ಇನ್ಸ್‌ಪೆಕ್ಟರ್‌ ಮೇಲೆ ಜಾತಿ ದೌರ್ಜನ್ಯ ಆರೋಪ; ಡಿಸಿಪಿ ವಿರುದ್ಧ ಕ್ರಮಕ್ಕೆ ಆಗ್ರಹ

Date:

ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ದಲಿತರೆಂಬ ಕಾರಣಕ್ಕೆ ಅವರ ಕುರ್ಚಿಯಲ್ಲಿ ಕುಳಿತುಕೊಳ್ಳಲು ನಿರಾಕರಿಸಿದ್ದ ಬೆಂಗಳೂರು ಪಶ್ವಿಮ ವಿಭಾಗದ ಡಿಸಿಪಿ ಲಕ್ಷ್ಮಣ್‌ ನಿಂಬರಗಿ, ಬೇರೆ ಕುರ್ಚಿ ಹಾಕಿಕೊಂಡು ಕುಳಿತಿದ್ದರೆಂಬ ಆರೋಪ ಕೇಳಿಬಂದಿದೆ. ಜಾತಿ ದೌರ್ಜನ್ಯ ನಡೆಸಿದ ನಿಂಬರಗಿ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಸಂವಿಧಾನ ಸಂರಕ್ಷಣಾ ಮಹಾ ಒಕ್ಕೂಟ ದೂರು ನೀಡಿದೆ.

- Advertisement -

ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ಸಂತೋಷ್ ಕುಮಾರ್ ದಲಿತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ಖಾಸಗಿ ಸಂಸ್ಥೆಯೊಂದು ನಕಲಿ ದಾಖಲೆ ಸೃಷ್ಟಿಸಿ ಬ್ಯಾಂಕ್‌ಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಳ್ಳಲು ನಿಂಬರಗಿ ವಿಜಯನಗರ ಠಾಣೆಗೆ ಬಂದಿದ್ದರು. ಈ ವೇಳೆ, ಸಂತೋಷ್‌ ಅವರ ಜಾತಿ ತಿಳಿದುಕೊಂಡು, ಅವರ ಕುರ್ಚಿಯಲ್ಲಿ ಕೂರದೆ, ಬೇರೆ ಕುರ್ಚಿ ಹಾಸಿಕೊಂಡು ಕುಳಿತು ಅಸ್ಪೃಶ್ಯತಾ ಆಚರಣೆ ಮಾಡಿದ್ದಾರೆ ಎಂದು ಒಕ್ಕೂಟ ಆರೋಪಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಯಾವುದೇ ಠಾಣೆಗೆ ಮೇಲಧಿಕಾರಿಗಳು ಭೇಟಿ ನೀಡಿದಾಗ, ಆ ಠಾಣೆಯ ಮುಖ್ಯ ಅಧಿಕಾರಿಯ ಕುರ್ಚಿಯಲ್ಲಿಯೇ ಕುಳಿತುಕೊಳ್ಳುತ್ತಾರೆ. ಅಂತೆಯೇ ಬೇರೆ ಠಾಣೆಗಳಿಗೆ ಭೇಟಿ ನೀಡುವ ಡಿಸಿಪಿಗಳು ಆ ಠಾಣೆಯ ಇನ್ಸ್‌ಪೆಕ್ಟರ್‌ಗಳ ಕುರ್ಚಿಯಲ್ಲಿ ಕೂರುತ್ತಾರೆ. ಆದರೆ, ಡಿಸಿಪಿ ನಿಂಬರಗಿ ಅವರು ವಿಜಯನಗರ ಠಾಣೆಯ ಇನ್ಸ್‌ಪೆಕ್ಟರ್‌ ದಲಿತರೆಂಬ ಕಾರಣಕ್ಕೆ ಅವರು ಕುರ್ಚಿಯಲ್ಲಿ ಕೂರಲು ನಿರಾಕರಿಸಿದ್ದು, ಆ ಕುರ್ಚಿ ತೆಗೆಸಿ, ಅದೇ ಜಾಗದಲ್ಲಿ ಬೇರೆ ಕುರ್ಚಿ ಹಾಕಿಸಿಕೊಂಡು ಕುಳಿತಿದ್ದಾರೆ. ಶೋಷಿತ ಸಮುದಾಯಕ್ಕೆ ರಕ್ಷಣೆ ನೀಡಬೇಕಾದವರೇ ಜಾತಿ ದೌರ್ಜನ್ಯ ಎಸಗಿದರೆ, ದಮನಿತರ ಗತಿ ಏನು ಎಂದು ಒಕ್ಕೂಟದ ಸದಸ್ಯರು ಪ್ರಶ್ನಿಸಿದ್ದಾರೆ.

ಅಲ್ಲದೆ, ಬ್ಯಾಂಕ್‌ಗೆ ವಂಚಿಸಿದ ಖಾಸಗಿ ಸಂಸ್ಥೆಯ ವಿರುದ್ಧ ತನಿಖೆ ನಡೆಸದಂತೆ, ದೋಷಾರೋಪ ಪಟ್ಟಿ ಸಲ್ಲಿಸದಂತೆ ಇನ್ಸ್‌ಪೆಕ್ಟರ್‌ ಮೇಲೆ ಡಿಸಿಪಿ ಒತ್ತಡ ಹಾಕಿದ್ದಾರೆ. ಆದರೂ, ಸಂತೋಷ್‌ ಕುಮಾರ್ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಆದರೆ, ಆರೋಪಿಗಳನ್ನು ಬಂಧಿಸದಂತೆ ಮತ್ತೆ ಒತ್ತಡ ಹಾಕಿದ್ದು, ಬಂಧನ ವಾರೆಂಟ್‌ಅನ್ನು ಬೇರೆ ಠಾಣೆಗೆ ವರ್ಗಾಯಿಸಿ, ಸಂತೋಷ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದ್ದಾರೆ. ಡಿಸಿಪಿ ನಿಂಬರಗಿ ಆರೋಪಿಗಳ ರಕ್ಷಣೆಗೆ ಯತ್ನಿಸಿದ್ದಾರೆ. ಅವರ ವಿರುದ್ಧ ತನಿಖೆ ನಡೆಸಿ ಕ್ರಮ ಕೈಗೊಳ್ಳಬೇಕಂದು ಒಕ್ಕೂಟದ ಸದಸ್ಯರು ಆಗ್ರಹಿಸಿದ್ದಾರೆ.

ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಸಲ್ಲಿಸಿದ ದೂರಿನ ಪ್ರತಿಗೆ ಒಕ್ಕೂಟದ ಅಧ್ಯಕ್ಷ ಬಿ.ಗೋಪಾಲ್, ಮೈಸೂರಿನ ಉರಿಲಿಂಗ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ, ದಸಂಸ ರಾಜ್ಯ ಸಂಚಾಲಕ ಹೆಣ್ಣೂರು ಶ್ರೀನಿವಾಸ್‌, ಒಳಮೀಸಲಾತಿ ಹೋರಾಟ ಸಮಿತಿಯ ಬಸವರಾಜ ಕೌತಾಳ್, ಭೀಮ್‌ ಆರ್ಮಿ ಪ್ರಧಾನ ಕಾರ್ಯದರ್ಶಿ ರಾಜಗೋಪಾಲ್‌, ಎಂ.ಪಿ.ಗಿರೀಶ್‌ ದೇವನಹಳ್ಳಿ, ಸುರೇಶ್‌ ಸಹಿ ಹಾಕಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...