ಪಶ್ಚಿಮ ಬಂಗಾಳದ ಕೊಲ್ಕತ್ತಾದಲ್ಲಿ ವೈದ್ಯೆ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದ ದುಷರ್ಮಿಗಳ ವಿರುದ್ಧ ಕಠಿಣ ಕಾನೂನು ಜರುಗಿಸಬೇಕೆಂದು ಒತ್ತಾಯಿಸಿ ಸಾಲಿಡಾರಿಟಿ ಯೂತ್ ಮ್ಯೂಮೆಂಟ್ ವತಿಯಿಂದ ಬೀದರ್‌ನಲ್ಲಿ ಕ್ಯಾಂಡಲ್ ಮಾರ್ಚ್ ನಡೆಸಲಾಯಿತು.
ಭಾನುವಾರ ಸಂಜೆ ನಗರದ ಗವಾನ್ ಚೌಕ್‌ನಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಕ್ಯಾಂಡಲ್ ಹಿಡಿದು ಮೌನ ಮೆರವಣಿಗೆ ಪ್ರತಿಭಟನೆ ನಡೆಸಿ ಶ್ರದ್ಧಾಂಜಲಿ ಸಲ್ಲಿಸಿದರು.
ʼದೇಶದಲ್ಲಿ ಮಹಿಳೆಯರ ಮೇಲೆ ನಿರಂತರವಾಗಿ ನಡೆಯುತ್ತಿರುವ ಕ್ರೂರ ಕೃತ್ಯಗಳಿಗೆ ಕಡಿವಾಣ ಹಾಕಬೇಕು. ಇತ್ತಿಚೆಗೆ ಕೊಲ್ಕತ್ತಾದಲ್ಲಿ ವ್ಯೆದ್ಯೆಯ ಪೈಶಾಚಿಕ ಕೊಲೆ ಸೇರಿದಂತೆ ಉತ್ತರಾಖಂಡ ಮತ್ತು ಉತ್ತರ ಪ್ರದೇಶದಲ್ಲಿ ನಡೆದ ಘಟನೆಗಳು ಗಮನಿಸಿದರೆ ಮಹಿಳೆಯರಿಗೆ ರಕ್ಷಣೆ ಇಲ್ಲದ ವಾತಾವರಣ ನಿರ್ಮಾಣವಾಗಿದೆ ಎನ್ನುವ ಆತಂಕ ಕಾಡುತ್ತದೆ. ಸಮಾಜದಲ್ಲಿ ಮಹಿಳೆಯರ ಗೌರವವನ್ನು ಉಳಿಸುವ ನಿಟ್ಟಿನಲ್ಲಿ ಸರ್ಕಾರಗಳು ಜಾಗೃತವಾಗಬೇಕುʼ ಎಂದರು.

ʼಕೊಲ್ಕತ್ತಾ ಘಟನೆಯಿಂದ ವೈದ್ಯರಿಗೆ ರಕ್ಷಣೆ ಇಲ್ಲವೆಂಬ ಭಯ ಕಾಡುವಂತಾಗಿದೆ. ಅದರಲ್ಲೂ ದೇಶದಲ್ಲಿ ಮಹಿಳೆಯರಿಗೆ ರಕ್ಷಣೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚೆತ್ತುಕೊಳ್ಳಬೇಕು. ಮಹಿಳೆಯರಿಗೆ ರಕ್ಷಣೆ ಒದಗಿಸಬೇಕುʼ ಎಂದು ಆಗ್ರಹಿಸಿದರು.
ಈ ಸುದ್ದಿ ಓದಿದ್ದೀರಾ? ನೆನಪು | ವಿಚಾರವಾದಿ ಅರಸು ಅವರ ಸಹನೆ ದೊಡ್ಡದು: ಎಂ.ಸಿ. ನಾಣಯ್ಯ
ಕ್ಯಾಂಡಲ್ ಮಾರ್ಚ್ ಮೆರವಣಿಗೆಯ ಆಯೋಜಕ ಇರ್ಫಾನ್ ಅಹ್ಮದ್, ಸಂಘಟನೆಯ ರಾಜ್ಯ ಕಾರ್ಯದರ್ಶಿ ಮೋಹದ್ ರಫೀಕ್, ಜಮಾಅತ್-ಎ-ಇಸ್ಲಾಮಿ ಹಿಂದ್‌ನ ಜಿಲ್ಲಾಧ್ಯಕ್ಷ ಮೋಹದ್ ಮುಜ್ಜಮ್ ಸೇರಿದಂತೆ ಮಹಿಳೆಯರು, ಸಾಮಾಜಿಕ ಕಾರ್ಯಕರ್ತರು ಭಾಗವಹಿಸಿದ್ದರು.