ಬದುಕು ಕಳೆದುಕೊಂಡ ನಿರ್ಗತಿಕರಿಗೆ ಶಾಶ್ವತ ಮನೆ ನಿರ್ಮಿಸಿಕೊಡಿ: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹ

Date:

ಬ್ಯಾಟರಾಯನಪುರ ಕ್ಷೇತ್ರದ ಕೋಗಿಲು ಬಡಾವಣೆಯಲ್ಲಿ ಜಿಬಿಎ ಅಧಿಕಾರಿಗಳ ಸಂವಿಧಾನ ವಿರೋಧಿ ನಡೆಯಿಂದಾಗಿ ಬದುಕು ಕಳೆದುಕೊಂಡ 400ಕ್ಕೂ ಹೆಚ್ಚು ಕುಟುಂಬಗಳ ನಿರ್ಗತಿಕರಿಗೆ ರಾಜ್ಯ ಸರಕಾರ ಅದೇ ಸ್ಥಳದಲ್ಲಿ ಶಾಶ್ವತ ಮನೆಗಳನ್ನು ನಿರ್ಮಿಸಿಕೊಡಬೇಕು ಎಂದು ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಆಗ್ರಹಿಸಿದೆ.

- Advertisement -

ಮಂಗಳವಾರ ಪತ್ರಿಕಾ ಹೇಳಿಕೆ ನೀಡಿರುವ ಸಮಿತಿಯ ಕಾರ್ಯದರ್ಶಿ ಕುಮಾರ್ ಸಮತಳ, ಬೆಂಗಳೂರು ಉತ್ತರ, ಯಲಹಂಕ ತಾಲೂಕು, ಕೋಗಿಲು ಗ್ರಾಮದ ಸರ್ವೇ ನಂಬರ್ 99ರ ಸರಕಾರಿ ಭೂಮಿಯಲ್ಲಿ ದಲಿತರು, ಅಲ್ಪಸಂಖ್ಯಾತರು ಮತ್ತು ಹಿಂದುಳಿದ ವಸತಿ ರಹಿತರು ವಾಸಕ್ಕಾಗಿ ಮನೆಗಳನ್ನು ಕಟ್ಟಿಕೊಂಡು ಸುಮಾರು 25-30 ವರ್ಷಗಳಿಂದ ವಾಸವಿದ್ದರು ಮತ್ತು ಸ್ಥಳದ ಮಂಜೂರಾತಿಗಾಗಿ 94ಸಿಸಿ ಅಡಿಯಲ್ಲಿ ಅರ್ಜಿಗಳನ್ನು ಸಲ್ಲಿಸಿ, ಸರಕಾರದಿಂದ ತಾತ್ಕಾಲಿಕ ಹಕ್ಕುಪತ್ರಗಳನ್ನು ಪಡೆದಿದ್ದರು ಎಂದು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ‘ನಮ್ಮನ್ನ ಎಲ್ಲಿಗೆ ಕಳುಹಿಸುತ್ತೀರಿ?’: ತಗ್ಗಿನ ಬೇಲಿಯ...

92ಕ್ಕೂ ಅಧಿಕ ಸ್ಲಂ ಕುಟುಂಬಗಳ ಬದುಕು ಕೇವಲ ಜಮೀನಿನ ಹಕ್ಕಿನ ಪ್ರಶ್ನೆಯಲ್ಲ; ಅವರ ಸುರಕ್ಷಿತ ಓಡಾಟ, ಕುಡಿಯುವ ನೀರು ಹಾಗೂ ನಿತ್ಯದ ಬದುಕಿನ ಹಕ್ಕಿನ ಪ್ರಶ್ನೆಯೂ ಹೌದು. ನ್ಯಾಯಾಲಯದ ವಿಚಾರಣೆ ಅಂತಿಮಗೊಳ್ಳುವವರೆಗೆ ಯಾವುದೇ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ ಬಿಡುಗಡೆಯಾದ ಚುನಾವಣಾ ಆಯೋಗದ ಪತ್ರಿಕಾ ಪ್ರಕಟಣೆ, ತಪ್ಪುಗಳನ್ನು ತಿದ್ದುವ ಬದಲು ವ್ಯವಸ್ಥೆಯ ಲೋಪಗಳಿಗೆ ತೇಪೆ ಹಚ್ಚುವ ಯತ್ನದಂತೆ ಕಾಣುತ್ತಿದೆ. ದೇಶದ ಇತಿಹಾಸದಲ್ಲೇ...

ಹೊರಟ್ಟಿ ಅವರ ಹೋರಾಟದ ಬದುಕು ಮತ್ತು ಅವರ ಭಕ್ತ...

ಗ್ಯಾರಂಟಿ ಯೋಜನೆಗಳಿಂದ ಕೂಲಿ ಕಾರ್ಮಿಕರು ಸಿಗುತ್ತಿಲ್ಲವೆಂಬ ಬಸವರಾಜ ಹೊರಟ್ಟಿ ಅವರ ಹೇಳಿಕೆ ಮತ್ತು ಅದಕ್ಕೆ ಸಿಕ್ಕ ಸಾರ್ವಜನಿಕ ಚಪ್ಪಾಳೆಗಳು, ಕೇವಲ ಹಸಿವನ್ನೇ ಶ್ರಮದ ಇಂಧನವನ್ನಾಗಿ ನೋಡುವ ಸಮಾಜದ ಕ್ರೂರ ಮನಸ್ಥಿತಿಯನ್ನು ಅನಾವರಣಗೊಳಿಸುತ್ತವೆ. ಬಸವರಾಜ ಹೊರಟ್ಟಿ...

ಈ ನಡುವೆ ಸುಳಿವು ನೀಡದೇ ನೀಡಿರುವ ತಾತ್ಕಾಲಿಕ ಹಕ್ಕುಪತ್ರಗಳನ್ನೂ ರದ್ದುಪಡಿಸಿದ್ದಾರೆ. ಅಲ್ಲಿನ ವಾಸಸ್ತರಿಗೆ ಮೂರು ತಿಂಗಳು ಮುಂಚಿತವಾಗಿ ಯಾವುದೇ ನೊಟೀಸನ್ನೂ ನೀಡದೇ, ಯಾವುದೇ ಮುನ್ಸೂಚನೆಯೂ ಇಲ್ಲದೆ, ಅಲ್ಲಿನ ಬಡ ಕುಟುಂಬಗಳು ಕೂಲಿನಾಲಿ ಮಾಡಿ ಸಂಗ್ರಹಿಸಿಟ್ಟುಕೊಂಡಿದ್ದ ಆಹಾರ ಪದಾರ್ಥಗಳು, ಬಟ್ಟೆಬರೆ, ಗೃಹ ಬಳಕೆ ವಸ್ತುಗಳನ್ನು ತೆಗೆದುಕೊಳ್ಳಲೂ ಅವಕಾಶ ಕೊಡದೆ, ಉತ್ತರ ಪ್ರದೇಶದ ಬುಲ್ಡೋಜರ್ ಸರಕಾರದಂತೆ, ಜಿಬಿಎ ಅಧಿಕಾರಿಗಳು, ಪೊಲೀಸ್ ಬಲದೊಂದಿಗೆ ಏಕಾಏಕಿ ಮನೆಗಳನ್ನು ಧ್ವಂಸ ಮಾಡಿದ್ದಾರೆ ಎಂದು ಕುಮಾರ್ ಸಮತಳ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಂದಾಯ ಸಚಿವರ ಸ್ವಕ್ಷೇತ್ರದಲ್ಲಿಯೇ ಇಂತಹ ಘೋರ ಹಾಗೂ ಅಮಾನವೀಯ ಕೃತ್ಯ ನಡೆದಿರುವುದು ಅತ್ಯಂತ ಶೋಚನೀಯ. ಈ ದುಷ್ಕೃತ್ಯದಿಂದಾಗಿ ನೆಲೆ ಕಳೆದುಕೊಂಡ ಬಡ ಕುಟುಂಬಗಳು ಮಕ್ಕಳು, ಮುದುಕರಾದಿಯಾಗಿ ಚಳಿ, ಗಾಳಿ, ಬಿಸಿಲೆನ್ನದೆ ಅಲ್ಲಿಯೇ ನಿರ್ವಸಿತರಾಗಿ ಪರಿತಪಿಸುವಂತಾಗಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಈ ದುರುದ್ದೇಶಪೂರಿತ, ಪೂರ್ವಯೋಜಿತ ದುಷ್ಕೃತ್ಯವನ್ನು ಬಲವಾಗಿ ಖಂಡಿಸುತ್ತೇವೆ ಎಂದು ಅವರು ಹೇಳಿದ್ದಾರೆ.

ಇದನ್ನು ಓದಿದ್ದೀರಾ? ಕೊಲೆ ಪ್ರಕರಣದಲ್ಲಿ ಅಪರಾಧ ಸಾಬೀತಾದರೂ ಮಹಿಳೆಗೆ ಇಲ್ಲ ‘ಶಿಕ್ಷೆ’: ಮಂಗಳೂರು ನ್ಯಾಯಾಲಯದಿಂದ ವಿಶಿಷ್ಟ ತೀರ್ಪು!

ಬಲವಂತದ ತೆರವು ಕಾರ್ಯಾಚರಣೆಯಿಂದಾಗಿ ವಸತಿ ಕಳೆದುಕೊಂಡ ಎಲ್ಲ ಕುಟುಂಬಗಳಿಗೂ ಕೂಡಲೇ ವಾಸಯೋಗ್ಯ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿಕೊಟ್ಟು, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿಕೊಡಬೇಕು. ತಿಂಗಳಿಗಾಗುವಷ್ಟು ಆಹಾರ ಸಾಮಗ್ರಿಗಳನ್ನು ಪ್ರತಿ ತಿಂಗಳೂ ಸರಕಾರವೇ ಪೂರೈಸಬೇಕು ಎಂದು ಕುಮಾರ್ ಸಮತಳ ಆಗ್ರಹಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಪ್ರೀತಿಸಿದ ಯುವತಿಯನ್ನೇ ಮದುವೆಯಾಗಲು ಪಟ್ಟು: ಟವರ್ ಏರಿದ ಯುವಕ!

ತಾನು ಪ್ರೀತಿಸಿದ ಯುವತಿಯನ್ನೇ ಮದುವೆಯಾಗಬೇಕು ಎಂದು ಪಟ್ಟು ಹಿಡಿದ ಯುವಕನೊಬ್ಬ, ಮದುವೆಗೆ...

ಅಳಿವಿನ ಅಂಚಿನಲ್ಲಿ ಅಕ್ಕಸಾಲಿಗರ ಕುಲಕಸುಬು: ಸರ್ಕಾರದ ನೆರವಿಗೆ ಚಿನ್ನ-ಬೆಳ್ಳಿ ಕೆಲಸಗಾರರ ಆಗ್ರಹ

ಒಮ್ಮೆ ರಾಜಾಶ್ರಯ ಪಡೆದಿದ್ದ ಪಾರಂಪರಿಕ ಕುಲಕಸುಬುಗಳಲ್ಲಿ ಒಂದಾಗಿದ್ದ ಚಿನ್ನ ಮತ್ತು ಬೆಳ್ಳಿ...

ಕಲಬುರಗಿ | ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ: ಆರೋಪಿಗೆ 20 ವರ್ಷ ಕಠಿಣ ಕಾರಾಗೃಹ

ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ...

ಗದಗ | ಶೈಕ್ಷಣಿಕ ಸಂಯೋಜಕರನ್ನು ಆಯ್ಕೆ ಮಾಡಿಕೊಳ್ಳದಿದ್ದರೆ ಹೋರಾಟ: ಹನಮಂತ ಕಲ್ಮನಿ ಎಚ್ಚರಿಕೆ

"ಅಕ್ಟೋಬರ್ ಮೊದಲ ವಾರದೊಳಗೆ ನಾನ್ ಯುಜಿಸಿ ಅತಿಥಿ ಉಪನ್ಯಾಸಕರನ್ನು ಶೈಕ್ಷಣಿಕ ಸಂಯೋಜಕರನ್ನಾಗಿ...