ವಿಬಿಜಿ ರಾಮ್ ಜಿ ಯೋಜನೆ ರದ್ದು ಮಾಡಿ: ದಲಿತ ಸೇನೆ ಆಗ್ರಹ

Date:

ವಿಕಸಿತ ಭಾರತ ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್ ವಿಬಿ–ಜಿ ರಾಮ್ ಜಿ ಯೋಜನೆಯನ್ನು ರದ್ದು ಮಾಡಿ, ಮೊದಲಿದ್ದ ಹಾಗೆ ಮಹಾತ್ಮ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯನ್ನು ಜಾರಿಗೆ ತರಬೇಕು ಎಂದು ದಲಿತ ಸೇನೆ ಆಗ್ರಹಿಸಿದೆ.

- Advertisement -

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ದಲಿತ ಸೇನೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಜಾವೀದ್ ಖಾನ್, ಗ್ರಾಮೀಣ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಎರಡು ದಶಕಗಳಿಂದ ಗ್ರಾಮೀಣ ಕೂಲಿ ಕಾರ್ಮಿಕರು, ಮಹಿಳೆಯರು, ದಲಿತರು, ಸಣ್ಣ ಹಾಗೂ ಅಂಚಿನ ರೈತರಿಗೆ ಜೀವನೋಪಾಯದ ಭದ್ರತೆಯನ್ನು ಒದಗಿಸುತ್ತಿರುವ ಮನರೇಗಾ ಯೋಜನೆಯನ್ನು ದುರ್ಬಲಗೊಳಿಸಿ, ಅದರ ಬದಲಾಗಿ ವಿಬಿ-ಜಿ ರಾಮ್ ಜಿ ಎಂಬ ಹೊಸ ಯೋಜನೆಯನ್ನು ಜಾರಿಗೆ ತರಲು ಕೇಂದ್ರ ಸರಕಾರ ಮುಂದಾಗಿರುವುದು ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮನರೇಗಾ ಯೋಜನೆ ಬೇಡಿಕೆಯಿದ್ದಲ್ಲಿ ಕೆಲಸ ನೀಡುವ ಕಾನೂನುಬದ್ಧ ಹಕ್ಕನ್ನು ಕಾರ್ಮಿಕರಿಗೆ ಒದಗಿಸಿತ್ತು. ಆದರೆ ಹೊಸ ವಿಬಿ–ಜಿ ರಾಮ್ ಜಿ ಯೋಜನೆಯಲ್ಲಿ ಕೆಲಸದ ದಿನಗಳಿಗೆ ಮಿತಿ, ಕೃಷಿ ಋತುವಿನಲ್ಲಿ ಕೆಲಸ ನಿರಾಕರಣೆ, ಕೇಂದ್ರ ಸರಕಾರದ ನಿಯಂತ್ರಣದಲ್ಲಿ ಅನುದಾನ ಹಂಚಿಕೆ ಮುಂತಾದ ಅಂಶಗಳು ಕಾರ್ಮಿಕರ ಹಕ್ಕುಗಳನ್ನು ಕಸಿಯುವ ಪ್ರಯತ್ನವಾಗಿವೆ. ಇದರಿಂದ ಗ್ರಾಮೀಣ ಬಡವರು, ವಿಶೇಷವಾಗಿ ಮಹಿಳೆಯರು ಮತ್ತು ಅಸಂಘಟಿತ ಕಾರ್ಮಿಕ ವರ್ಗ ತೀವ್ರ ಸಂಕಷ್ಟಕ್ಕೆ ಒಳಗಾಗುವ ಸಾಧ್ಯತೆ ಇದೆ ಎಂದು ಜಾವೀದ್ ಖಾನ್ ವಿವರಿಸಿದ್ದಾರೆ.

ಕಾರ್ಮಿಕ ಸಂಘಟನೆಗಳು, ರೈತ ಸಂಘಗಳು, ರಾಜ್ಯ ಸರಕಾರಗಳು ಹಾಗೂ ಸಾರ್ವಜನಿಕರೊಂದಿಗೆ ಸಮಗ್ರ ಚರ್ಚೆ ನಡೆಸದೆ, ವಿಧಾನಸಭೆ ಮತ್ತು ಸಂಸತ್ತಿನಲ್ಲಿ ಸೂಕ್ತ ಚರ್ಚೆಯಿಲ್ಲದೆ, ಇಂತಹ ಮಹತ್ವದ ಯೋಜನಾ ಬದಲಾವಣೆ ಮಾಡಿರುವುದು ಪ್ರಜಾಸತ್ತಾತ್ಮಕ ಮೌಲ್ಯಗಳಿಗೆ ವಿರುದ್ಧವಾಗಿದೆ. ಇದರ ಪರಿಣಾಮವಾಗಿ ಗ್ರಾಮೀಣ ಪ್ರದೇಶಗಳಲ್ಲಿ ವಲಸೆ ಹೆಚ್ಚಾಗುವ ಹಾಗೂ ನಿರುದ್ಯೋಗ ಗಂಭೀರವಾಗುವ ಆತಂಕವಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರಿನಲ್ಲಿ ಫೆ.1ರಂದು ‘ಬ್ಯಾರಿ ಕೂಟ’: ವಿದ್ಯಾರ್ಥಿ ವೇತನ ವಿತರಣೆ; ಆ್ಯಂಬ್ಯುಲೆನ್ಸ್ ಲೋಕಾರ್ಪಣೆ

ಆದುದರಿಂದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಸಾಮಾಜಿಕ ನ್ಯಾಯ ಹಾಗೂ ಬಡವರ ಪರ ಧೋರಣೆಯುಳ್ಳ ನಾಯಕನಾಗಿ, ವಿಬಿ–ಜಿ ರಾಮ್ ಜಿ ಯೋಜನೆಗೆ ರಾಜ್ಯ ಸರಕಾರ ತೀವ್ರ ವಿರೋಧ ವ್ಯಕ್ತಪಡಿಸಬೇಕು. ಮನರೇಗಾ ಯೋಜನೆಯನ್ನು ಅದರ ಮೂಲ ಆತ್ಮದೊಂದಿಗೆ ಮುಂದುವರಿಸಲು ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಬೇಕು. ಕಾರ್ಮಿಕರ 100 ದಿನಗಳ ಉದ್ಯೋಗ ಹಕ್ಕು, ಸಮಯಕ್ಕೆ ಸರಿಯಾದ ಕೂಲಿ ಪಾವತಿ ಹಾಗೂ ಗ್ರಾಮ ಪಂಚಾಯಿತಿ ಆಧಾರಿತ ಯೋಜನಾ ಸ್ವಾತಂತ್ರ್ಯವನ್ನು ರಕ್ಷಿಸಬೇಕು ಎಂದು ಜಾವೀದ್ ಖಾನ್ ಮನವಿ ಮಾಡಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...