ಶಿವಮೊಗ್ಗ | ಹುಲಿ ಸಿಂಹಧಾಮ ಬಳಿ ಧಿಡೀರನೇ ಹೊತ್ತಿ ಉರಿದ ಕಾರ್

Date:

Advertisements

ಶಿವಮೊಗ್ಗ ಚಲಿಸುತ್ತಿದ್ದ ಕಾರೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸುಟ್ಟು ಭಸ್ಮವಾದ ಘಟನೆ, ಶಿವಮೊಗ್ಗ ನಗರದ ಹೊರವಲಯ ತ್ಯಾವರೆಕೊಪ್ಪ ಹುಲಿ ಸಿಂಹಾಧಾಮ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ಜು.9 ರ ರಾತ್ರಿ 8.15 ಗಂಟೆ ಸುಮಾರಿಗೆ ಸಂಭವಿಸಿದೆ.

ಶಿವಮೊಗ್ಗ ಗ್ರಾಮಾಂತರದ ಮಲವಗೊಪ್ಪದ ನಿವಾಸಿ ವೀರೇಶ್ ಎಂಬುವರಿಗೆ ಸೇರಿದ ಐ 20 ಗ್ರ್ಯಾಂಡ್ ಹುಂಡೈ ಕಾರು ಬೆಂಕಿಗಾಹುತಿಯಾಗಿದ್ದು ಎಂದು ತಿಳಿದುಬಂದಿದೆ.

ವೀರೇಶ್ ಅವರು ತೋಟಕ್ಕೆ ತೆರಳುತ್ತಿದ್ದ ವೇಳೆ, ದಿಢೀರ್ ಆಗಿ ಕಾರಿನಲ್ಲಿ ಹೊಗೆ ಕಾಣಿಸಿಕೊಂಡಿದೆ. ಕಾರು ನಿಲ್ಲಿಸುತ್ತಿದ್ದಂತೆ ಬೆಂಕಿ ಹೊತ್ತಿಕೊಂಡುಹೊತ್ತಿ ಉರಿಯಲಾರಂಭಿಸಿದೆ.

Advertisements

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳ ದೌಡಾಯಿಸಿದೆ. ಈ ವೇಳೆಗಾಗಲೆ ಕಾರು ಭಾಗಶಃ ಸುಟ್ಟು ಹೋಗಿತ್ತು ಎಂಬ ಮಾಹಿತಿ ಲಭ್ಯವಾಗಿದೆ.

ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ. ಕಾರು ಬೆಂಕಿಗಾಹುತಿಯಾಗಲು ಕಾರಣವೇನು? ಎಂಬಿತ್ಯಾದಿ ವಿವರಗಳು ಇನ್ನಷ್ಟೆ ತಿಳಿದುಬರಬೇಕಾಗಿದೆ.

ಕಾರ್ಯಾಚರಣೆಯಲ್ಲಿ ಅಗ್ನಿಶಾಮಕ ದಳದ ಎ ಎಫ್ ಎಸ್ ಟಿ ಓ ನೂರುಲ್ಲಾ, ಎಫ್ ಡಿ ಮಂಜುನಾಥ್ ಬುಲಾರಿ, ಸಿಬ್ಬಂದಿಗಳಾದ ಕಿರಣ್ ಕುಮಾರ್, ಯರ್ರಿಸ್ವಾಮಿ, ಲೀಡಿಂಗ್ ಫೈರ್ ಮ್ಯಾನ್ ಚೇತನ್ ಕುಮಾರ್ ಭಾಗಿಯಾಗಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

ಬೀದರ್‌ | ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ : ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ

ಭಾಲ್ಕಿ ಹಿರೇಮಠ ಸಂಸ್ಥಾನದ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರ ಅಮೃತ ಮಹೋತ್ಸವ ...

ಶಿರಸಿ | NWKRTC ವತಿಯಿಂದ ಅಪ್ರೆಂಟಿಸ್ ಹುದ್ದೆಗಳಿಗೆ WALK-IN-INTERVIEW

ಕರ್ನಾಟಕ ರಾಜ್ಯ ವಾಯುವ್ಯ ಸಾರಿಗೆ ಸಂಸ್ಥೆ, ಶಿರಸಿ ವಿಭಾಗದಲ್ಲಿ ವಿವಿಧ ಅಪ್ರೆಂಟಿಸ್...

Download Eedina App Android / iOS

X