ಜಾತಿ ದೌರ್ಜನ್ಯ | ಸಿಎಂ ತವರಲ್ಲೇ ದಲಿತ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತರವರೂರು ಸಿದ್ದರಾಮಯ್ಯಹುಂಡಿ ಬಳಿಯ ಶ್ರೀನಿವಾಸಪುರ ಗ್ರಾಮದಲ್ಲಿ ದಲಿತ ಕುಟುಂಬವೊಂದಕ್ಕೆ ಸಾಮಾಜಿಕ ಬಹಿಷ್ಕಾರ ಹಾಕಿ, ಪ್ರಬಲ ಜಾತಿಯವರು ಜಾತಿ ದೌರ್ಜನ್ಯ ಎಸಗಿರುವ ಘಟನೆ ವರದಿಯಾಗಿದೆ.

- Advertisement -

ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಶ್ರೀನಿವಾಸಪುರದಲ್ಲಿ ದಲಿತ ಸಮುದಾಯದ ಸುರೇಶ್ ಎಂಬವರ ಕುಟುಂಬಕ್ಕೆ ಗ್ರಾಮದ ಪ್ರಬಲ ಜಾತಿ ಮುಖಂಡರಾದ ಚಿಕ್ಕಂಡಯ್ಯ, ಬಸವಯ್ಯ, ಮೋಟ ಮಹದೇವಯ್ಯ ಹಾಗೂ ಗ್ರಾಮ ಪಂಚಾಯತಿ ಮಾಜಿ ಸದಸ್ಯ ಮಹದೇವ್ ಎಂಬವರು ಗ್ರಾಮದೊಳಗೆ ಪಂಚಾಯತಿ ನಡೆಸಿ ಬಹಿಷ್ಕಾರ ಹಾಕಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

ಭಾರತದಲ್ಲಿ 23 ವರ್ಷ, ಭಾರತೀಯರ ಹೃದಯದಲ್ಲಿ ಸಾವಿರ ವರ್ಷ...

ʼನನ್ನನ್ನು ಕೊಲ್ಲಬಹುದು, ಆದರೆ ನನ್ನ ವಿಚಾರಗಳನ್ನು ಕೊಲ್ಲಲು ಸಾಧ್ಯವಿಲ್ಲʼ ಎಂದು ಕೊನೆಯ ಪತ್ರದಲ್ಲಿ ಬರೆದಿದ್ದ ಭಗತ್‌ ಸಿಂಗ್ ವಿಚಾರಗಳು 2026ರಲ್ಲೂ ಬದುಕಿವೆ. ಅದಕ್ಕಾಗಿ ಇನ್ನೂ ಸಾವಿರಾರು ವರ್ಷ ಭಾರತೀಯರ ಹೃದಯಗಳಲ್ಲಿ ಬದುಕಿರುತ್ತಾರೆ. ಇಂದು...

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

ನಾಲ್ಕು ವರ್ಷಗಳ ಹಿಂದೆ ರಂಗನಾಥಪುರ ಗ್ರಾಮದ ಪ್ರಮೋದ್ ಮತ್ತು ಸುರೇಶ್ ನಡುವೆ ಗಲಾಟೆ ನಡೆದಿತ್ತು. ಈ ವೇಳೆ, ಪ್ರಮೋದ್ ಮತ್ತು ಆತನ ಸಹಚರರು ಸುರೇಶ್ ಮನೆಗೆ ನುಗ್ಗಿ ಗಲಾಟೆ ಮಾಡಿದ್ದರು. ಅವರ ಮನೆಯ ಬೆಲೆ ಬಾಳುವ ವಸ್ತುಗಳನ್ನು ಧ್ವಂಸ ಮಾಡಿದ್ದರು. ಗಲಾಟೆ ವಿಚಾರವಾಗಿ ಗ್ರಾಮದೊಳಗೆ ಮುಖಂಡರು ಪಂಚಾಯತಿ ನಡೆಸಿ, ಇಬ್ಬರಿಗೂ ದಂಡ ವಿಧಿಸಿದ್ದರು. ಪ್ರಮೋದ್‌ಗೆ 25,000 ರೂ. ಮತ್ತು ಸುರೇಶ್​ಗೆ 15,000 ರೂ. ದಂಡ ವಿಧಿಸಲಾಗಿತ್ತು.

ಆದರೆ, ತಮ್ಮ ಮನೆಗೆ ಮೇಲೆ ದಾಳಿ ಮಾಡಿ, ಹಲವಾರು ವಸ್ತುಗಳನ್ನು ಧ್ವಂಸ ಮಾಡಿದ್ದ ಪ್ರಮೋದ್‌ಗೆ ಹೆಚ್ಚಿನ ದಂಡ ವಿಧಿಸದೆ, ತಮಗೂ ದಂಡ ವಿಧಿಸಿದ್ದ ಗ್ರಾಮದ ಮುಖಂಡರ ನಡೆಯನ್ನು ಸುರೇಶ್‌ ಖಂಡಿಸಿದ್ದರು. ತಮಗೆ ಅನ್ಯಾಯವಾಗಿದೆ. ನಾವು ದಂಡ ಪಾವತಿಸುವುದಿಲ್ಲ ಎಂದು ಸುರೇಶ್‌ ಹೇಳಿದ್ದರು.

ಈ ವರದಿ ಓದಿದ್ದೀರಾ?: ಕೆಪಿಎಸ್‌ಸಿ ಕರ್ಮಕಾಂಡ | ಮರುಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲೂ ಎಡವಟ್ಟು: ಬೇಜವಾಬ್ದಾರಿ ಅಧಿಕಾರಿಗಳ ತಲೆದಂಡವೇ ಸೂಕ್ತ ಕ್ರಮ?

ದಲಿತ ಸಮುದಾಯದ ಸುರೇಶ್ ಅವರು ನ್ಯಾಯ ಕೇಳಿದ್ದನ್ನು ಗ್ರಾಮದ ಪ್ರಬಲ ಜಾತಿಯ ಮುಖಂಡರಿಗೆ ಸಹಿಸಲಾಗಿಲ್ಲ. ಸುರೇಶ್‌ ಅವರ ವಾದದಿಂದ ಮುಜುಗರಕ್ಕೀಡಾಗಿ, ಕೆರಳಿದ ಮುಖಂಡರು, ಸುರೇಶ್‌ ತಪ್ಪು ಕಾಣಿಕೆ ಕಟ್ಟುವರೆಗೆ ಅವರ ಕುಟುಂಬವನ್ನು ಯಾರೂ ಒಳಗೊಳ್ಳುವಂತಿಲ್ಲ ಎಂದು ಸಾಮಾಜಿಕ ಬಹಿಷ್ಕಾರ ಹಾಕಿದ್ದಾರೆ.

ತಮಗೆ ಗ್ರಾಮದಿಂದ ಬಹಿಷ್ಕಾರ ಹಾಕಿದ್ದರ ಬಗ್ಗೆ ಸುರೇಶ್ ಮೈಸೂರು ಜಿಲ್ಲಾಧಿಕಾರಿ, ಪೊಲೀಸರು, ತಹಶೀಲ್ದಾರ್​ಗೆ ದೂರು ನೀಡಿದ್ದಾರೆ. ಆದರೂ, ಅವರಿಗೆ ಈವರೆಗೆ ನ್ಯಾಯ ದೊರೆತಿಲ್ಲ. ಅಧಿಕಾರಿಗಳು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂದು ವರದಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಇಂದಿನ ಪೀಳಿಗೆಗೆ ಭಗತ್ ಸಿಂಗ್‌ ಕುರಿತು ನೈಜ ಅಧ್ಯಯನ ಅವಶ್ಯ: ಬಾಲು ರಾಠೋಡ್

ಪ್ರಸ್ತುತ ಯುವಜನತೆ ಎದುರಿಸುತ್ತಿರುವ ನಿರುದ್ಯೋಗ, ಭ್ರಷ್ಟಾಚಾರ, ಮೂಲಭೂತವಾದ ಸೇರಿದಂತೆ ಇತರ ಗಂಭೀರ...

SIR: ಕೊಡಗಿನಲ್ಲಿ ಸೆ.29ರಂದು ಪಬ್ಲಿಕ್ ಹಿಯರಿಂಗ್; ಜಸ್ಟಿಸ್ ಗೋಪಾಲ ಗೌಡ-ನಟ ಪ್ರಕಾಶ್ ರಾಜ್ ಭಾಗಿ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ರಾಜ್ಯದಾದ್ಯಂತ ನಡೆಯುತ್ತಿರುವ...

ಶಿರಸಿ | 2013ರ ಮಹದಾಯಿ ಪ್ರಕರಣ: ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇರ್ ಬಂಧನ

ಕರ್ನಾಟಕ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ ಅವರನ್ನು...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...