ಬಳ್ಳಾರಿ | ಪ್ರೊ. ಮೇತ್ರಿ ನೇಮಕಾತಿ ರದ್ದು ಹಿನ್ನೆಲೆ: ವಿಜಯನಗರ ಕೃಷ್ಣದೇವರಾಯ ವಿವಿ ಕುಲಪತಿಯಾಗಿ ಡಾ ಎಂ ಮುನಿರಾಜು

Date:

ವಿಜಯನಗರ ಕೃಷ್ಣದೇವರಾಯ ವಿವಿಯ ಕುಲಪತಿಯಾಗಿ ಪ್ರೊ. ಮೇತ್ರಿಯವರನ್ನು ಮಾಡಿದ್ದ ನೇಮಕಾತಿಯನ್ನು ಹೈಕೋರ್ಟ್‌ ರದ್ದುಪಡಿಸಿರುವ ಹಿನ್ನೆಲೆಯಲ್ಲಿ ನೂತನ ಕುಲಪತಿಯಾಗಿ ಡಾ ಎಂ ಮುನಿರಾಜು ಅವರನ್ನು ನೇಮಕ ಮಾಡಲಾಗಿದೆ.

- Advertisement -

ಬಳ್ಳಾರಿ ಮಹಾನಗರದ ಹೊರ ವಲಯದ ಅಲೀಪುರ ಸಮೀಪದಲ್ಲಿರುವ ವಿಜಯನಗರ ಶ್ರೀ ಕೃಷ್ಣ ದೇವರಾಯ ವಿವಿಗೆ ಈ ಹಿಂದೆ ಪ್ರೊ.ಮೇತ್ರಿಯವರನ್ನು ಕುಲಪತಿಯಾಗಿ ನೇಮಕಾತಿ ಮಾಡಲಾಗಿತ್ತು. ಈ ನೇಮಕಾತಿಯ ವಿರುದ್ಧ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಅರ್ಜಿಯ ವಿಚಾರಣೆ ನಡೆಸಿದ್ದ ಹೈಕೋರ್ಟ್‌, ಜುಲೈ 24, 2024ರಂದು ಪ್ರೊ.ಮೇತ್ರಿಯವರ ನೇಮಕಾತಿ ಆದೇಶವನ್ನು ರದ್ದುಪಡಿಸಿತ್ತು.

ಮುನಿರಾಜು 1
ನೂತನ ಕುಲಪತಿ ಡಾ ಎಂ ಮುನಿರಾಜು

ಪ್ರೊ.ಮೇತ್ರಿಯವರ ನೇಮಕಾತಿ ರದ್ದಾದ ಹಿನ್ನೆಲೆಯಲ್ಲಿ ತೆರವಾಗಿದ್ದ ಕುಲಪತಿ ಹುದ್ದೆಗೆ ಬೆಂಗಳೂರು ವಿಶ್ವವಿದ್ಯಾಲಯದ ವಾಣಿಜ್ಯ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದ ಡಾ.ಎಂ.ಮುನಿರಾಜು ಅವರನ್ನು ನೇಮಕಗೊಳಿಸಲಾಗಿದೆ.

ರಾಜ್ಯ ಸರ್ಕಾರದ ಶೋಧ ಸಮಿತಿ ಮೂಲಕ ಅಂತಿಮಗೊಳಿಸಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಿ, ಪರಿಗಣಿಸಲು ಹೈ ಕೋರ್ಟ್ ಸೂಚಿಸಿದ್ದರಿಂದ, ಮೆರಿಟ್, ಸಮಾನತೆ, ಸಾಮಾಜಿಕ ನ್ಯಾಯ ಮತ್ತು ರಾಜ್ಯ ಸರ್ಕಾರದ ಅಭಿಪ್ರಾಯದೊಂದಿಗೆ ಡಾ.ಎಂ.ಮುನಿರಾಜು ಅವರನ್ನು ನೇಮಿಸಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

ಈ ಹಿಂದೆ ಬೆಂಗಳೂರು ವಿವಿಯಲ್ಲಿ ಹಂಗಾಮಿ ಕುಲಪತಿಗಳಾಗಿ ಸೇವೆ ಸಲ್ಲಿಸಿದ್ದ ಡಾ. ಮುನಿರಾಜು, ಈಗ ಬಳ್ಳಾರಿಯ ನೂತನ ಕುಲಪತಿಯಾಗಿ ನೇಮಕಗೊಂಡಿದ್ದಾರೆ. ಈ ಆದೇಶದ ದಿನಾಂಕದಿಂದ 4 ವರ್ಷದ ಅವಧಿ ಅಥವಾ 67 ವರ್ಷ ಪೂರೈಸುವ ತನಕ ಬಳ್ಳಾರಿ ವಿವಿ ಕುಲಪತಿಗಳಾಗಿ ಡಾ. ಮುನಿರಾಜು ಸೇವೆ ಸಲ್ಲಿಸಲಿದ್ದಾರೆ. ಕುಲಪತಿಗಳಾಗಿ ಡಾ. ಮುನಿರಾಜು ಇಂದು(ಆಗಸ್ಟ್ 16) ಅಧಿಕಾರ ವಹಿಸಿಕೊಳ್ಳಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಲೂನ್ ಮಾರುವ 9 ವರ್ಷದ ಬಾಲಕಿ ಅತ್ಯಾಚಾರ, ಕೊಲೆ ಪ್ರಕರಣ: ಅಪರಾಧಿ ಕಾರ್ತಿಕ್‌ಗೆ ಗಲ್ಲು ಶಿಕ್ಷೆ

ಕಳೆದ ವರ್ಷದ ದಸರಾ ಮಹೋತ್ಸವದ ಸಂದರ್ಭದಲ್ಲಿ ಕುಟುಂಬದೊಂದಿಗೆ ಟೆಂಟ್‌ನಲ್ಲಿ ಮಲಗಿದ್ದ 9...

ಬಾಗೇಪಲ್ಲಿ | ಬೆಂಗಳೂರು ಉತ್ತರ ವಿಶ್ವವಿದ್ಯಾಲಯ ಅಂತರ ಕಾಲೇಜು ವಿದ್ಯಾರ್ಥಿಗಳ ಗುಡ್ಡಗಾಡು ಓಟ ಸ್ಪರ್ಧೆ

ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಾದ ಕ್ರೀಡೆಗಳಲ್ಲಿ ಭಾಗವಹಿಸುವುದರಿಂದ ಶಾರೀರಿಕ...

ರಾಯಚೂರು | ಮಾನ್ವಿ ಬಳಿ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಪಲ್ಟಿ; ಚಾಲಕ, ಕ್ಲೀನರ್‌ಗೆ ಗಾಯ

ಮಾನ್ವಿ ತಾಲೂಕಿನ ಗ್ರಾಮದ ಸಮೀಪದ ಹೊರವಲಯದಲ್ಲಿ ಮಾನ್ವಿ ರಸ್ತೆಯಲ್ಲಿ ಈರುಳ್ಳಿ ಸಾಗಿಸುತ್ತಿದ್ದ...