ಬೀದರ್‌ | ದಲಿತ ಮಹಿಳೆಗೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿಗಳ ಬಂಧನಕ್ಕೆ ಒತ್ತಾಯ

Date:

Advertisements

ಬೀದರ್‌ ಜಿಲ್ಲೆಯ ಭಾಲ್ಕಿ ರಾಚಪ್ಪಾ ಗೌಡಗಾಂವ ಗ್ರಾಮದ ದಲಿತ ಮಹಿಳೆಯೊಬ್ಬರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ ಅದೇ ಗ್ರಾಮದ ಸವರ್ಣೀಯ ಇಬ್ಬರು ಆರೋಪಿಗಳನ್ನು ಕೂಡಲೇ ಬಂಧಿಸಬೇಕೆಂದು ಕರ್ನಾಟಕ ದಲಿತಪರ ಸಂಘಟನೆಗಳ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಈ ಕುರಿತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ದಲಿತಪರ ಸಂಘಟನೆಗಳ ಮುಖಂಡರು‌ ಬೀದರ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.

ʼಸೆ.21ರಂದು ರಾಚ್ಚಪ್ಪಾ ಗೌಡಗಾಂವ ಗ್ರಾಮದ ಪರಿಶಿಷ್ಟ ಜಾತಿಯ ಬಡ ಮಹಿಳೆಯೊಬ್ಬರು ತನ್ನ ಜಮೀನಿನೊಳಗೆ ಎಮ್ಮೆ ಮೇಯಿಸಬೇಡಿ ಎಂದು ಹೇಳಿದ ಕಾರಣಕ್ಕೆ ಇಬ್ಬರು ಯುವಕರು ಮಹಿಳೆಗೆ ಜಾತಿನಿಂದನೆ ಮಾಡಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಮಹಿಳೆಯನ್ನು ಭಾಲ್ಕಿ ತಾಲೂಕು ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ಹೆಚ್ಚಿನ ಚಿಕಿತ್ಸೆಗಾಗಿ ಬೀದರ್‌ ಜಿಲ್ಲಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆʼ ಎಂದರು.

Advertisements

ʼಮಹಿಳೆ ಮೇಲೆ ಮಾರಣಾಂತಿಕ ಹಲ್ಲೆಗೈದ ಇಬ್ಬರ ವಿರುದ್ಧ ಮೆಹಕರ್‌ ಪೊಲೀಸ್ ಠಾಣೆಯಲ್ಲಿ ಸೆ.23ರಂದು ಎಸ್ಸಿ-ಎಸ್ಟಿ ಕಾಯ್ದೆಯಡಿ ದೂರು ದಾಖಲಾಗಿದೆ. ಪೊಲೀಸರು ಆರೋಪಿಗಳ ರಕ್ಷಿಸಲು ಪ್ರಕರಣ ಮುಚ್ಚಿ ಹಾಕಲು ಉದೇಶ ಪೂರ್ವಕವಾಗಿ ಬಂಧಿಸಲು ವಿಳಂಬ ಮಾಡುತ್ತಿದ್ದಾರೆ. ದಲಿತ ಮಹಿಳೆಯು ಮಾರಣಾಂತಿಕ ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆದರೆ ಮಹಿಳೆಗೆ ಯಾರು ಹಲ್ಲೆ ನಡೆಸಿಲ್ಲ, ಕಾಡು ಹಂದಿ ದಾಳಿ ನಡೆಸಿದೆಯೆಂದು ಎಂದು ದಲಿತ ಸಂಘನೆಯ ಕೆಲ ಮುಂಖಡರುಗಳಿಗೆ ಪೊಲೀಸ್‌ ಇಲಾಖೆಯ ಅಧಿಕಾರಿಗಳು ಹೇಳಿದ್ದಾರೆʼ ಎಂದು ಆರೋಪಿಸಿದರು.

ʼಇತ್ತೀಚೆಗೆ ಕೆಲವು ಗ್ರಾಮಗಳಲ್ಲಿ ಪರಿಶಿಷ್ಟ ಜಾತಿ ಜನರ ಮೇಲೆ ನಿರಂತರವಾಗಿ ದೌರ್ಜನ್ಯ, ದಬ್ಬಾಳಿಕೆ, ಮಾರಣಾಂತಿಕ ಹಲ್ಲೆಗಳು ನಡೆಯುತ್ತಿವೆ. ಪೊಲೀಸ್ ಇಲಾಖೆ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ ಶೀಘ್ರದಲ್ಲೇ ತಪ್ಪಿಸ್ಥ ಆರೋಪಿಗಳನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕುʼ ಎಂದು ಆಗ್ರಹಿಸಿದರು.‌

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣನ್ನು ದೇವಿಯೆಂದು ಪೂಜಿಸುವ ದೇಶದಲ್ಲಿ ದುಡಿಯವ ಹೆಣ್ಣಿನ ಡಬಲ್ ಶಿಫ್ಟ್!

ಈ ಸಂದರ್ಭದಲ್ಲಿ ದಲಿತ ಸಂಘಟನೆಗಳ ಪ್ರಮುಖರಾದ ಉಮೇಶಕುಮಾರ್ ಸೋರಳ್ಳಿಕರ್, ರಾಜಕುಮಾರ್ ಮೂಲಭಾರತಿ, ಮಹೇಶ್ ಗೊರನಾಳಕರ್, ಚಂದ್ರಕಾಂತ ನಿರಾಟೆ, ಅಂಬರೀಶ ಕುದುರೆ, ಸಂತೋಷ್ ಎಣಕುರೆ, ರಾಜಕುಮಾರ್ ಗೂನಳ್ಳಿಕರ್, ಬಸವರಾಜ ಮಿಠಾರೆ, ಅಶೋಕ ಸೇರಿದಂತೆ ಇತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X