ಬೀದರ್ | ಬಜೆಟ್‌ನಲ್ಲಿ ಕಲ್ಯಾಣ ಕರ್ನಾಟಕಕ್ಕೆ ಬಂಪರ್ ಕೊಡುಗೆ: ಸಚಿವ ಈಶ್ವರ ಖಂಡ್ರೆ

Date:

Advertisements

ಕಲ್ಯಾಣ ಕರ್ನಾಟಕ ಭಾಗದಲ್ಲಿ 5,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿ ಕೈಗೊಳ್ಳುವುದಾಗಿ ಬಜೆಟ್‌ನಲ್ಲಿ ಪ್ರಕಟಿಸಲಾಗಿದೆ. ಇದು ಈ ಭಾಗದ ಜನರಲ್ಲಿ ಅಭಿವೃದ್ಧಿಯ ಭರವಸೆ ಮೂಡಿಸಿದೆ ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ.

ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, “ಕಲ್ಯಾಣ ಕರ್ನಾಟಕಕ್ಕೆ ಹೆಚ್ಚಿನ ಅನುದಾನ ನೀಡಿರುವುದು ಅಸಮತೋಲನ ನಿವಾರಣೆಗೆ ಪೂರಕವಾಗಿದೆ. ಈ ಹಿಂದೆ ಮಂಜೂರಾದ ಹಣವೂ ಖರ್ಚಾಗದೆ ಹಾಗೇ ಉಳಿಯುತ್ತಿತ್ತು. ನಮ್ಮ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ಬದ್ಧವಾಗಿದೆ. ಇದನ್ನು ಬಜೆಟ್‌ ಮೂಲಕ ಖಾತ್ರಿಪಡಿಸಲಾಗಿದೆ” ಎಂದು ಹೇಳಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದ ಸರ್ವತೋಮುಖ ಪ್ರಗತಿಗೆ ಪೂರಕವಾಗಿ ರಾಯಚೂರು ಬಳಿಯ ಕಲ್ಮಲಾ ಜಂಕ್ಷನ್‌ನಿಂದ ಸಿಂಧನೂರು ಬಳಿಯ ಬಳ್ಳಾರಿ–ಲಿಂಗಸುಗೂರು ರಸ್ತೆ ವೃತ್ತದವರೆಗೆ ಒಟ್ಟು 78 ಕಿ.ಮೀ. ಉದ್ದದ ರಸ್ತೆಯನ್ನು 1,696 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸುವುದಾಗಿ ಘೋಷಿಸಿರುವುದು ಈ ಭಾಗದ ಸಂಪರ್ಕಾಭಿವೃದ್ಧಿಯಲ್ಲಿ ಕ್ರಾಂತಿಯನ್ನೇ ತರಲಿದೆ” ಎಂದು ಅವರು ಹೇಳಿದ್ದಾರೆ.

Advertisements

“ಬೀದರ್‌ನಲ್ಲಿ ಕೃಷ್ಣಮೃಗ ಸಂರಕ್ಷಣಾ ಮೀಸಲು ಪ್ರದೇಶ ನಿರ್ಮಾಣ, ಕಲ್ಯಾಣ ಕರ್ನಾಟಕ ಭಾಗದ ಪ್ರವಾಸಿ ತಾಣಗಳಾದ ಹಂಪಿ, ಮೈಲಾರ, ಗಾಣಗಾಪುರ, ಸನ್ನತಿ ಮತ್ತು ಮಳಕೇಡ, ಬೀದರ್, ರಾಯಚೂರು, ಕಲಬುರಗಿ, ಕೋಟೆಗಳ ಸಮಗ್ರ ಅಭಿವೃದ್ಧಿಗೆ 75 ಕೋಟಿ ರೂ. ಒದಗಿಸಲಾಗಿದೆ. ಇದರಿಂದ ಪ್ರವಾಸಿಗರಿಗೆ ಉತ್ತಮ ಸೌಲಭ್ಯ ಕಲ್ಪಿಸಲು ಅನುವಾಗುತ್ತದೆ. ಪ್ರವಾಸಿಗರ ಸಂಖ್ಯೆ ಹೆಚ್ಚಳವಾಗುವುದರಿಂದ ಸ್ಥಳೀಯರಿಗೆ ಉದ್ಯೋಗ ಸೃಷ್ಟಿಗೆ ಮತ್ತು ಆರ್ಥಿಕ ಪ್ರಗತಿಗೆ ಉತ್ತೇಜನ ನೀಡುತ್ತದೆ” ಎಂದಿದ್ದಾರೆ.

“ಕಲ್ಯಾಣ ಕರ್ನಾಟಕ ಭಾಗದ ರಾಷ್ಟ್ರೀಯ ಸಂರಕ್ಷಿತ ಸ್ಮಾರಕಗಳಾದ ಹಂಪಿಯ ವಿಜಯ ವಿಠ್ಠಲ ದೇವಾಲಯ, ಬೀದರ್ ಕೋಟೆಯಲ್ಲಿ ರಾತ್ರಿಯ ವೇಳೆ 3ಡಿ ಪ್ರೊಜೆಕ್ಷನ್ ಮಲ್ಟಿ ಮೀಡಿಯಾ ಧ್ವನಿ ಬೆಳಕಿನ ಪ್ರದರ್ಶನ ಯೋಜನೆಯೂ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ 400 ಸಮುದಾಯ ಶೌಚಾಲಯ ಸಂಕೀರ್ಣ ನಿರ್ಮಾಣ ಮಾಡುವುದು ಕೂಡ ಈ ಭಾಗದ ನೈರ್ಮಲ್ಯ ಕಾಪಾಡುವಲ್ಲಿ ಮತ್ತು ಆರೋಗ್ಯ ರಕ್ಷಣೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X