ಬಂಟ್ವಾಳ | ಪ್ರಚೋದನಕಾರಿ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

Date:

Advertisements

ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸೋಮವಾರ ಪ್ರಕರಣ ದಾಖಲಾಗಿದೆ.

ಮೇ 12ರಂದು ಬಂಟ್ವಾಳದ ಕಾವಳಪಡೂರು ಗ್ರಾಮದ ಮದ್ವ ಪ್ಯಾಲೇಸ್ ಕಲ್ಯಾಣ ಮಂಟಪದ ಹಾಲ್‌ನಲ್ಲಿ ಇತ್ತೀಚೆಗೆ ಕೊಲೆಯಾದ ರೌಡಿಶೀಟರ್ ಸುಹಾಸ್ ಶೆಟ್ಟಿಗೆ ಶ್ರದ್ಧಾಂಜಲಿ ಕಾರ್ಯಕ್ರಮ ನಡೆದಿತ್ತು. ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ದ್ವೇಷ ಭಾಷಣ ಮಾಡಿದ್ದರು.

ಇದನ್ನು ಓದಿದ್ದೀರಾ? ಮಂಡ್ಯ | ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್‌ಗೆ ಜಾಮೀನು

Advertisements

ಈ ಕಾರ್ಯಕ್ರಮದಲ್ಲಿ ಪ್ರಭಾಕರ್ ಭಟ್ ಮತೀಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವಂತೆ ಪ್ರಚೋದನಾತ್ಮಕವಾಗಿ ಭಾಷಣ ಮಾಡಿದ್ದಾರೆ. ಇದರಿಂದ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗುವ ಸಾಧ್ಯತೆಯಿದೆ ಎಂದು ಆರೋಪಿಸಿ ದೂರು ದಾಖಲಿಸಲಾಗಿದೆ.

ಕೋಮು ದ್ವೇಷ ಬಿತ್ತುವ, ಸಮಾಜದ ಸ್ವಾಸ್ಥ್ಯ ಕದಡುವ ಭಾಷಣ ಮಾಡಿದ ಪ್ರಭಾಕರ್ ಭಟ್ ವಿರುದ್ಧ ಈಗಾಗಲೇ ಹಲವು ಪ್ರಕರಣಗಳು ದಾಖಲಾಗಿವೆ. ಈ ಹಿಂದೆ ಶ್ರೀರಂಗಪಟ್ಟಣದಲ್ಲಿ ಮುಸ್ಲಿಂ ಮಹಿಳೆಯರ ಅಪಮಾನ ಮಾಡಿದ ಪ್ರಭಾಕರ್ ಭಟ್ ವಿರುದ್ದ ಪ್ರಕರಣ ದಾಖಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ್ದ ಶ್ರೀರಂಗಪಟ್ಟಣ ಕೋರ್ಟ್‌ “ಮುಂದೆ ಇಂತಹ ಭಾಷಣ ಮಾಡಿದರೆ ಜಾಮೀನು ರದ್ದಾಗಲಿದೆ” ಎಂದು ಹೇಳಿತ್ತು. ಆದರೆ ಸದ್ಯ ಆ ಪ್ರಕರಣದ ವಿಚಾರಣೆಗೆ ಹೈಕೋರ್ಟ್ ತಡೆ ನೀಡಿದೆ.

ಈದಿನ 1
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

Download Eedina App Android / iOS

X