ಮೈಸೂರು | ಅಂಗಡಿ ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಬಳಕೆಗಾಗಿ ಅಭಿಯಾನ: ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ

Date:

ಮೈಸೂರು ಮಹಾನಗರ ಪಾಲಿಕೆ ವತಿಯಿಂದ ನಗರದ ಆಯ್ದ ರಸ್ತೆಗಳಲ್ಲಿ ಇರುವ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆಯ ಬಳಕೆಯನ್ನು ಖಚಿತಪಡಿಸುವ ನಿಟ್ಟಿನಲ್ಲಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಆರ್ ಐಶ್ವರ್ಯ ತಿಳಿಸಿದರು.

- Advertisement -

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕನ್ನಡ ಅಭಿವೃದ್ಧಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಹಾಗೂ ಸರ್ಕಾರದ ಭಾಷಾ ನೀತಿಯಲ್ಲಿ ಸಾರ್ವಜನಿಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ರಚಿಸಲಾದ ಕನ್ನಡ ಜಾಗೃತಿ ಸಮಿತಿ ಸದಸ್ಯರ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕನ್ನಡ ನಮ್ಮ ಮಾತೃಭಾಷೆಯಾಗಿದ್ದು, ಅದರ ಗೌರವ ಮತ್ತು ಬಳಕೆಯನ್ನು ಹೆಚ್ಚಿಸುವ ಜವಾಬ್ದಾರಿ ಪ್ರತಿಯೊಬ್ಬ ಕನ್ನಡಿಗರ ಮೇಲಿದೆ ಎಂದು ಅವರು ಹೇಳಿದರು. ನಗರದ ವಿವಿಧ ವ್ಯಾಪಾರ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡದ ಬಳಕೆಯಲ್ಲಿ ಕಂಡುಬರುವ ನ್ಯೂನ್ಯತೆಗಳನ್ನು ಸರಿಪಡಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕನ್ನಡ ಭಾಷೆಯ ಬಳಕೆಯನ್ನು ಜನಸಾಮಾನ್ಯರಲ್ಲಿ ಇನ್ನಷ್ಟು ಉತ್ತೇಜಿಸಲು “ಕನ್ನಡಕ್ಕಾಗಿ ಓಟ” ಸೇರಿದಂತೆ ವಿವಿಧ ಜಾಗೃತಿ ಕಾರ್ಯಕ್ರಮಗಳನ್ನು ಕನ್ನಡ ಜಾಗೃತಿ ಸಮಿತಿ ಸದಸ್ಯರ ಸಹಯೋಗದಲ್ಲಿ ಸಂಘಟಿಸಿ ಆಯೋಜಿಸುವಂತೆ ಸೂಚಿಸಿದರು. ಇದೇ ವೇಳೆ, ಕನ್ನಡ ಭಾಷೆಗೆ ಸಂಬಂಧಿಸಿದಂತೆ ನಡೆದ ಸಭೆಗೆ ಹಲವು ಇಲಾಖೆಗಳ ಅಧಿಕಾರಿಗಳು ಗೈರುಹಾಜರಾಗಿರುವುದನ್ನು ಗಂಭೀರವಾಗಿ ಪರಿಗಣಿಸಿದ ಅಪರ ಜಿಲ್ಲಾಧಿಕಾರಿಗಳು, ಮುಂದಿನ ಸಭೆಗೂ ಗೈರುಹಾಜರಾಗುವ ಅಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ನಾಮನಿರ್ದೇಶಿತ ಸದಸ್ಯ ಟಿ. ಗುರುರಾಜ್ ಮಾತನಾಡಿ, “ಮೈಸೂರು ನಗರದಲ್ಲಿ ಸಂಚಾರಿ ನಿಯಮಗಳ ಫಲಕಗಳಲ್ಲಿ ಕನಿಷ್ಠ ಒಂದು ಬದಿಯಲ್ಲಾದರೂ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಕೆ ಮಾಡಬೇಕು. ಕನ್ನಡಪರ ಹೋರಾಟಗಳು ನಡೆದ ಸಂದರ್ಭಗಳಲ್ಲಿ ಪೊಲೀಸ್ ಇಲಾಖೆಯಿಂದ ದೂರು ದಾಖಲಿಸುವ ಪರಿಸ್ಥಿತಿ ಎದುರಾದರೆ, ಅದು ‘ಕನ್ನಡ ಪರ ಹೋರಾಟದ ಸಂದರ್ಭ’ ಎಂಬ ಉದ್ದೇಶವನ್ನು ದೂರಿನಲ್ಲಿ ಸ್ಪಷ್ಟವಾಗಿ ನಮೂದಿಸಬೇಕು” ಎಂದು ಸಭೆಯಲ್ಲಿ ತಿಳಿಸಿದರು.

ಮೈಸೂರು ನಗರವು ಪ್ರಮುಖ ಪ್ರವಾಸಿ ತಾಣವಾಗಿರುವ ಹಿನ್ನೆಲೆಯಲ್ಲಿ, ಪೆಟ್ರೋಲ್ ಬಂಕ್‌ಗಳು ಹಾಗೂ ಇತರೆ ಸಾರ್ವಜನಿಕ ಸ್ಥಳಗಳಲ್ಲಿ ‘I Love Mysore’ ಎಂಬ ಇಂಗ್ಲಿಷ್ ಪದ ಬಳಕೆಯ ಬದಲು ‘ನನ್ನ ಮೈಸೂರು’, ‘ನನ್ನ ಪ್ರೀತಿಯ ಮೈಸೂರು’, ‘ನನ್ನ ಮೈಸೂರು ನನ್ನ ಹೆಮ್ಮೆ’ ಎಂಬ ಕನ್ನಡ ಪದಗಳನ್ನು ಬಳಸುವಂತೆ ಸಲಹೆ ನೀಡಿದರು.

ಇದೇ ವೇಳೆ ಕೆಲವು ಖಾಸಗಿ ಶಾಲೆಗಳಲ್ಲಿ ಕನ್ನಡ ಶಿಕ್ಷಕರನ್ನು ನೇಮಕ ಮಾಡದೇ ಇರುವುದಲ್ಲದೆ, ವಿದ್ಯಾರ್ಥಿಗಳು ಕನ್ನಡದಲ್ಲಿ ಮಾತನಾಡಿದರೆ ದಂಡ ವಿಧಿಸುವ ಕ್ರಮ ಜಾರಿಯಲ್ಲಿದೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಆತಂಕ ವ್ಯಕ್ತಪಡಿಸಿದರು. ಈ ರೀತಿಯ ಕನ್ನಡ ವಿರೋಧಿ ಕ್ರಮಗಳ ಬಗ್ಗೆ ಸಂಬಂಧಿತ ಇಲಾಖೆ ಸೂಕ್ತ ತನಿಖೆ ನಡೆಸಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅವರು ಸಭೆಯಲ್ಲಿ ಒತ್ತಾಯಿಸಿದರು.

ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕಡಕೊಳ ಕುಮಾರಸ್ವಾಮಿ ಮಾತನಾಡಿ, “ಪೊಲೀಸ್ ಇಲಾಖೆಯಲ್ಲಿ ಕನ್ನಡಪರ ಹೋರಾಟಗಾರರು ಹೋರಾಟಕ್ಕೆ ಅನುಮತಿ ಕೋರಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿಗಳು ಅವರನ್ನು ಗೌರವಯುತವಾಗಿ ಕಾಣಬೇಕು. ಕನ್ನಡಪರ ಹೋರಾಟಗಳು ಭಾಷೆ, ನಾಡು ಮತ್ತು ಸಂಸ್ಕೃತಿಯ ಉಳಿವಿಗಾಗಿ ನಡೆಯುತ್ತಿರುವುದರಿಂದ ಹೋರಾಟಗಾರರೊಂದಿಗೆ ಸೌಜನ್ಯಯುತವಾಗಿ ವರ್ತಿಸುವುದು ಅಗತ್ಯವಾಗಿದೆ. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಳವಡಿಸಲಾಗುವ ಸೂಚನಾ ಫಲಕಗಳು ಹಾಗೂ ಜಾಹೀರಾತು ಫಲಕಗಳಲ್ಲಿ ಕನ್ನಡ ಭಾಷೆಗೆ ಹೆಚ್ಚಿನ ಆದ್ಯತೆ ನೀಡಬೇಕು. ರಾಜ್ಯದ ಜನರಿಗೆ ಸುಲಭವಾಗಿ ಅರ್ಥವಾಗುವಂತೆ ಕನ್ನಡವನ್ನು ಪ್ರಮುಖವಾಗಿ ಬಳಸುವಂತೆ ಸಂಬಂಧಿತ ಇಲಾಖೆಗಳು ಕ್ರಮ ಕೈಗೊಳ್ಳಬೇಕು. ಡಿಟಿಪಿ ಆಪರೇಟರ್‌ಗಳಿಗೆ ಕನ್ನಡ ಭಾಷಾ ಜ್ಞಾನ ಹಾಗೂ ಕನ್ನಡ ಟೈಪಿಂಗ್ ಕುರಿತ ತರಬೇತಿ ನೀಡುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟ ಅವರು, ಸರ್ಕಾರಿ ಹಾಗೂ ಖಾಸಗಿ ವಲಯದಲ್ಲಿ ಕನ್ನಡದ ಬಳಕೆ ಹೆಚ್ಚಿಸಲು ನಿರಂತರ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು” ಎಂದು ಕರೆ ನೀಡಿದರು.

ಮೈಸೂರು ಮಹಾನಗರಪಾಲಿಕೆ ವ್ಯಾಪ್ತಿಯ ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಆರ್. ಗೋಪಾಲಕೃಷ್ಣ ಮಾತನಾಡಿ, “ಬ್ಯಾಂಕ್‌ಗಳಲ್ಲಿ ಬಳಸಲಾಗುವ ಚಲನ್‌ಗಳು ಸೇರಿದಂತೆ ಸಾರ್ವಜನಿಕರಿಗೆ ಉಪಯುಕ್ತವಾಗುವ ವಿವಿಧ ನಮೂನೆಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸುವಂತೆ ಕ್ರಮ ಕೈಗೊಳ್ಳಬೇಕು. ಸಾರ್ವಜನಿಕರು ಬ್ಯಾಂಕ್‌ ವ್ಯವಹಾರಗಳಲ್ಲಿ ಸುಲಭವಾಗಿ ಮಾಹಿತಿ ಅರ್ಥಮಾಡಿಕೊಳ್ಳಲು ಕನ್ನಡ ಭಾಷೆಯ ಬಳಕೆ ಅತ್ಯಂತ ಅಗತ್ಯವಾಗಿದೆ” ಎಂದು ಹೇಳಿದರು.

ವಿಶೇಷವಾಗಿ ಗ್ರಾಮೀಣ ಹಾಗೂ ಕನ್ನಡಾಭಿಮಾನಿ ನಾಗರಿಕರಿಗೆ ಅನುಕೂಲವಾಗುವಂತೆ ಎಲ್ಲಾ ಅರ್ಜಿ ನಮೂನೆಗಳು, ಚಲನ್‌ಗಳು ಹಾಗೂ ಮಾಹಿತಿ ಫಲಕಗಳಲ್ಲಿ ಕನ್ನಡಕ್ಕೆ ಆದ್ಯತೆ ನೀಡಬೇಕು. ಕೇಂದ್ರ ಸರ್ಕಾರದ ವಿವಿಧ ಕಚೇರಿಗಳಲ್ಲಿಯೂ ಕನ್ನಡದ ಬಳಕೆ ಹೆಚ್ಚಾಗಬೇಕು. ರಾಜ್ಯದ ಅಧಿಕೃತ ಭಾಷೆಯಾಗಿರುವ ಕನ್ನಡಕ್ಕೆ ಗೌರವ ನೀಡಿ, ಕಚೇರಿ ವ್ಯವಹಾರಗಳು, ಸಾರ್ವಜನಿಕ ಪ್ರಕಟಣೆಗಳು ಹಾಗೂ ಅರ್ಜಿ ನಮೂನೆಗಳಲ್ಲಿ ಕನ್ನಡವನ್ನು ಸಮರ್ಪಕವಾಗಿ ಬಳಸುವಂತೆ ಸಂಬಂಧಿತ ಅಧಿಕಾರಿಗಳು ಕ್ರಮವಹಿಸಬೇಕು ಕನ್ನಡ ಭಾಷೆಯ ಪ್ರೋತ್ಸಾಹ ಮತ್ತು ಸಾರ್ವಜನಿಕ ಸೇವೆಯಲ್ಲಿ ಭಾಷಾ ಸೌಲಭ್ಯ ವೃದ್ಧಿ ಮಾಡುವ ನಿಟ್ಟಿನಲ್ಲಿ ಸರ್ಕಾರ ಹಾಗೂ ಸಂಬಂಧಿತ ಇಲಾಖೆಗಳು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

ಕನ್ನಡ ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಜಿ. ಮೋಹನ್ ಮಾತನಾಡಿ, “ಶಿಕ್ಷಣ ಸಂಸ್ಥೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಕಡ್ಡಾಯವಾಗಿ ಬಳಸಬೇಕು ಎಂಬ ನಿಯಮ ಇದ್ದರೂ, ಜಿಲ್ಲೆಯ ಅನೇಕ ಖಾಸಗಿ ಹಾಗೂ ಇತರೆ ಶಿಕ್ಷಣ ಸಂಸ್ಥೆಗಳು ಇನ್ನೂ ಈ ನಿಯಮವನ್ನು ಸಮರ್ಪಕವಾಗಿ ಪಾಲಿಸುತ್ತಿಲ್ಲ. ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸುವ ಪ್ರವೃತ್ತಿ ಹೆಚ್ಚಾಗುತ್ತಿದ್ದು, ಶಾಲೆಗಳಲ್ಲಿ ನಾಡಗೀತೆ ಹಾಡುವುದು ಹಾಗೂ ಸರ್ಕಾರದ ಆದೇಶದಂತೆ ಸಂವಿಧಾನದ ಪೀಠಿಕೆಯನ್ನು ಓದಿಸುವ ಕಾರ್ಯವೂ ಹಲವು ಕಡೆ ನಡೆಯುತ್ತಿಲ್ಲ. ಇದು ಕನ್ನಡ ಭಾಷೆ ಮತ್ತು ಸಂವಿಧಾನದ ಮೌಲ್ಯಗಳಿಗೆ ಅವಮಾನವಾಗುವಂತಾಗಿದೆ. ಶಿಕ್ಷಣ ಸಂಸ್ಥೆಗಳು ಕನ್ನಡದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸುವ ಜವಾಬ್ದಾರಿ ಹೊಂದಿದ್ದು, ಸರ್ಕಾರದ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಜಿಲ್ಲಾಡಳಿತ ಹಾಗೂ ಶಿಕ್ಷಣ ಇಲಾಖೆ ಅಧಿಕಾರಿಗಳು ಈ ಬಗ್ಗೆ ತಕ್ಷಣ ಪರಿಶೀಲನೆ ನಡೆಸಿ ನಿಯಮ ಉಲ್ಲಂಘಿಸುತ್ತಿರುವ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ?ಕೊಡಗು | ದುಬಾರೆ ದುರಂತಕ್ಕೆ ಸಚಿವ ಈಶ್ವರ ಖಂಡ್ರೆ ಸಂತಾಪ: ಸಾಕಾನೆ ಶಿಬಿರಗಳಲ್ಲಿ ಪ್ರವಾಸಿಗರಿಗೆ 100 ಅಡಿ ಅಂತರ ಕಡ್ಡಾಯ

ಸಭೆಯಲ್ಲಿ ಕನ್ನಡ ಜಾಗೃತಿ ಸಮಿತಿ ಸದಸ್ಯರಾದ ನಾ. ದಿವಾಕರ್, ಡಾ. ವಿನೋದಮ್ಮ, ಹೆಚ್.ಆರ್ ರವಿಪ್ರಸಾದ್, ಡಾ. ದಿನಮಣಿ, ಮೋಹನ್ ಕುಮಾರ್ ಗೌಡ, ಎಂ. ಪಿ. ಮಂಜಪ್ಪ ಶೆಟ್ಟಿ ಮಸಗಲಿ ಸೇರಿದಂತೆ ಕನ್ನಡಪರ ಹೋರಾಟಗಾರರು ಹಾಗೂ ಹಲವು ಇಲಾಖೆಗಳ ಅಧಿಕಾರಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...