ಅನ್ನಭಾಗ್ಯಕ್ಕೆ ರಾಜ್ಯದ ರೈತರು ಬೆಳೆದ ಭತ್ತ ಖರೀದಿಸಿ; ಸರ್ಕಾರಕ್ಕೆ ರೈತ ಸಂಘ ಒತ್ತಾಯ

Date:

ಸರ್ಕಾರದ ಗ್ಯಾರಂಟಿ ಯೋಜನೆಗಳು ಬಡಜನರ ಪರವಾಗಿವೆ. ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆ ಮಾಡಲು ರಾಜ್ಯದ ರೈತರು ಬೆಳೆದಿರುವ ಭತ್ತವನ್ನು ಖರೀದಿಸಬೇಕು. ಆಗ ಹೊರ ರಾಜ್ಯಗಳ ಮೇಲಿನ ಅವಲಂಬನೆ ತಪ್ಪುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಾಧ್ಯಕ್ಷ ಕುರುವ ಗಣೇಶ್ ಹೇಳಿದ್ದಾರೆ.

ದಾವಣಗೆರೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ” ನರಗುಂದ-ನವಲಗುಂದ ಹೋರಾಟದಲ್ಲಿ ಹುತಾತ್ಮಕರಾದ ರೈತರ ನೆನಪಿನಲ್ಲಿ ಜುಲೈ 21ರಂದು 43ನೇ ವರ್ಷದ ಹುತಾತ್ಮರ ದಿನಾಚರಣೆ ಹಾಗೂ ರೈತ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸಮಾವೇಶದಲ್ಲಿ ರೈತರ ಹಕ್ಕತ್ತಾಯಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರ ಹಕ್ಕೊತ್ತಾಯ ಸಲ್ಲಿಸಲಾಗುತ್ತದೆ” ಎಂದು ಹೇಳಿದ್ದಾರೆ.

“ಅನ್ನಭಾಗ್ಯ ಯೋಜನೆಗೆ ಹೊರ ರಾಜ್ಯದಿಂದ ಅಕ್ಕಿ ಖರೀದಿ ಮಾಡುವುದರ ಬದಲುಮ ರಾಜ್ಯದ ರೈತರು ಬೆಳೆದ ಅಕ್ಕಿ ಖರೀದಿಸಬೇಕು. ಅದೂ ಸಾಕಾಗದಿದ್ದರೆ, ರಾಗಿ,ಜೋಳ ಖರೀದಿಸಿ ವಿತರಿಸಬೇಕು. ಇದರಿಂದ ರಾಜ್ಯದ ರೈತರು ಆರ್ಥಿಕವಾಗಿ ಸಬಲರಾಗಲು ಸಾಧ್ಯವಾಗುತ್ತದೆ” ಎಂದು ತಿಳಿಸಿದ್ದಾರೆ.

“ರೈತರ ಉತ್ಪಾದನಾ ವೆಚ್ಚದ ಜೊತೆಗೆ ಡಾ. ಸ್ವಾಮಿನಾಥನ್ ವರದಿಯಂತೆ ಶೇ.50 ರಷ್ಟು ಲಾಭಾಂಶ ಸೇರಿಸಿ ಬೆಲೆ ನಿಗದಿ ಮಾಡಬೇಕು. ಟನ್‌ ಕಬ್ಬಿಗೆ ಕನಿಷ್ಠ 4,500 ರೂ ಬೆಲೆ ನಿಗಧಿ ಮಾಡಬೇಕು. ಮಹದಾಯಿ ಕಳಸ ಬಂಡೂರಿ ಯೋಜನೆಯನ್ನು ಶೀಘ್ರದಲ್ಲೇ ಕಾರ್ಯಗತಗೊಳಿಸಬೇಕು. ರೈತ ವಿರೋಧಿ ಮೂರು ಕೃಷಿ ಕಾಯ್ದೆಗಳನ್ನು ಕೂಡಲೇ ಹಿಂಪಡೆಯಬೇಕು” ಎಂದು ಆಗ್ರಹಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಷಣ್ಮುಖಪ್ಪ, ಹೊನ್ನೂರು ಮುನಿಯಪ್ಪ, ಬೀರಪ್ಪ,ಅಣ್ಣಪ್ಪ,ಅಭಿಲಾಷ್, ಮರುಳಸಿದ್ದಪ್ಪ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಫ್ಲಿಪ್‍ಕಾರ್ಟ್ ಕಂಪನಿಗೆ 17,632 ರೂ. ದಂಡ

ಫ್ಲಿಪ್‌ಕಾರ್ಟ್‌ ಮತ್ತು ಸಿಆಯ್‍ಜಿ ಎಫ್ಆಯ್‍ಎಲ್ ಲಿಮಿಟೆಡ್ ಕಂಪನಿಗಳಿಗೆ 17,632 ರೂ. ದಂಡ...

ದಕ್ಷಿಣ ಕನ್ನಡ | ಮಸೀದಿಗೆ ನುಗ್ಗಿ ‘ಜೈ ಶ್ರೀರಾಮ್’ ಘೋಷಣೆ; ಇಬ್ಬರು ಆರೋಪಿಗಳ ಬಂಧನ

ಹಿಂದುತ್ವ ಕೋಮುವಾದಿ ಕಾರ್ಯಕರ್ತರು ಮಸೀದಿಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ ಕೂಗಿ...

ಧಾರವಾಡ | ಅವಳಿ ನಗರಗಳಿಗೆ 5 ತಿಂಗಳಲ್ಲಿ 100 ಹೊಸ ಸಿಟಿ ಬಸ್‌ಗಳು ರಸ್ತೆಗಿಳಿಯಲಿವೆ: ಸಾರಿಗೆ ಸಚಿವ

ವಾಯವ್ಯ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಹುಬ್ಬಳ್ಳಿ-ಧಾರವಾಡದಲ್ಲಿ 45 ಕೋಟಿ...

ಧಾರವಾಡ | ಬಿಜೆಪಿ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಶ್ರೀರಾಮಸೇನೆ ಕಿಡಿ

ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಅವರು ದ್ವಿಮುಖ ನೀತಿ ಅನುಸರಿಸುತ್ತಿದ್ದಾರೆ. ಅಧಿಕಾರದಲ್ಲಿ...