ಡಾ.ಬಿ.ಆರ್.ಅಂಬೇಡ್ಕರ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜೀನಾಮೆಗೆ ಆಗ್ರಹಿಸಿ ಜನವರಿ 9ರಂದು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್‌ವಾದಿಗಳ ಹೋರಾಟ ಸಮಿತಿಯಿಂದ ಬೀದರ್ ಬಂದ್‌ಗೆ ಕರೆ ನೀಡಲಾಗಿದೆ.
ನಗರದ ಪ್ರವಾಸಿ ಮಂದಿರದಲ್ಲಿ ಶನಿವಾರ ನಡೆದ ಸಭೆಯಲ್ಲಿ ಬೀದರ್ ಬಂದ್ ಮಾಡಲು ತೀರ್ಮಾನಿಸಲಾಗಿದೆ ಎಂದು ಸಮಿತಿಯ ಪದಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯಸಭೆಯಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ವಿರುದ್ಧ ಕೀಳಾಗಿ ಮಾತನಾಡಿದ್ದ ಅಮಿತ್ ಶಾ ಅವರು ಕ್ಷಮೆಯಾಚಿಸಿ, ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಡಿ.24ರಂದು ನಗರದಲ್ಲಿ ಪ್ರತಿಭಟನೆ ನಡೆಸಿ ರಾಷ್ಟ್ರಪತಿ ಹಾಗೂ ಪ್ರಧಾನ ಮಂತ್ರಿಗೆ ಮನವಿ ಸಲ್ಲಿಸಲಾಗಿದೆ. ಆದರೆ ಅಮಿತ್ ಶಾ ಕ್ಷಮೆಯೂ ಕೇಳಿಲ್ಲ, ರಾಜೀನಾಮೆಯೂ ನೀಡಿಲ್ಲ. ಹೀಗಾಗಿ ಬೀದರ್ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಿತಿಯ ಅಧ್ಯಕ್ಷ ಉಮೇಶಕುಮಾರ ಸ್ವಾರಳ್ಳಿಕರ್ ತಿಳಿಸಿದ್ದಾರೆ.
ʼಡಾ.ಬಿ.ಆರ್.ಅಂಬೇಡ್ಕರ್‌ವಾದಿಗಳು, ಪ್ರಗತಿಪರರು, ಹೋರಾಟಗಾರರು, ಕನ್ನಡಪರ, ದಲಿತಪರ ಹೋರಾಟಗಾರರು, ಸರ್ವಧರ್ಮ ಗುರುಗಳು, ವ್ಯಾಪಾರಸ್ಥರು, ಆಟೊ ಚಾಲಕರು, ಸಾಹಿತಿಗಳು, ಚಿಂತಕರು, ಕಾರ್ಮಿಕರು, ಯುವಕ-ಯುವತಿಯರು ಹಾಗೂ ವಿದ್ಯಾರ್ಥಿಗಳು ʼಬೀದರ ಬಂದ್ʼ ಗೆ ಬೆಂಬಲ ನೀಡಬೇಕು ಎಂದು ಸ್ವಾಭಿಮಾನಿ ಡಾ.ಬಿ.ಆರ್.ಅಂಬೇಡ್ಕರ್ ಹೋರಾಟ ಸಮಿತಿಯ ಗೌರವಾಧ್ಯಕ್ಷ ರಾಜಕುಮಾರ ಮೂಲಭಾರತಿ ಮನವಿ ಮಾಡಿದ್ದಾರೆ.
ಈ ಸುದ್ದಿ ಓದಿದ್ದೀರಾ? ಬೀದರ್ | ಆನ್‌ಲೈನ್ ಗೇಮಿಂಗ್ : ₹15 ಲಕ್ಷಕ್ಕೂ ಅಧಿಕ ಹಣ ಕಳೆದುಕೊಂಡ ಯುವಕ ಪೆಟ್ರೊಲ್ ಸುರಿದುಕೊಂಡು ಆತ್ಮಹತ್ಯೆ
ಸಭೆಯಲ್ಲಿ ಸಮಿತಿಯ ಕಾರ್ಯಾಧ್ಯಕ್ಷ ವಿಷ್ಣುವರ್ಧನ್ ವಾಲ್ದೋಡ್ಡಿ, ಅಭಿ ಕಾಳೆ, ಪ್ರಧಾನ ಕಾರ್ಯದರ್ಶಿ ಮಹೇಶ ಗೋರನಾಳಕರ್, ಕಲ್ಯಾಣರಾವ ಭೋಸ್ಲೆ, ಚಂದ್ರಕಾಂತ ನಿರಾಟೆ ಇದ್ದರು.