ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿ ಸ್ವೀಕಾರ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

  • ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ: ಸಿಎಂ
  • ‘ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ’

ಹಿಂದಿನ ಬಾರಿ ತಮ್ಮ ಸರ್ಕಾರದ ಅವಧಿಯಲ್ಲಿ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ಹಮ್ಮಿಕೊಳ್ಳಲಾದ ಜಾತಿವಾರು ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ವರದಿಯನ್ನು ಸ್ವೀಕರಿಸಿ, ಅದರ ದತ್ತಾಂಶದ ಆಧಾರದಲ್ಲಿ ವಿವಿಧ ಸಮುದಾಯಗಳಿಗೆ ಅನುಕೂಲ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಬುಧವಾರ ಕರ್ನಾಟಕ ಶೋಷಿತ ವರ್ಗಗಳ ಮಹಾಒಕ್ಕೂಟದ ನಿಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಚರ್ಚಿಸಿತು. ಈ ವೇಳೆ ಅವರು ಮಾತನಾಡಿದರು.

“ಜಾತಿವಾರು ಸಮೀಕ್ಷೆಯಿಂದ ಜನರಿಗೆ ಒದಗಿಸಬೇಕಾದ ಸೌಲಭ್ಯಗಳು, ಮೊದಲಾದ ಅಂಶಗಳ ಕುರಿತು ಸೂಕ್ತ ನಿರ್ಧಾರ ಕೈಗೊಳ್ಳಲು ಹಾಗೂ ಮೀಸಲಾತಿ ಮತ್ತಿತರ ಸೌಲಭ್ಯಗಳನ್ನು ಒದಗಿಸಲು ವೈಜ್ಞಾನಿಕ ಹಾಗೂ ನಿಖರ ಮಾಹಿತಿ ಅತಿ ಅಗತ್ಯ. ಈ ಉದ್ದೇಶದಿಂದ ಜಾತಿವಾರು ಸಮೀಕ್ಷೆಯನ್ನು ನಡೆಸಲಾಗಿತ್ತು. ಇದೀಗ ವರದಿಯನ್ನು ಸ್ವೀಕರಿಸಿ, ಅದರಲ್ಲಿನ ದತ್ತಾಂಶಗಳ ಆಧಾರದಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು” ಎಂದು ಭರವಸೆ ನೀಡಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜದ್ರೋಹದ ಕಾನೂನನ್ನು ಬಲಪಡಿಸಬೇಕೆಂಬ ಶಿಫಾರಸು ಅನಾಹುತಕಾರಿ

“ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡಲಾಗುವುದು. ಇಲ್ಲವಾದರೆ ಯಾರಿಗೂ ಸಾಮಾಜಿಕ ನ್ಯಾಯ ಒದಗಿಸಲು ಸಾಧ್ಯವಾಗದು” ಎಂದು ಮುಖ್ಯಮಂತ್ರಿಗಳು ಅಭಿಪ್ರಾಯಪಟ್ಟರು.

ಒಕ್ಕೂಟದ ಮುಖಂಡರಾದ ಕೆ.ಎಂ.ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಮಾವಳ್ಳಿ ಶಂಕರ್, ಪ್ರೊ.ರವಿ ವರ್ಮಕುಮಾರ್, ಅನಂತ್ ನಾಯಕ್, ಡಾ.ನರಸಿಂಹಯ್ಯ, ಪ್ರೊ.ಜಾಫೆಟ್, ಬಿ.ಟಿ.ಲಲಿತಾನಾಯಕ್, ಜಿ.ಎಸ್.ಪಾಟೀಲ್ ಸೇರಿ 150 ಕ್ಕೂ ಹೆಚ್ಚು ಮಂದಿ ನಾನಾ ಜಾತಿಗಳ ಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿದ್ದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಾಮರಾಜನಗರ | ಜಾತಿ ನಿಂದನೆ; ನಟ ಉಪೇಂದ್ರ ಬಂಧನಕ್ಕೆ ಆಗ್ರಹ

ನಟ ಉಪೇಂದ್ರ ಅವರು, ʼಊರು ಇದ್ದಲ್ಲಿ ಹೊಲಗೇರಿʼ ಎನ್ನುವ ಮಾತನ್ನು ಹೇಳುವುದರ...

ಕಾವೇರಿ ವಿವಾದ | ಬೆಂಗಳೂರು ಬಂದ್‌ಗೆ ಎಫ್‌ಐಟಿಯು ಬೆಂಬಲ: ಅಬ್ದುಲ್ ರಹಿಮಾನ್

ಕಾವೇರಿ ಜಲ ವಿವಾದದ ಹಿನ್ನಲೆಯಲ್ಲಿ ಮಂಗಳವಾರ ನಡೆಯಲಿರುವ ಬೆಂಗಳೂರು ಬಂದ್‌ಗೆ ಫೆಡರೇಶನ್...

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲು ಮಸೂದೆಗೆ ತಿದ್ದುಪಡಿ: ಮಲ್ಲಿಕಾರ್ಜುನ ಖರ್ಗೆ

2024ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದರೆ ಮಹಿಳಾ ಮೀಸಲಾತಿ ಮಸೂದೆಗೆ ತಿದ್ದುಪಡಿ ತರುವುದಾಗಿ...

ಬೀದರ್‌ | ಪಡಿತರದಲ್ಲಿ ಅಕ್ರಮ; 22 ನ್ಯಾಯಬೆಲೆ ಅಂಗಡಿಗಳ ಅಮಾನತು

ಪಡಿತರ ಮಾರಾಟದಲ್ಲಿ ನಿಗದಿತ ಬೆಲೆಗಿಂತ ಹೆಚ್ಚು ದರ ವಿಧಿಸುವುದು, ಇಲ್ಲವೇ ಬಯೋಮೆಟ್ರಿಕ್‌...