾಡಿದರು.

- Advertisement -

ದೂರ ದೃಷ್ಟಿಯಿರದ ಕೇಂದ್ರ ಸರ್ಕಾರ ಬಜೆಟ್ ಮಂಡಿಸುವಲ್ಲಿ ಹೊಸತನವಿರದೆ ರೈತರನ್ನು ಕಡೆಗಣಿಸಿದೆ. 9ನೇ ಬಾರಿಗೆ ದೇಶದ ಬಜೆಟ್ ಮಂಡಿಸಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮತ್ತೊಂದು ಠುಸ್ ಪಟಾಕಿ ಹಾರಿಸಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

2026-27ನೇ ಸಾಲಿನ ಬಜೆಟ್ ದೇಶದ ಅಭಿವೃದ್ಧಿಗೆ ಪೂರಕವಾಗಿಲ್ಲ. ಈ ಸಾಲಿನ ಬಜೆಟ್ ನಲ್ಲೂ ಕೃಷಿಯನ್ನು ಸಂಪೂರ್ಣವಾಗಿ ನಿರ್ಲಕ್ಷ ಮಾಡಲಾಗಿದೆ. ಕಳೆದ ಸಾಲಿನ ಬಜೆಟ್ ನಲ್ಲಿ ಕೃಷಿಗೆ ₹1.70 ಲಕ್ಷ ಕೋಟಿ ನೀಡಲಾಗಿತ್ತು. ಆದರೆ, ಈ ಸಾಲಿನಲ್ಲಿ ಕೇವಲ ₹1.62 ಲಕ್ಷ ಕೋಟಿಗೆ ಇಳಿಸಿ ಕೃಷಿ ಕ್ಷೇತ್ರಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಕಿಡಿಕಾರಿದರು.

ಕಬ್ಬು ಬೆಳಗಾರರ ನಿರೀಕ್ಷೆ ಹುಸಿಯಾಗಿದೆ. ಗ್ರಾಮೀಣ ಮೂಲಭೂತ ಸೌಕರ್ಯಗಳಿಗೂ ಒತ್ತು ನೀಡದೆ, ಬಜೆಟ್ ನಲ್ಲಿ ಗ್ರಾಮೀಣ ಅಭಿವೃದ್ಧಿಗೆ ಯಾವುದೇ ಕಾರ್ಯಕ್ರಮಗಳೇ ಇಲ್ಲದಾಗಿದೆ. ರೈತರ ಹಿತ ಕಾಯುವಲ್ಲಿ ಕೇಂದ್ರ ಸರ್ಕಾರ ಮತ್ತೊಮ್ಮೆ ವಿಫಲವಾಗಿದ್ದು, ರೈತ ವಿರೋಧಿ ಸರ್ಕಾರ ಎನ್ನುವುದನ್ನು ಸಾಬೀತು ಮಾಡಿಕೊಂಡಿದೆ ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮೈಸೂರು | ಮನರೇಗಾ ಹೆಸರು ಬದಲಾವಣೆ; ಕೇಂದ್ರದ ವಿರುದ್ಧ ಅಹೋರಾತ್ರಿ ಧರಣಿ

ಎನ್.ಡಿ.ಎ ಅಂಗ ಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಿಗೆ ಹೆಚ್ಚು ಅನುದಾನ ನೀಡಿರುವ ಮೋದಿ, ಬಜೆಟ್ ನಲ್ಲಿ ಎಂದಿನಂತೆ ರಾಜ್ಯವನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ. ಅದಷ್ಟೇ ಅಲ್ಲದೇ, ದಕ್ಷಿಣ ಭಾರತವನ್ನು ಮರೆತಿದ್ದಾರೆ. ಈ ಬಜೆಟ್ ದೇಶದ ಸಾಲದ ಹೊರೆಯನ್ನು ಹೆಚ್ಚಿಸಿದೆ ಎಂದು ವಿಶ್ಲೇಸಿಸಿದರು.

‌

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಮುಖ್ಯ ಚುನಾವಣಾ ಆಯುಕ್ತರ ವಜಾಕ್ಕೆ ಆಗ್ರಹ: ಅ.15ರಿಂದ ಜಂತರ ಮಂಥರ್‌ನಲ್ಲಿ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಘನತೆಗೆ ಧಕ್ಕೆ ಉಂಟುಮಾಡಿ, ಅಕ್ರಮ ಚಟುವಟಿಕೆಗಳಿಗೆ ಕಾರಣರಾಗಿದ್ದಾರೆ...

ರಾಯಚೂರು | ಪೊತ್ನಾಳ ಗ್ರಂಥಾಲಯದಲ್ಲಿ ಮೂಲಸೌಕರ್ಯ ಕೊರತೆ: ಓದಲು ಬರುವ ವಿದ್ಯಾರ್ಥಿಗಳಿಗೆ ಪರದಾಟ

ಮಾನ್ವಿ ತಾಲ್ಲೂಕಿನ ಪೊತ್ನಾಳ ಗ್ರಾಮ ಪಂಚಾಯತ್ ವ್ಯಾಪ್ತಿಯ ಸರ್ಕಾರಿ ಶಾಲೆಯ ಮೈದಾನದಲ್ಲಿರುವ...

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...