ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪ್ರಕರಣ ದಾಖಲು

Date:

ಸಾರ್ವಜನಿಕ ಸಭೆಯೊಂದರಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಡಿಯಲ್ಲಿ ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಅಕ್ಟೋಬರ್ 20ರಂದು ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಮಹಿಳೆಯರನ್ನು ಅಪಮಾನ ಮಾಡಿ, ಗರ್ಭಿಣಿಯರನ್ನು ನಿಂದಿಸಿದ್ದರು. ಈ ಸಂಬಂಧ ಮಹಿಳಾ ಹೋರಾಟಗಾರ್ತಿ ಈಶ್ವರಿ ಪದ್ಮುಂಜ ಪುತ್ತೂರಿನ ಸಂಪ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಈ ದೂರಿನ ಆಧಾರದಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಇದನ್ನು ಓದಿದ್ದೀರಾ? ದಕ್ಷಿಣ ಕನ್ನಡ | ವಿವಾದಾತ್ಮಕ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲು

ದೂರಿನ ಆಧಾಯದಲ್ಲಿ ಅಪರಾಧ ಕ್ರಮಾಂಕ 118/2025, ಭಾರತೀಯ ನ್ಯಾಯ ಸಂಹಿತೆ (BNS) 79, 196, 299, 302 ಹಾಗೂ 3(5) ಕಲಂಗಳ ಅಡಿಯಲ್ಲಿ ಪ್ರಭಾಕರ ಭಟ್ ಮತ್ತು ಕಾರ್ಯಕ್ರಮ ಆಯೋಜಕರ ವಿರುದ್ಧ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ. ತಿಳಿಸಿದ್ದಾರೆ.

ಪುತ್ತೂರಿನ ಉಪ್ಪಳಿಗೆಯಲ್ಲಿ ನಡೆದ ದೀಪೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಪ್ರಭಾಕರ್ ಭಟ್, ಮುಸ್ಲಿಂ ಮಹಿಳೆಯರನ್ನು ಅಪಮಾನಿಸಿದ್ದರು. ಹಾಗೆಯೇ ಕೋಮು ಪ್ರಚೋಧನಕಾರಿ ಹೇಳಿಕೆಯನ್ನು ನೀಡಿದ್ದರು. ಪ್ರಭಾಕರ್ ವಿಡಿಯೋವನ್ನು ಕಹಳೆ ನ್ಯೂಸ್ ಯೂಟ್ಯೂಬ್ ಚಾನೆಲ್‌ನಲ್ಲಿ ಪ್ರಸಾರ ಮಾಡಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಭಟ್ಕಳ | ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ ಬಸ್ ಕಳವು

ಭಟ್ಕಳ: ರಾಷ್ಟ್ರೀಯ ಹೆದ್ದಾರಿ 66ರ ಪಕ್ಕದ ಸರ್ವಿಸ್ ರಸ್ತೆಯಲ್ಲಿ ನಿಲ್ಲಿಸಿದ್ದ ಮಿನಿ...

ಯಲ್ಲಾಪುರ | ಉಡ ಬೇಟೆ ಆರೋಪ: ತಂದೆ-ಮಗ ಬಂಧನ

ಅಕ್ರಮವಾಗಿ ವನ್ಯಪ್ರಾಣಿಗಳನ್ನು ಬೇಟೆಯಾಡಿ, ಅದರ ಮಾಂಸವನ್ನು ಮನೆಯಲ್ಲಿ ಇಟ್ಟುಕೊಂಡಿದ್ದ ಆರೋಪದ ಮೇಲೆ...