ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

Date:

ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ದೂರು ದಾಖಲಾಗಿದೆ.

- Advertisement -

ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅಪಮಾನ ಮಾಡಿ, ಗರ್ಭಿಣಿಯರನ್ನು ನಿಂದಿಸಿದ್ದಾರೆಂದು ಆರೋಪಿಸಿ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಬೀದರ್‌ | ಕಲ್ಲಡ್ಕ ಪ್ರಭಾಕರ್‌ ಭಟ್ ಬಂಧನಕ್ಕೆ ದಸಂಸ ಆಗ್ರಹ

“ಆಚೆ ಮನೆಯಲ್ಲಿ ಒಬ್ಬಳು ಬ್ಯಾರ್ದಿ (ಮುಸ್ಲಿಂ ಸಮುದಾಯದ ಮಹಿಳೆ ಎಂದರ್ಥ) ಇದ್ದಳು. ಅವಳು 6ನೆಯದ್ದು ಆಗಿ 7ನೇ ಗರ್ಭಿಣಿಯಾಗಿದ್ದಳು. ಅವಳಿಗೆ ಯಾರಾದ್ರು ಕೇಳಿದ್ದೀರಾ? ನೀನು ನಾಯಿ ಮರಿ ಹಾಕಿದ ಹಾಗೆ ಹಾಕ್ತಾ ಇದ್ದೀಯಾ ಅಂತ ಕೇಳಿದ್ರಾ? ಅದನ್ನು ಕೇಳುವ ಧೈರ್ಯವೂ ಇಲ್ಲ” ಎಂದು ಹೇಳಿದ್ದರು.

ಹಾಗೆಯೇ, “ಎರಡನೆಯದಾಗಿ ಅವರು ಹೇಳ್ತಾರೆ. ಅದು ಅಲ್ಲಾಹನಿಗೋಸ್ಕರ. ನಮ್ಮ ಮಕ್ಕಳು ಅಲ್ಲಾಹನಿಗೋಸ್ಕರ ಅನ್ನುತ್ತಾರೆ. ನೀವೇನಾದರೂ ಮಹಾಲಿಂಗೇಶ್ವರನಿಗಾಗಿ ಮಕ್ಕಳು ಮಾಡ್ತೀರಾ ? ನಮ್ಮ ಜನಸಂಖ್ಯೆ ಜಾಸ್ತಿಯಾಗಬೇಕು” ಎಂದು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದರು.

complaint 1
ದೂರು ನೀಡಿದ ಮಹಿಳಾ ಹೋರಾಟಗಾರರಾದ ಕಿರಣ್ ಪ್ರಭಾ, ಪ್ರಮೀಳಾ, ಯೋಗಿತಾ, ಈಶ್ವರಿ ಪದ್ಮುಂಜ

“ಮಂಗಳೂರು ವಿಧಾನಸಭಾ ಕ್ಷೇತ್ರ ಉಳ್ಳಾಲದಲ್ಲಿ ಹಿಂದೂ ಗೆಲ್ಲಲು ಸಾಧ್ಯವೇ ಇಲ್ಲ. ಅಲ್ಲಿ ಖಾದರೇ ಗೆಲ್ಲೋದು. ಯಾಕೆಂದರೆ ಒಂದು ಲಕ್ಷದ ಹತ್ತು ಸಾವಿರ ಬ್ಯಾರಿಗಳದ್ದೇ ಓಟು ಇದೆ. ಹಿಂದೂಗಳು 90 ಸಾವಿರ ಇರೋದು. ಗೆಲ್ಲೋದು ಯಾವಾಗ? ಅದು ಎಲ್ಲಾ ಕಡೆಗೂ ಹತ್ತಿರ ಹತ್ತಿರ ಬರ್ತಾ ಉಂಟು. ನಾವು ಗೆಲ್ತೇವಾ? ಗೆಲ್ಲಲು ಸಾಧ್ಯವೇ ಇಲ್ಲ. ನಮ್ಮನ್ನು ಸರ್ವನಾಶ ಮಾಡ್ತಾರೆ. ಹೀಗಾಗಿ ನಮ್ಮ ಮನೆಯಲ್ಲಿ 3ಕ್ಕಿಂತ ಕಡಿಮೆ ಮಕ್ಕಳು ಇರಬಾರದು” ಎಂದು ಕಲ್ಲಡ್ಕ ಪ್ರಭಾಕರ ಭಟ್ ದ್ವೇಷ ಭಾಷಣ ಮಾಡಿದ್ದರು.

ಈ ಹೇಳಿಕೆ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಮಹಿಳೆಯರು ನಿಮ್ಮ ಹೆರುವ ಯಂತ್ರವಲ್ಲ ಎಂದು ನೆಟ್ಟಿಗರು ಹೇಳಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...