ಕಲಬುರಗಿ ಜಿಲ್ಲಾಧಿಕಾರಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿರುವ ಆರೋಪದ ಮೇರೆಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ್ ವಿರುದ್ಧ ಕಲಬುರಗಿ ನಗರದ ಸ್ಟೇಶನ್ ಬಜಾರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶರಣ ಸಿರಸಗಿ ನಿವಾಸಿ ದತ್ತಾತ್ರೇಯ ಇಕ್ಕಳಕಿ ಅವರ ದೂರಿನ ಮೇರೆಗೆ ಸ್ಟೇಶನ್ ಬಜಾರ್ ಪೊಲೀಸರು ಎನ್.ರವಿಕುಮಾರ್ ವಿರುದ್ಧ ಎಸ್ಸಿ, ಎಸ್ಟಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಎಂದು ವರದಿಯಾಗಿದೆ.
ಮೇ 24ರಂದು ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಕಲಬುರಗಿಯಲ್ಲಿ ಹಮ್ಮಿಕೊಂಡ ಪ್ರತಿಭಟನಾ ಸಭೆಯಲ್ಲಿ ಮಾತನಾಡಿ, ಕಲಬುರಗಿ ಡಿಸಿ (ಫೌಝಿಯಾ ತರನ್ನುಮ್) ಅವರು ಪಾಕಿಸ್ತಾನದಿಂದ ಬಂದಿದ್ದಾರೋ ಅಥವಾ ಇಲ್ಲಿ ಐಎಎಸ್ ಆಫೀಸರ್ ಆಗಿದ್ದಾರೋ ಗೊತ್ತಿಲ್ಲ ನನಗೆ. ಬಹುಶಃ ನಿಮ್ಮ ಚಪ್ಪಾಳೆ ನೋಡಿದರೆ ಡಿಸಿ ಅವರು ಪಾಕಿಸ್ತಾನದಿಂದ ಬಂದಿರುವಂತೆ ಕಾಣಿಸುತ್ತದೆʼ ಎಂದು ವಿವಾದಾತ್ಮಕ ಹೇಳಿಕೆ ನೀಡಿದ್ದರು.
ಇದೀಗ ಬಿಜೆಪಿ ನಾಯಕ, ಎಂಎಲ್ಸಿ ಎನ್.ರವಿಕುಮಾರ್ ವಿರುದ್ಧ ಪ್ರಕರಣ ದಾಖಲಾಗಿದೆ.