ಔರಾದ್‌ | ಮಕ್ಕಳ ಕಲಿಕಾ ಗುಣಮಟ್ಟ ಸುಧಾರಣೆಗೆ ಶಿಬಿರಗಳು ಪೂರಕ : ವಿರೇಶ ಪಂಚಾಳ

Date:

Advertisements

ಶಿಬಿರಗಳು ಮಕ್ಕಳ ಕಲಿಕೆಗೆ ಪೂರಕ ವಾತಾವರಣ ನಿರ್ಮಿಸಿ ಅವರಲ್ಲಿನ ಕಲಿಕಾ ಗುಣಮಟ್ಟ ಸುಧಾರಿಸುತ್ತವೆ ಎಂದು ಅಗಸ್ತ್ಯ ಫೌಂಡೇಶನ್ ಔರಾದ್ ಮಿನಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ವಿರೇಶ ಪಾಂಚಾಳ ನುಡಿದರು.

ಅಗಸ್ತ್ಯ ಫೌಂಡೇಶನ್ ಮಿನಿ ವಿಜ್ಞಾನ ಕೇಂದ್ರ ಔರಾದ್ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಕಲಾರ ಸಹಯೋಗದಲ್ಲಿ ನಡೆದ 15 ದಿನಗಳ ಉಚಿತ ಚಳಿಗಾಲ ಕಲಿಕಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದರು.

ʼಮಕ್ಕಳಲ್ಲಿನ ಗಣಿತದ ಭಯ ಹೋಗಲಾಡಿಸಿ ಬುನಾದಿ ಸಾಮರ್ಥ್ಯ ಬಲಪಡಿಸಲು ಶಿಬಿರದಲ್ಲಿ ವಿನೂತನ ಚಟುವಟಿಕೆಗಳು ಮಾಡಿಸಿದ್ದು, ಗಣಿತ ವಿಷಯವು ಅತ್ಯಂತ ಸರಳ ವಿಷಯ ಎಂದು ಮಕ್ಕಳಿಗೆ ಮನವರಿಕೆ ಮಾಡಲಾಗಿದೆʼ ಎಂದರು.

Advertisements

ಶಿಕ್ಷಕ ಗಜಾನನ ಮಳ್ಳಾ ಮಾತನಾಡಿ, ʼದಸರಾ ರಜೆಯಲ್ಲಿ ಮಕ್ಕಳಲ್ಲಿ ಕ್ರಿಯಾಶೀಲತೆ, ಓದುವಿಕೆ, ಆರೋಗ್ಯದ ರಕ್ಷಣೆ ಸೇರಿ ನಾನಾ ಚಟುವಟಿಕೆ ಮಾಡಿಸುವುದರಿಂದ ಅವರ ಬುದ್ಧಿಮಟ್ಟ ಸುಧಾರಣೆಯಾಗಿ, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸಾಹಿತಿ, ಬರಹಗಾರರು ಓದುಗರಿಗೆ ನಿಷ್ಠುರವಾಗಿರಬೇಕು : ದಿನೇಶ ಅಮೀನ್‌ ಮಟ್ಟು

ಶಾಲೆಯ ಗಣಿತ ಶಿಕ್ಷಕ ಬಾಲಾಜಿ ಅಮರವಾಡಿ ಶಿಬಿರದ ಚಟುವಟಿಕೆಗಳನ್ನು ಕುರಿತು ಮಾಹಿತಿ ನೀಡಿ ಅಗಸ್ತ್ಯ ಫೌಂಡೇಶನ್ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಶಾಲೆಯ ವಿದ್ಯಾರ್ಥಿನಿ ಸಾಕ್ಷಿ ಶಿವಕುಮಾರ್, ಸಾಧನಾ ಬಾಬುಗೊಂಡ್ ತಮ್ಮ ಅನಿಸಿಕೆ ಹಂಚಿಕೊಂಡರು.ಮುಖ್ಯ ಶಿಕ್ಷಕ ಪ್ರಭು ಬಾಳೂರೆ, ಗ್ರಂಥಾಲಯ ಮೇಲ್ವಿಚಾರಕ ರಮೇಶ ಹಿಪ್ಪಳಗಾವೆ, ಶಿಕ್ಷಕರಾದ ವೀರಶೆಟ್ಟಿ ಗಾದಗೆ, ಅಂಕುಶ ಪಾಟೀಲ್, ರೂಪಾ ಸೇರಿದಂತೆ ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X