ಸಚಿವ ಸಂಪುಟ ಸಭೆ | ಹೊಸದಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್‌ ಊಟದ ದರ ಹೆಚ್ಚಳ

Date:

  • ಗ್ರಾಹಕರಿಂದ 27 ರೂ. ಸಂಗ್ರಹ, ಉಳಿದ 33 ರೂ. ಸರ್ಕಾರದಿಂದ ಸಬ್ಸಿಡಿ
  • ಹೊಸದಾಗಿ ನಿರ್ಮಾಣವಾಗುವ ಕ್ಯಾಂಟೀನ್​​ಗಳಲ್ಲಿ ಹೊಸ ದರ ಅನ್ವಯ

ಇಂದಿರಾ ಕ್ಯಾಂಟೀನ್‌ನಲ್ಲಿ ನೀಡುತ್ತಿದ್ದ ಊಟದ ದರ ಹೆಚ್ಚಿಸಲು ಶನಿವಾರ ನಡೆದ ಸಂಪುಟ ಸಭೆ ನಿರ್ಧರಿಸಿದ್ದು, ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ.

‌ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಸ ಸಚಿವ ಸಂಪುಟ ಸಭೆಯ ನಂತರ ಸಚಿವ ಸಂಪುಟದ ನಿರ್ಣಯಗಳ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು ಸಮ್ಮೇಳನ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.

“ಇಂದಿರಾ ಕ್ಯಾಂಟೀನ್​ಗಳಲ್ಲಿ ಒಂದು ಊಟದ ಬೆಲೆ 60 ರೂ. ದರ ನಿಗದಿ ಮಾಡಲಾಗಿದೆ. ಆ ಮೂಲಕ ಗ್ರಾಹಕರಿಂದ 27 ರೂ. ಸಂಗ್ರಹಿಸಲಿದ್ದು, ಉಳಿದ 33 ರೂ. ಸಬ್ಸಿಡಿಯನ್ನು ಸರ್ಕಾರ ನೀಡಲಿದೆ. ರಾಜ್ಯಾದ್ಯಂತ ನೂತನವಾಗಿ ನಿರ್ಮಾಣವಾಗಲಿರುವ ಇಂದಿರಾ ಕ್ಯಾಂಟೀನ್​​ಗಳಲ್ಲಿ ಈ ಹೊಸ ದರ ಇರಲಿದೆ. ಇನ್ನು ಬಿಬಿಎಂಪಿ ವ್ಯಾಪ್ತಿಯ ಇಂದಿರಾ ಕ್ಯಾಂಟೀನ್​ಗಳಲ್ಲಿ ಹಳೇ ದರ ಮುಂದುವರಿಕೆ ಆಗಲಿದೆ” ಎಂದು ತಿಳಿಸಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

“ಬಿಬಿಎಂಪಿ ಹೊರತುಪಡಿಸಿ ಸ್ಥಳೀಯ ಸಂಸ್ಥೆಗಳಲ್ಲಿ ಹೊಸದಾಗಿ 188 ಇಂದಿರಾ ಕ್ಯಾಂಟೀನ್​ ತೆರೆಯಲು ಒಪ್ಪಿಗೆ ನೀಡಲಾಗಿದೆ. ಹೊಸ ಇಂದಿರಾ ಕ್ಯಾಂಟೀನ್​ಗೆ 27 ಕೋಟಿ ರೂ. ನೀಡಲು ಅನುಮೋದಿಸಲಾಗಿದೆ. ಸ್ಥಳೀಯ ತಿಂಡಿ ತಿನಿಸು ಗಮನದಲ್ಲಿಟ್ಟುಕೊಂಡು ಇಂದಿರಾ ಕ್ಯಾಂಟೀನ್ ಮೆನು ಇರಲಿದೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ ಚಲೋ | ಪ್ರಜ್ವಲ್‌ನನ್ನು 54ನೇ ಭಯೋತ್ಪಾದಕನೆಂದು ಹೆಸರಿಸಬೇಕು: ವಕೀಲ ಎಸ್‌ ಬಾಲನ್

ಭಾರತದಲ್ಲಿ 53 ಮಂದಿಯನ್ನು ಭಯೋತ್ಪಾದಕರು ಎಂದು ಸರ್ಕಾರ ಪಟ್ಟಿಮಾಡಿದೆ. ಪ್ರಜ್ವಲ್ ರೇವಣ್ಣ...

ಹಾಸನ ಚಲೋ | ಬಳ್ಳಾರಿ ರೀತಿಯಲ್ಲಿ ಹಾಸನದಲ್ಲಿರುವ ಪಾಳೆಗಾರಿಕೆಯನ್ನು ಬಗ್ಗುಬಡಿಯಬೇಕು: ಎಸ್‌.ಆರ್ ಹಿರೇಮಠ್‌

ದೇಶದಲ್ಲಿ ಮೂರು ಉತ್ಕೃಷ್ಟ ಸತ್ಯಾಗ್ರಹಗಳು ನಡೆದಿವೆ. ಒಂದು, ಅಂಬೇಡ್ಕರ್ ನೇತೃತ್ವದ ಮಹಾರ್...

ದೇಶ ಉಳಿಸಲು 100 ಬಾರಿ ಜೈಲಿಗೆ ಹೋಗಲು ಸಿದ್ಧ: ಅರವಿಂದ್ ಕೇಜ್ರಿವಾಲ್

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಅಬಕಾರಿ ನೀತಿ ಪ್ರಕರಣದಲ್ಲಿ ನೀಡಲಾದ...

ಹಾಸನ ಚಲೋ | ಪ್ರಜ್ವಲ್-ರೇವಣ್ಣಗೆ ‘ಓನ್ಲೀ ಜೈಲ್ – ನೋ ಬೇಲ್’ ಎಂದು ಸರ್ಕಾರ ಹೇಳಬೇಕು: ಸುಭಾಷಿಣಿ ಅಲಿ

ಹಾಸನದಲ್ಲಿ ನಡೆದಿರುವ ಲೈಂಗಿಕ ದಬ್ಬಾಳಿಕೆಯನ್ನು ಖಂಡಿಸಿ, ಸಂತ್ರಸ್ತೆಯರಿಗೆ ಧೈರ್ಯ ತುಂಬಲು ನಾವಿಲ್ಲಿದ್ದೇವೆ....