ಬೈಂದೂರು | ವಿಶೇಷ ಚೇತನ ಮಕ್ಕಳ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಗುರುರಾಜ್ ಗಂಟಿಹೊಳೆ; ಮನೆಗೆ ಭೇಟಿ

Date:

Advertisements

ತಂದೆಯೋರ್ವರು ತನ್ನ ವಿಶೇಷ ಚೇತನ ಮಗುವನ್ನು ಹೆಗಲಮೇಲೆ ಕೂರಿಸಿಕೊಂಡು ತೋಡು ದಾಟುವ ದೃಶ್ಯ ಕಂಡ ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡಿತ್ತು. ಇದು ತನ್ನ ಕ್ಷೇತ್ರವ್ಯಾಪ್ತಿಯ ಯಳಜಿತ್‌ನಲ್ಲಿ ನಡೆದಿರುವುದು ಎಂಬುದನ್ನು ಖಚಿತಪಡಿಸಿಕೊಂಡ ಬಳಿಕ ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ಅವರು ಸ್ಥಳಕ್ಕೆ ಭೇಟಿ ನೀಡಿ,ಪೋಷಕರನ್ನು ಭೇಟಿ ಮಾಡಿದ್ದಾರೆ. ತುರ್ತು ಅಗತ್ಯಗಳಿಗೆ ಸ್ಪಂದಿಸಿ, ತಾತ್ಕಾಲಿಕ ವ್ಯವಸ್ಥೆ ರೂಪಿಸಿದರು.

“ಸರಿಯಾದ ಕಾಲು ಸಂಕ ವ್ಯವಸ್ಥೆ ಇಲ್ಲದೆ ಕ್ಷೇತ್ರದ ಕೆಲವು ಭಾಗದಲ್ಲಿ ಆಗುತ್ತಿರುವ ಸಮಸ್ಯೆ ಗಮನಕ್ಕೆ ಬಂದಿದೆ. ತುರ್ತಾಗಿ ಏನು ಮಾಡಬೇಕು ಎಂಬುದನ್ನು ನಿರ್ದೇಶನ ನೀಡಲಾಗಿದೆ. ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿಯಲ್ಲಿನ ಸಮಸ್ಯೆಯನ್ನು ಹತ್ತಿರದಿಂದ ಬಲ್ಲೆ. ತಾತ್ಕಾಲಿಕ ನೆಲೆಯಲ್ಲಿ ಏನೆಲ್ಲ ಪರಿಹಾರ ಕಾರ್ಯ ಸೂಚಿಸಲು ಸಾಧ್ಯವೋ ಅದನ್ನು ತುರ್ತಾಗಿ ಮಾಡುತ್ತಿದ್ದೇವೆ. ಶಾಶ್ವತ ವ್ಯವಸ್ಥೆಯನ್ನು(ಕಾಲುಸಂಕ) ರೂಪಿಸಲು ಯೋಜನೆ ಸಿದ್ಧಪಡಿಸಲಾಗುವುದು” ಎಂದು ಶಾಸಕ ಗುರುರಾಜ್ ಗಂಟಿಹೊಳೆ ಅವರು ಹೇಳಿದರು.

ಯಳಜಿತ್ ಗ್ರಾಮದ ಹುಲ್ಕಡ್ಕಿ ಗುಡಿಕೇರಿಯಲ್ಲಿ ವಾಸಿಸುತ್ತಿರುವ ಕುಟುಂಬದವರನ್ನು ಭೇಟಿ ಮಾಡಿ, ಮಳೆಗಾಲ ನಿಲ್ಲುವವರೆಗೆ ಮತ್ತು ಕಾಲುಸಂಕ ನಿರ್ಮಾಣ ಆಗುವವರೆಗೆ ಆ ಮಕ್ಕಳಿಗೆ ತೊಂದರೆ ಆಗಬಾರದೆಂದು ತಕ್ಷಣವೇ ಸ್ಥಳೀಯ ಕಾರ್ಯಕರ್ತರ ನೆರವಿನೊಂದಿಗೆ ಪ್ರತ್ಯೇಕ ಮನೆ ವ್ಯವಸ್ಥೆ ಮಾಡಲು ಯೋಜನೆ ರೂಪಿಸಿದರು.

Advertisements

ಸ್ವಂತ ಮನೆಯಲ್ಲಿಯೇ ವ್ಯವಸ್ಥೆಗೆ ಸಿದ್ಧ

ಇದು ಸಾಧ್ಯವಾಗದೇ ಇದ್ದಲ್ಲಿ ಶಾಸಕರು ಸ್ವತಃ ತಮ್ಮ ಮನೆಗೇ ಬಂದು ವಾಸಿಸಬಹುದು ಎಂದು ಮಕ್ಕಳಿಗೆ ಧೈರ್ಯ ತುಂಬಿದರು ಮತ್ತು ಯಾವುದೇ ಕಾರಣಕ್ಕೂ ಶಿಕ್ಷಣ ನಿಲ್ಲಿಸಬಾರದು ಎಂದು ಮನವಿ ಮಾಡಿದರು.

ಈ ಭಾಗದಲ್ಲಿ ಶೀಘ್ರದಲ್ಲೇ ಕಾಲು ಸಂಕ ನಿರ್ಮಿಸುವುದರೊಂದಿಗೆ, ಆ ಮಕ್ಕಳ ಆರೋಗ್ಯದ ಬಗ್ಗೆಯೂ ಮುಂದಿನ ದಿನಗಳಲ್ಲಿ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ತಿಳಿಸಿದ್ದಾರೆ.

ಬೈಂದೂರು ಕ್ಷೇತ್ರದಲ್ಲಿ ಕಾಲು ಸಂಕಗಳ ತುರ್ತು ಅಗತ್ಯತೆ ಹೆಚ್ಚಿದೆ. ಈ ನಿಟ್ಟಿನಲ್ಲಿ ಸಮೃದ್ಧ ಬೈಂದೂರು ಟ್ರಸ್ಟ್ ಹಾಗೂ ಬೆಂಗಳೂರಿನ ಅರುಣಾಚಲಂ ಟ್ರಸ್ಟ್ ಸಹಯೋಗದಲ್ಲಿ ಈಗಾಗಲೇ ಹಲವು ಕಡೆಗಳಲ್ಲಿ ಜಾಗ ಗುರುತಿಸಿ ವಿಶೇಷ ಮಾದರಿಯಲ್ಲಿ ಕಾಲು ಸಂಕ ನಿರ್ಮಾಣ ಮಾಡಲಾಗುತ್ತಿದೆ. ಎರಡು ಕಾಲು ಸಂಕಗಳು ಶೀಘ್ರ ಬಳಕೆಗೂ ಲಭ್ಯವಾಗಲಿದೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X