ನೂತನಚೇಳೂರು ತಾಲ್ಲೂಕು ನ್ಯಾಯಾಲಯ ಶೀಘ್ರ ಪ್ರಾರಂಭಕ್ಕೆ ಕಟ್ಟಡ ಪರಿಶೀಲನೆ

Date:

ಬಾಗೇಪಲ್ಲಿ:-ತಾಲ್ಲೂಕು ನಿಂದ ಬೇರ್ಪಟ್ಟು ನೂತನವಾಗಿ ಅಸ್ತಿತ್ವಕ್ಕೆ ಬಂದಿರುವ ಚೇಳೂರು ತಾಲ್ಲೂಕಿನಲ್ಲಿ ಶೀಘ್ರದಲ್ಲೇ ನ್ಯಾಯಾಲಯದ ಕಲಾಪಗಳನ್ನು ಆರಂಭಿಸಲು ಉದ್ದೇಶಿಸಲಾಗಿದ್ದು, ಶುಕ್ರವಾರ ನ್ಯಾಯಾಧೀಶರು ಪಟ್ಟಣದ ವಿವಿಧ ಬಾಡಿಗೆ ಕಟ್ಟಡಗಳನ್ನು ಪರಿಶೀಲಿಸಿದರು.

ಬಾಗೇಪಲ್ಲಿ ತಾಲ್ಲೂಕು ಸಿವಿಲ್ ನ್ಯಾಯಾಲಯದ ನ್ಯಾಯಾಧೀಶರಾದ ಮಂಜುನಾಥಾಚಾರಿ ಹಾಗೂ ಹಿರಿಯ ಶ್ರೇಣಿ ನ್ಯಾಯಾಧೀಶರಾದ ಭಾರತಿ ಅವರು ಜಂಟಿಯಾಗಿ ಚೇಳೂರು ಪಟ್ಟಣದ ವಿವಿಧೆಡೆ ಭೇಟಿ ನೀಡಿ, ನ್ಯಾಯಾಲಯದ ಕಾರ್ಯನಿರ್ವಹಣೆಗೆ ಪೂರಕವಾದ ಸ್ಥಳಗಳ ಬಗ್ಗೆ ಮಾಹಿತಿ ಪಡೆದರು.

- Advertisement -

ಈ ವೇಳೆ ಮಾತನಾಡಿದ ನ್ಯಾಯಾಧೀಶರು ತಾಲ್ಲೂಕಿನ 12 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನರಿಗೆ ಅನುಕೂಲವಾಗುವ ನಿಟ್ಟಿನಲ್ಲಿ, ಸಾರಿಗೆ ಸಂಪರ್ಕ ಲಭ್ಯವಿರುವ ಸ್ಥಳದಲ್ಲಿ ತಾತ್ಕಾಲಿಕವಾಗಿ ಬಾಡಿಗೆ ಕಟ್ಟಡದಲ್ಲಿ ನ್ಯಾಯಾಲಯ ಆರಂಭಿಸಲು ಪರಿಶೀಲನೆ ನಡೆಸಲಾಗುತ್ತಿದೆ. ಬಾಗೇಪಲ್ಲಿ ರಸ್ತೆಯಲ್ಲಿರುವ ಒಂದು ಸುಸಜ್ಜಿತ ಕಟ್ಟಡ ಸೇರಿದಂತೆ ಇತರ ಸ್ಥಳಗಳನ್ನು ವೀಕ್ಷಿಸಲಾಗಿದೆ. ರಾಜ್ಯ ಹೈಕೋರ್ಟ್‌ನ ನಿರ್ದೇಶನದಂತೆ ಈ ಪ್ರಕ್ರಿಯೆ ನಡೆಯುತ್ತಿದೆ ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

ಚೇಳೂರು ತಾಲ್ಲೂಕು ವ್ಯಾಪ್ತಿಯ 12 ಗ್ರಾ.ಪಂಗಳು ಈ ಹಿಂದೆ ಚಿಂತಾಮಣಿ ಹಾಗೂ ಬಾಗೇಪಲ್ಲಿ ವ್ಯಾಪ್ತಿಗೆ ಬರುತ್ತಿದ್ದವು. ಯಾವ ಕಡೆ ಪ್ರಯಾಣ ಬೆಳೆಸಿದರು 50 ರಿಂದ 60 ಕಿ.ಲೋ.ಮೀಟರ್ ಹೋಗಿ ಬರುವುದಕ್ಕೆ ಅನಾನುಕೂಲ ಹಾಗೂ ಸಮಯ ವ್ಯರ್ಥ ಚೇಳೂರು ತಾಲ್ಲೂಕಿನಲ್ಲಿ ಇಲ್ಲಿನ ಜಮೀನು ವಿವಾದ, ಚೆಕ್ ಬೌನ್ಸ್, ಕೌಟುಂಬಿಕ ಕಲಹ ಸೇರಿದಂತೆ ನೂರಾರು ಪ್ರಕರಣಗಳು ಬಾಕಿ ಉಳಿದಿವೆ.

ಇಲ್ಲಿಯೇ ನ್ಯಾಯಾಲಯ ಸ್ಥಾಪನೆಯಾಗುವುದರಿಂದ ಸ್ಥಳೀಯರಿಗೆ ಹಣ ಮತ್ತು ಸಮಯದ ಉಳಿತಾಯವಾಗಲಿದೆ. ಕಟ್ಟಡದ ಲಭ್ಯತೆ, ವಸತಿ ಸೌಕರ್ಯಗಳ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಶೀಘ್ರದಲ್ಲೇ ಜಿಲ್ಲಾ ನ್ಯಾಯಾಧೀಶರಿಗೆ ಮಾಹಿತಿ ಸಲ್ಲಿಸಲಾಗುವುದು ಎಂದು ತಿಳಿಸಿದರು.

ಇದನ್ನು ಓದಿದ್ದೀರಾ..? ರೈತ ಮುಖಂಡ ಟಿ.ಎಂ ವೆಂಕಟೇಶ್ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

ಚೇಳೂರು ವಕೀಲರ ಸಂಘದ ಜಿ.ಎನ್.ಮಂಜುನಾಥ್, ಮಾಜಿ ಅಧ್ಯಕ್ಷ ಎ.ಜೆ.ಸುಧಾಕರ್, ನಂಜುಂಡಪ್ಪ, ಆರ್.ಐ.ಈಶ್ವರ್ ಸೇರಿದಂತೆ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೈದಿಗಳ ಕುಟುಂಬದ ಕತೆ: ವೃದ್ಧಾಪ್ಯ ಎಂದರೆ ಭಯ, ಸಾಲ, ನಿರ್ಲಕ್ಷ್ಯದ ಬದುಕು

“ವಿಚಾರಣಾಧೀನ ಕೈದಿಗಳ ಕುಟುಂಬಗಳಲ್ಲಿರುವ ಹಿರಿಯ ನಾಗರಿಕರು” ಎಂಬ ವಿಷಯದ ಕುರಿತು ಬೆಂಗಳೂರು...

ಬಾಗಲಕೋಟೆ |6 ಪಟ್ಟಣ ಪಂಚಾಯಿತಿಗಳ ಮೇಲೆ ಲೋಕಾಯುಕ್ತ ದಾಳಿ

ಇ-ಸ್ವತ್ತು, ಎನ್‌ಓಸಿ, ಕಟ್ಟಡ ಪರವಾನಗಿ ಸೇರಿದಂತೆ ವಿವಿಧ ಅಕ್ರಮಗಳ ಆರೋಪ, 41...

ಕೋಲಾರ | ಅಬಕಾರಿ ಇಲಾಖೆಯ ಅಕ್ರಮಗಳ ತನಿಖೆಗೆ ಆಗ್ರಹ: ಕ್ರಮ ಕೈಗೊಳ್ಳದಿದ್ದರೆ ಅಮರಣಾಂತ ಉಪವಾಸ ಸತ್ಯಾಗ್ರಹದ ಎಚ್ಚರಿಕೆ

ಜಿಲ್ಲೆಯಲ್ಲಿ ಅಬಕಾರಿ ಇಲಾಖೆಯಲ್ಲಿ ನಡೆಯುತ್ತಿದೆ ಎನ್ನಲಾದ ಭ್ರಷ್ಟಾಚಾರ ಮತ್ತು ಅಕ್ರಮಗಳ ಕುರಿತು...