ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ಆಕ್ಸಲ್ ಮುರಿದ ಪರಿಣಾಮ ಬಸ್ ಉರುಳಿ ಬಿದ್ದಿದೆ. ಓರ್ವ ಪ್ರಯಾಣಿಕ ಮೃತಪಟ್ಟಿದ್ದು, ಚಾಲಕ ಸೇರಿದಂತೆ ಹಲವರು ಗಾಯಗೊಂಡಿರುವ ಘಟನೆ ಸಿಂಧನೂರು ತಾಲೂಕಿನ ಮುಳ್ಳೂರು ಗ್ರಾಮದ ಬಳಿ ನಡೆದಿದೆ.
ಕೊಪ್ಪಳ ಸಾರಿಗೆ ಸಂಸ್ಥೆಯ ಘಟಕಕ್ಕೆ ಸೇರಿದ ಬಸ್ ಬೀದರ್‌ನಿಂದ ಮುದುಗಲ್ ಮಾರ್ಗವಾಗಿ ಕೊಪ್ಪಳಕ್ಕೆ ಹೋಗುವಾಗ ಮುಳ್ಳೂರು ಗ್ರಾಮದ ಹತ್ತಿರ ಬಸ್ ಆಕ್ಸೆಲ್ ತುಂಡಾಗಿ ರಸ್ತೆ ಮೇಲೆ ಉರುಳಿ ಬಿದ್ದಿದೆ.
ಪ್ರಯಾಣಿಕ ನಾಗಲಾಪೂರ ಗ್ರಾಮದ ಅಯ್ಯಪ್ಪ(35) ಎಂಬ ಯುವಕ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಗಾಯಗೊಂಡಿರುವ ಹತ್ತು ಪ್ರಯಾಣಿಕರಿಗೆ ತಾವರಗೇರಾ ಸರ್ಕಾರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳ ಆಸ್ಪತ್ರೆಗೆ ಕಳುಹಿಸಲಾಗಿದೆ. ಬಸ್ಸಿನಲ್ಲಿ ಒಟ್ಟು 85 ಪ್ರಯಾಣಿಕರಿದ್ದರು ಎಂದು ತಿಳಿದುಬಂದಿದೆ.
ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸಂಪಾದಕರ ಬಾಯಿ ಬಡಿಯುವುದು ವಿಕಟ ವಿಡಂಬನೆ
ಈ ಕುರಿತು ತುರ್ವಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ವರದಿ: ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್