ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ನಿರ್ಮಾಣವಾಗುತ್ತಿರುವ ನೂತನ ಅನುಭವ ಮಂಟಪದ ₹742 ಕೋಟಿ ಪರಿಷ್ಕೃತ ಅಂದಾಜಿಗೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ. ಖಂಡ್ರೆ ಹೇಳಿದ್ದಾರೆ.
ಭೂ ವಿವಾದದಿಂದಾಗಿ ಅನುಭವ ಮಂಟಪಕ್ಕೆ ಆರಂಭದಲ್ಲಿ ನಿರ್ಧರಿಸಲಾಗಿದ್ದ ಸ್ಥಳದಲ್ಲಿ ಕಾಮಗಾರಿ ನಡೆಸಲಾಗದೆ, ಬೇರೆ ಸ್ಥಳದಲ್ಲಿ ಕಾಮಗಾರಿ ಮಾಡಬೇಕಾಗಿ ಬಂದ ಹಿನ್ನೆಲೆಯಲ್ಲಿ ಹಾಗೂ ಜಿಎಸ್‌ಟಿ ಶೇ18ಕ್ಕೆ ಏರಿಕೆಯಾದ ಕಾರಣ ಯೋಜನಾ ವೆಚ್ಚ ₹612 ಕೋಟಿ ಬದಲಾಗಿ ₹742 ಕೋಟಿ ರೂ.ಗೆ ಹೆಚ್ಚಳವಾಗಿದ್ದು, ಇದಕ್ಕೆ ಇಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆʼ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪರಿಷ್ಕೃತ ಅಂದಾಜು ವೆಚ್ಚದಂತೆ ₹132 ಕೋಟಿ ರೂ. ಹೆಚ್ಚಳವಾಗಿದ್ದು, ಇದಕ್ಕೆ ಅನುಮೋದನೆ ನೀಡಿದ ಸಚಿವ ಸಂಪುಟದ ಎಲ್ಲ ಸಚಿವರಿಗೆ ಮತ್ತು ಭೂಮಿ ನೀಡಿದ ಕಂದಾಯ ಇಲಾಖೆಗೆ ಸಚಿವ ಈಶ್ವರ ಖಂಡ್ರೆ ಧನ್ಯವಾದ ಅರ್ಪಿಸಿದ್ದಾರೆ.
2026ರ ವರ್ಷಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ ಮುಖ್ಯಮಂತ್ರಿಗಳ ಅಮೃತ ಹಸ್ತದಿಂದ ಉದ್ಘಾಟನೆ ಮಾಡಿಸಲು ಕಾಮಗಾರಿಗೆ ವೇಗ ನೀಡಲಾಗುವುದು ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : ಬೀದರ್| ʼಶಕ್ತಿ ಯೋಜನೆʼಗೆ 2 ವರ್ಷ: 8.29 ಕೋಟಿ ಮಹಿಳೆಯರು ಪ್ರಯಾಣ; ₹237.80 ಕೋಟಿ ಆದಾಯ