ಹಾಸನ l ಹಳ್ಳಿಮೈಸೂರು ವಿ.ವಿ ಘಟಕ ಕಾಲೇಜಿನಲ್ಲಿ ಜಾತಿ ತಾರತಮ್ಯ, ಅಸ್ಪೃಶ್ಯತೆ ಆಚರಣೆ: ಕ್ರಮಕ್ಕೆ ಡಿಎಚ್ಎಸ್ ಆಗ್ರಹ

Date:

ಹಾಸನ ಜಿಲ್ಲೆ ಹೊಳೆನರಸೀಪುರ ತಾಲ್ಲೂಕು ಹಳ್ಳಿಮೈಸೂರಿನಲ್ಲಿ, ಹಾಸನ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಪರಿಶಿಷ್ಟ ಜಾತಿ(ಎಸ್.ಸಿ) ಸಮುದಾಯಕ್ಕೆ ಸೇರಿದ ವ್ಯಕ್ತಿಗೆ ನಿಂದನೆ ಖಂಡಿಸಿ ಡಿಎಚ್ಎಸ್ ವತಿಯಿಂದ ಸೋಮವಾರ ಪತ್ರಿಕಾ ಗೋಷ್ಠಿ ನಡೆಸಲಾಯಿತು.

- Advertisement -

ಹಳ್ಳಿಮೈಸೂರಿನಲ್ಲಿರುವ ವಿಶ್ವ ವಿದ್ಯಾನಿಲಯ ಘಟಕ ಕಾಲೇಜಿನಲ್ಲಿ ಪರಮೇಶ್ ಜಿ.ಕೆ ಎಂಬುವವರು ಕಳೆದ 4 ವರ್ಷಗಳಿಂದ ಪರಿಚಾರಕರಾಗಿ (ಅಟೆಂಡರ್) ಕಾರ್ಯ ನಿರ್ವಹಿಸುತ್ತಿದ್ದಾರೆ. ಕಾಲೇಜಿನಲ್ಲಿ ಅಥಿತಿ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿರುವ ಕವಿತಾ ಬಿ.ಡಿ ಮತ್ತು ಡಾ. ಚಂದ್ರಶೇಖರ್ ಎಚ್.ಆರ್ ಎಂಬುವವರು ಹಲವು ತಿಂಗಳುಗಳಿಂದ ಪರಮೇಶ್ ರವರು ಪರಿಶಿಷ್ಟ ಜಾತಿಯ ದಲಿತ ಸಮುದಾಯಕ್ಕೆ ಸೇರಿದವರು ಎಂಬ ಕಾರಣಕ್ಕೆ ಕಾಲೇಜಿನಲ್ಲಿ ಮದ್ಯಾಹ್ನ ಊಟದ ಸಂದರ್ಭಗಳಲ್ಲಿ ಜೊತೆಯಲ್ಲೇ ಒಟ್ಟಿಗೆ ಕೂತು ಊಟ ಮಾಡುವುದನ್ನು ಸಹಿಸದೆ, ಹಲವು ನೆಪಗಳನ್ನೊಡ್ಡಿ ಪರಮೇಶ್ ಊಟ ಮಾಡುವುದನ್ನು ತಪ್ಪಿಸಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಹಾಗೆಯೇ, ನಾಯಿಗೆ ನಿಂದಿಸುವ ನೆಪದಲ್ಲಿ ಬೈಯುವುದಲ್ಲದೆ. ನಾವು, ಒಬ್ಬ  ಎಸ್.ಸಿ (ಪರಿಶಿಷ್ಟ ಜಾತಿ) ಯವನ ಜೊತೆ ಕೂರಬೇಕಾ ಎಂದು ಸಾರ್ವಜನಿಕವಾಗಿ ಅವರಿವರ ನೆಪದಲ್ಲಿ ನಿಂದಿಸಿ, ಜಾತಿಯತೆ  ಅಸ್ಪೃಶ್ಯತೆ ಆಚರಣೆ ಮಾಡಿದ್ದಾರೆ. ಈ ಬಗ್ಗೆ ದಿನಾಂಕ: 20/03/2025 ರಂದು ಕವಿತ ಮತ್ತು ಚಂದ್ರಶೇಖರ್, ಪರಮೇಶ್ ಎಂಬ ವ್ಯಕ್ತಿಯ ಮೇಲೆ ಜಾತಿಯ ಹೆಸರು ಹಿಡಿದು ಅಪಮಾನಿಸಿ ಮಾತನಾಡಿದ್ದಾರೆ ಎಂದು ಡಿಎಚ್ಎಸ್ ಪೃಥ್ವಿ ತಿಳಿಸಿದರು.

ಈ ಎಲ್ಲಾ ಬೆಳವಣಿಗೆಗಳಿಂದ ನೊಂದ ಪರಮೇಶ್ ರವರು ಹಾಸನ ವಿಶ್ವ ವಿದ್ಯಾನಿಲಯದ ಕುಲ ಸಚಿವರಿಗೆ ಪತ್ರ ಬರೆದು, ಕವಿತ.ಬಿ.ಡಿ ಮತ್ತು ಡಾ.ಚಂದ್ರಶೇಖರ್ ಎಚ್. ಆರ್. ಎಂಬುವವರ ಮೇಲೆ 20.03.2025 ರಂದು ಹಳ್ಳಿ ಮೈಸೂರು ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಎಫ್ಐಆರ್ ಮಾಡಲಾಗಿರುತ್ತದೆ. ಅರಕಲಗೂಡು ಶಾಸಕ‌ ಎ. ಮಂಜು ರವರು ಕಾಲೇಜಿಗೆ ಭೇಟಿ ನೀಡಿ, ತಪ್ಪಿತಸ್ಥರ ಮೇಲೆ ಕ್ರಮ ಕೈಗೊಳ್ಳುವ ಬದಲು ಜಾತಿ ನಿಂದನೆಗೆ ಒಳಗಾಗಿ ನೊಂದ ಪರಮೇಶ್ ಎಂಬುವವರ ಮೇಲೆ ದಬ್ಬಾಳಿಕೆಯ ಮಾತುಗಳನ್ನಾಡಿ, ದೂರನ್ನು  ಹಿಂಪಡೆಯುವಂತೆ ಬೆದರಿಕೆ ಒಡ್ಡಿರುವುದು ಅತ್ಯಂತ ಖಂಡನೀಯವಾಗಿದೆ ಎಂದು ಪೃಥ್ವಿ ತಿಳಿಸಿದರು.

ಈ ಘಟನೆಗೆ ಕುರಿತು ವಿ.ವಿ ಕೇಂದ್ರದಿಂದ ಯಾರಿಗೂ ನೋಟೀಸ್ ನೀಡದೇ, ಯಾವುದೇ ವಿಚಾರಣೆ ನಡೆಸದೆ  ಹಾಗೂ ಈ ‌ಬಗ್ಗೆ ಸರಿಯಾದ ಪೊಲೀಸ್ ತನಿಕೆ ನಡೆಸದಿರುವುದು ಅತ್ಯಂತ ನಿರ್ಲಕ್ಷ್ಯತನವಾಗಿರುತ್ತದೆ. ಇದು ವಿದ್ಯಾರ್ಥಿಗಳ ನಡುವೆ, ಶೈಕ್ಷಣಿಕ ವಲಯದಲ್ಲಿ ಕೆಟ್ಟ ವ್ಯತಿರಿಕ್ತ ಪರಿಣಾಮ ಬೀರುತ್ತದೆ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪಾಠ ಹೇಳುವ ಉಪನ್ಯಾಸಕರೇ ಈ ರೀತಿಯಲ್ಲಿ ಅನಾಗರೀಕವಾಗಿ ಅಸ್ಪೃಶ್ಯತೆ, ಜಾತಿ ತಾರತಮ್ಯ ಮಾಡಿರುವುದು ಅತ್ಯಂತ ದುರಂತದ ಸಂಗತಿ ಮತ್ತು ನಾಗರೀಕ ಸಮಾಜ ತಲೆ ತಗ್ಗಿಸುವಂತಹದ್ದಾಗಿರುತ್ತದೆ.

ಇದನ್ನೂ ಓದಿದ್ದೀರಾ?ಹಾಸನ l ಆನೆ ದಾಳಿ: ತೋಟದ ಮಾಲೀಕ ಸಾವು 

ಈ ಘಟನೆಯನ್ನು ಹಾಗೂ ಶಾಸಕರಾದ ಎ. ಮಂಜುರವರು ಹಾಗು ಹಾಸನ ವಿ.ವಿ ಆಡಳಿತ ಮಂಡಳಿ ತಪ್ಪಿತಸ್ಥರ ಪರವಾಗಿರುವುದನ್ನು ಡಿಎಚ್ಎಸ್ ವಿರೋಧಿಸುತ್ತದೆ. ಈ ವೇಳೆ ಪೃಥ್ವಿ ಎಂ.ಜಿ, ರಾಜು ಸಿಗರನಹಳ್ಳಿ, ಮೀನಾಕ್ಷಿ ಎಚ್.ಟಿ, ಪ್ರಸನ್ನ ಕುಮಾರ್ ಸಿ.ಕೆ ಇದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ತುಳುನಾಡ ರಕ್ಷಣಾ ವೇದಿಕೆ ಮಹಿಳಾ ಘಟಕದಿಂದ ಅರ್ಥಪೂರ್ಣ ಗಾಂಧಿ ಜಯಂತಿ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜಯಂತಿಯ ಅಂಗವಾಗಿ ತುಳುನಾಡ ರಕ್ಷಣಾ ವೇದಿಕೆ (ರಿ.)...

ಉಡುಪಿ | ಸಮುದಾಯದ ಅಭಿವೃದ್ಧಿಗೆ ಉದ್ಯಮಿಗಳ ಒಗ್ಗಟ್ಟು ಅಗತ್ಯ: ಮುಮ್ತಾಜ್ ಮನ್ಸೂರಿ

ನಮ್ಮ ಸಮುದಾಯದ ದುರ್ಬಲ ವರ್ಗಗಳನ್ನು ಮೇಲಕ್ಕೆತ್ತಲು ಎಲ್ಲರೂ ಬೆಂಬಲ ಮತ್ತು ಸಹಕಾರದೊಂದಿಗೆ...

ರಾಯಚೂರು | ಎಸ್‌ಐಆರ್ ವಿರೋಧಿಸಿ ಪ್ರತಿಭಟನೆ: ಜ್ಞಾನೇಶ ಕುಮಾರ ರಾಜೀನಾಮೆಗೆ ನಾಗರಿಕ ವೇದಿಕೆ ಆಗ್ರಹ

ಕೇಂದ್ರ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ ಅವರ ರಾಜೀನಾಮೆಗೆ ಆಗ್ರಹಿಸಿ...