ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಸಂಜಯ್ (25) ಮೃತರು. ಅಪಘಾತದ ರಭಸಕ್ಕೆ ಬೈಕ್ ಸವಾರ ಕಾರಿನ ಚಕ್ರಕ್ಕೆ ಸಿಲುಕಿ ಕೊನೆಯುಸಿರೆಳೆದ್ದಿದ್ದಾರೆ ಎಂದು ತಿಳಿದು ಬಂದಿದೆ.
ನರಸಿಂಹರಾಜಪುರ ತಾಲ್ಲೂಕಿನ ಬಾಳೆಹೊನ್ನೂರು ಹೋಬಳಿ ಮೇಲ್ಮಾಲ್ ರಸ್ತೆಯಲ್ಲಿ ಭಾನುವಾರ ಅಪಘಾತ ಸಂಭವಿಸಿದೆ. ಈ ಕುರಿತು ಬಾಳೆಹೊನ್ನೂರಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.