ಜಾತಿ ಗಣತಿ | ಸಾಮಾಜಿಕ ನ್ಯಾಯ ಕಲ್ಪಿಸುವ ಕೇಂದ್ರದ ನಿರ್ಧಾರ ಸ್ವಾಗತಾರ್ಹ : ಶಾಸಕ ಶೈಲೇಂದ್ರ ಬೆಲ್ದಾಳೆ

Date:

Advertisements

ದೇಶ ಸ್ವಾತಂತ್ರ್ಯದ ಬಳಿಕ ಮೊದಲ ಬಾರಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರದ ಎನ್‌ಡಿಎ ಸರ್ಕಾರ ಜನಗಣತಿಯೊಂದಿಗೆ ಜಾತಿ ಗಣತಿ ಸಹ ಮಾಡುವ ದಿಟ್ಟ ನಿರ್ಧಾರ ಕೈಗೊಂಡಿರುವುದು ಐತಿಹಾಸಿಕವಾಗಿದೆ. ಇದು ಸರ್ವ ಸಮುದಾಯದವರಿಗೂ  ಸಾಮಾಜಿಕ ನ್ಯಾಯ ಕಲ್ಪಿಸಲು ಪೂರಕವಾದ ಕ್ರಾಂತಿಕಾರಿ ಕ್ರಮ ಎನಿಸಿದೆ ಎಂದು ಬಿಜೆಪಿ ರಾಜ್ಯ ಕಾರ್ಯದರ್ಶಿ, ಬೀದರ್ ದಕ್ಷಿಣ ಶಾಸಕ ಡಾ.ಶೈಲೇಂದ್ರ ಬೆಲ್ದಾಳೆ ಹೇಳಿದ್ದಾರೆ.

ʼ1931ರ ಬಳಿಕ ಇದೇ ಮೊದಲ ಬಾರಿಗೆ ದೇಶದಲ್ಲಿ ಜಾತಿ ಗಣತಿ ನಡೆಯುತ್ತಿರುವುದು ಸ್ವಾಗತಾರ್ಹ. ಕೇಂದ್ರದ ಈ  ನಿರ್ಧಾರದ ಹಿಂದೆ ಸಮಾಜದ ಎಲ್ಲ ಸಮುದಾಯಗಳ ಹಿತ ಅಡಗಿದೆ. ಜನಗಣತಿ ಜೊತೆಗೆ ಜಾತಿವಾರು ನಿಖರ ಮಾಹಿತಿ ಸಂಗ್ರಹಿಸುತ್ತಿರುವುದು ಸಾಮಾಜಿಕ, ಆರ್ಥಿಕ ರಚನೆ ಜೊತೆಗೆ ನಮ್ಮ‌ ಒಕ್ಕೂಟ ವ್ಯವಸ್ಥೆಯನ್ನು ಸಹ ಮತ್ತಷ್ಟು ಬಲಪಡಿಸಲಿದೆʼ ಎಂದು ಗುರುವಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ʼಸ್ವಾತಂತ್ರ್ಯ ನಂತರ ನಡೆದಿರುವ ಎಲ್ಲ ಜನಗಣತಿ ಸಂದರ್ಭದಲ್ಲಿ  ಜಾತಿ ಸೇರಿಸಲಿಲ್ಲ. ಈ ಹಿಂದೆ ದೀರ್ಘ ಕಾಲ ಆಡಳಿತದಲ್ಲಿದ್ದ ಕಾಂಗ್ರೆಸ್ ಪಕ್ಷ ಸತತವಾಗಿ ಜಾತಿ ಗಣತಿಗೆ ವಿರೋಧಿಸಿದೆ. ಕಾಂಗ್ರೆಸ್ ಸದಾ ಓಟ್ ಬ್ಯಾಂಕ್ ರಾಜಕೀಯ, ತುಷ್ಠೀಕರಣ ರಾಜಕೀಯ ಮಾಡುತ್ತಿದ್ದರಿಂದ ಈ ಕಾರ್ಯ ಕೈಗೊಂಡಿಲ್ಲ. ಆದರೆ ಎನ್‌ಡಿಎ ಸರ್ಕಾರ ಎಲ್ಲ ಜನಾಂಗದವರ ಅಭಿವೃದ್ಧಿ ಧ್ಯೇಯದಿಂದ ಈಗ ಮಹತ್ವದ ನಿರ್ಧಾರ ಕೈಗೊಂಡಿದೆ. ಬಿಜೆಪಿ ಸದಾ ಎಲ್ಲ ಜಾತಿಗಳ ವಿಕಾಸ ಬಯಸುತ್ತದೆ ಎಂಬುದಕ್ಕೆ ಈ ನಿರ್ಧಾರ ಸಾಕ್ಷಿʼ ಎಂದು ಬಣ್ಣಿಸಿದ್ದಾರೆ.

Advertisements

ʼಸಮಾಜದ ಸರ್ವ ಸಮುದಾಯದ ಹಿತದಿಂದ ಕೇಂದ್ರ ಸರ್ಕಾರ ಜಾತಿ ಗಣತಿಗೆ ನಿರ್ಧರಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಕದ್ದುಮುಚ್ಚಿ ಅವೈಜ್ಞಾನಿಕವಾಗಿ ಜಾತಿ ಗಣತಿ ನಡೆಸಿ ಸಮಾಜದಲ್ಲಿ ಅನಗತ್ಯ ಗೊಂದಲ ಸೃಷ್ಟಿಸಿದೆ. ಕೇಂದ್ರ ಸರ್ಕಾರ‌ ಈಗ ವೈಜ್ಞಾನಿಕವಾಗಿ ಹಾಗೂ ನಿಖರವಾಗಿ ಸಮೀಕ್ಷೆ ನಡೆಸಿ ವಾಸ್ತವ ಅಂಕಿ-ಅಂಶ ಜನರ ಮುಂದಿಡಲಿದೆ. ಇದು ಎಲ್ಲ ಸಮುದಾಯಗಳ ಆರ್ಥಿಕ ವಿಕಾಸಕ್ಕೆ ಪೂರಕವಾಗಲಿದೆʼ ಎಂದರು.

ಈ ಸುದ್ದಿ ಓದಿದ್ದೀರಾ? ಭಾರತದಲ್ಲಿ ಮೊದಲಿಗೆ ಜಾತಿಗಣತಿ ನಡೆದದ್ದು ಯಾವಾಗ? ಅಂಬೇಡ್ಕರ್ ಏನು ಹೇಳಿದ್ದರು?

ʼಜನಗಣತಿ ಮಾಡುವುದು ಸಂವಿಧಾನಬದ್ಧವಾಗಿ ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತದೆ.  ಆದರೆ ರಾಜ್ಯದಲ್ಲಿ ಆರ್ಥಿಕ, ಸಾಮಾಜಿಕ ಸಮೀಕ್ಷೆ ಹೆಸರಿನಲ್ಲಿ ಅವೈಜ್ಞಾನಿಕ ಜಾತಿ ಗಣತಿಯನ್ನು ನಡೆಸಿ ಸಮಾಜದಲ್ಲಿ ಜಗಳ ಹಚ್ಚುವ ಕೆಲಸ‌ ಮಾಡಲಾಗಿದೆ. ಕೆಲವೇ ತಿಂಗಳಲ್ಲಿ ಕೇಂದ್ರ ಸರ್ಕಾರದ  ಸಮಗ್ರ ಗಣತಿ ನಡೆಸಿ ವಾಸ್ತವ ಅಂಕಿ-ಅಂಶ ದೇಶದ ಮುಂದಿಡಲಿದೆ. ಆಗ ರಾಜ್ಯ ಸರ್ಕಾರ ತನ್ನ ಸ್ವಾರ್ಥದ ಬೇಳೆ ಬೇಯಿಸಿಕೊಳ್ಳಲು ನಡೆಸಿದ ಸಮೀಕ್ಷಾ ವರದಿಯ ನಿಜ ಬಣ್ಣ ಸಹ ಬಯಲಾಗಲಿದೆʼ ಎಂದು ಬೆಲ್ದಾಳೆ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X