ಬಸವಕಲ್ಯಾಣ ತಾಲ್ಲೂಕಿನ ಯರಬಾಗ್ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದು ದಂಪತಿ ಸಾವನ್ನಪ್ಪಿರುವ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ.
ಬಸವಕಲ್ಯಾಣ ತಾಲ್ಲೂಕಿನ ನಾರಾಯಣಪುರ ಗ್ರಾಮದ ಪ್ರಕಾಶ ರೇಕುಳಗೆ (55) ಹಾಗೂ ಅವರ ಪತ್ನಿ ಬಬಿತಾ ರೇಕುಳಗೆ (50) ಮೃತ ದಂಪತಿ.
ಮೃತರು ಗ್ರಾಮದಿಂದ ಚಿಟಗುಪ್ಪ ತಾಲ್ಲೂಕಿನ ಇಟಗಾ ಗ್ರಾಮಕ್ಕೆ ದ್ವಿಚಕ್ರ ಮೇಲೆ ತೆರಳುವ ವೇಳೆ ಯರಬಾಗ್ ಕ್ರಾಸ್ ಬಳಿಯ ತಿರುವಿನಲ್ಲಿ ಮುಂಬೈ ಕಡೆಯಿಂದ ಹುಮನಾಬಾದ್ ಕಡೆಗೆ ವೇಗವಾಗಿ ಬಂದ ಸ್ಕಾರ್ಪಿಯೊ ವಾಹನ ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.
ಅಪಘಾತದಲ್ಲಿ ಬೈಕ್‌ನಿಂದ ಕೆಳಗೆ ಬಿದ್ದು ಬಬಿತಾ ಸ್ಥಳದಲ್ಲೇ ಸಾವನಪ್ಪಿದ್ದಾರೆ, ಗಂಭೀರವಾಗಿ ಗಾಯಗೊಂಡ ಅವರ ಪತಿ ಪ್ರಕಾಶ ಅವರನ್ನು ಕಲಬುರಗಿ ಆಸ್ಪತ್ರೆಗೆ ಸಾಗಿಸುವ ವೇಳೆ ಮಾರ್ಗ ಮಧ್ಯೆ ಕೊನೆಯುಸಿರೆಳೆದಿದ್ದಾರೆ. ಗಂಭೀರವಾಗಿ ಗಾಯಗೊಂಡ ಕಾರು ಚಾಲಕನನ್ನು ಹುಮನಾಬಾದ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎನ್ನಲಾಗಿದೆ.
ಈ ಸುದ್ದಿ ಓದಿದ್ದೀರಾ? ಗುತ್ತಿಗೆದಾರರ ಸಮಸ್ಯೆಗಳಿಗೆ ಉತ್ತರ ಕಂಡುಕೊಳ್ಳುವುದೇ ರಾಜ್ಯ ಸರ್ಕಾರ?
ಬಸವಕಲ್ಯಾಣ ಸಂಚಾರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಜರುಗಿದ್ದು, ಸ್ಥಳಕ್ಕೆ ಸಿಪಿಐ ಅಲಿಸಾಬ್, ಸಂಚಾರಿ ಠಾಣೆಯ ಪಿಎಸ್ಐ ಸಿದ್ದೇಶ್ವರ ಸೇರಿದಂತೆ ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರಿಸಿದ್ದಾರೆ.