ಮಂಗಳೂರಿನ ಬ್ಲೂಬೆರಿ ಹಿಲ್ಸ್‌ ರಸ್ತೆಯಲ್ಲಿ ಟೆಕ್-ಪಾರ್ಕ್‌ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ: ಪ್ರಿಯಾಂಕ್‌ ಖರ್ಗೆ

Date:

ಮಂಗಳೂರು ನಗರದ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯಲ್ಲಿರುವ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್-ಪಾರ್ಕ್ ಉದ್ದೇಶಕ್ಕಾಗಿ ಪಿಪಿಪಿ ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಹಾಗೂ ಮಾಹಿತಿ ಮತ್ತು ತಂತ್ರಜ್ಞಾನ ಸಚಿವ ಪ್ರಿಯಾಂಕ್‌ ಖರ್ಗೆ ತಿಳಿಸಿದ್ದಾರೆ.

- Advertisement -

“ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ತಾಲೂಕಿನ ದೇರೆಬೈಲ್‌ನ ಬ್ಲೂಬೆರಿ ಹಿಲ್ಸ್ ರಸ್ತೆಯ ಸರ್ವೇ ನಂಬರ್ 129 ಮತ್ತು 113ರಲ್ಲಿನ 3.285 ಎಕರೆ ಭೂಮಿಯನ್ನು ವಾಣಿಜ್ಯ ಕಚೇರಿ ಟೆಕ್‌ಪಾರ್ಕ್ ಆಗಿ ಸಾರ್ವಜನಿಕ ಖಾಸಗಿ ಸಹಭಾಗಿತ್ವ(ಪಿಪಿಪಿ) ಮಾದರಿಯಡಿಯಲ್ಲಿ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ(ಡಿಬಿಎಫ್‌ಒಟಿ) ಆಧಾರದ ಮೇಲೆ ಅಭಿವೃದ್ಧಿಪಡಿಸಲು ಸಚಿವ ಸಂಪುಟ ನಿರ್ಣಯಿಸಿದೆ” ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಮಂಗಳೂರು | ಬಾಕಿ ಉಳಿಸಿದ ಕನಿಷ್ಟ ಕೂಲಿ ಪಾವತಿಗೆ ಆಗ್ರಹಿಸಿ ಬೀಡಿ ಡಿಪೊಗೆ ಮುತ್ತಿಗೆ

ಸಚಿವ ಪ್ರಿಯಾಂಕ್‌ ಖರ್ಗೆ ಅವರು ಕಳೆದ ತಿಂಗಳು 24ರಂದು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಂಗಳೂರಿನಲ್ಲಿ ಟೆಕ್‌ ಪಾರ್ಕ್‌ ನಿರ್ಮಾಣಕ್ಕೆ ಅನುಮತಿ ನೀಡಲು ಭರವಸೆ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...