ಕಾವೇರಿ ವಿವಾದ | ದೆಹಲಿಯಲ್ಲಿ ಬುಧವಾರ ಮಹತ್ವದ ಸಭೆ; ಸಿಎಂ, ಡಿಸಿಎಂ ಭಾಗಿ

Date:

  • ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಸಿಡಬ್ಲ್ಯೂಎಂಎ ಆದೇಶ
  • ಕಾನೂನು ತಜ್ಞರ ಜೊತೆ ತುರ್ತು ಸಭೆ, ಸಚಿವರು, ಸಂಸದರು ಭಾಗಿ

ತಮಿಳುನಾಡಿಗೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡಲು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು (ಸಿಡಬ್ಲ್ಯೂಎಂಎ) ಕರ್ನಾಟಕ್ಕೆ ಆದೇಶಿಸಿದ್ದು, ಈ ಸಂಬಂಧ ಚರ್ಚಿಸಲು ದೆಹಲಿಯಲ್ಲಿ ಬುಧವಾರ ಮಹತ್ವದ ಸಭೆ ಆಯೋಜಿಸಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಹೊರಡಿಸಿದ ಆದೇಶವನ್ನು ಕಡ್ಡಾಯವಾಗಿ ಪಾಲನೆ ಮಾಡುವಂತೆ ಸಿಡಬ್ಲ್ಯೂಎಂಎ ಹೇಳಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಇಕ್ಕಟ್ಟಿನಲ್ಲಿ ಸಿಲುಕಿದೆ. ಹೀಗಾಗಿ ತುರ್ತು ಸಭೆ ಆಯೋಜಿಸಲಾಗಿದ್ದು, ನಾಳಿನ ಸಭೆಗೆ ಪಾಲ್ಗೊಳ್ಳಲು ಮಂಗಳವಾರ ಸಂಜೆಯೇ ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಗೆ ತೆರಳಲಿದ್ದಾರೆ.

ಬುಧವಾರ ದೆಹಲಿಯ ತಾಜ್ ಮಾನ್ ಸಿಂಗ್ ಹೋಟೆಲ್​ನಲ್ಲಿ ಕಾನೂನು ತಜ್ಞರ ಜೊತೆ ಸಭೆ ನಡೆಯಲಿದ್ದು, ಆ ಸಭೆಯಲ್ಲಿ ಡಿಸಿಎಂ ಡಿ ಕೆ ಶಿವಕುಮಾರ್, ರಾಜ್ಯವನ್ನು ಪ್ರತಿನಿಧಿಸುವ ಕೇಂದ್ರದ ಸಚಿವರು, ಲೋಕಸಭಾ ಸದಸ್ಯರು ಹಾಗೂ ರಾಜ್ಯಸಭಾ ಸದಸ್ಯರು ಭಾಗಿಯಾಗಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅರ್ಚಕರಾಗಿ ದಲಿತರು, ಮಹಿಳೆಯರ ನೇಮಕ ಕ್ರಾಂತಿಕಾರಿ ಹೆಜ್ಜೆಯೇ? ದೇಶ ಬದಲಾಯಿತೇ?

ಮುಂದಿನ ಕಾನೂನು ಪ್ರಕ್ರಿಯೆ ಬಗ್ಗೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರು ಮಾಹಿತಿ ಪಡೆಯಲಿದ್ದಾರೆ. ಜೊತೆಗೆ ಸುಪ್ರೀಂಕೋರ್ಟ್​ಗೆ ಮೇಲ್ಮನವಿ ಸಲ್ಲಿಸುವ ಬಗ್ಗೆ ಸಮಾಲೋಚನೆ ನಡೆಸಲಿದ್ದಾರೆ. ಬಳಿಕ ಕೇಂದ್ರದ ಬಳಿ ಬಾಕಿ ಯೋಜನೆಗಳ ಅನುದಾನ, ಬರ ಪರಿಹಾರದ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ | ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ ವ್ಯವಸ್ಥೆ; ಬಿಗಿ ಭದ್ರತೆ

ಬೆಳಗಾವಿ ನಗರದಲ್ಲಿ ಸೆಪ್ಟೆಂಬರ್ 28ರಂದು ನಡೆಯಲ್ಲಿರುವ ಗಣೇಶ ವಿಸರ್ಜನೆಗೆ 8 ಸ್ಥಳಗಳಲ್ಲಿ...

ರಾಯಚೂರು | ಮಸ್ಕಿ ತಾಲೂಕು ಶೈಕ್ಷಣಿಕ ಅಭಿವೃದ್ಧಿಗೆ ಡಿವಿಪಿ ಒತ್ತಾಯ

ಗ್ರಾಮೀಣ ಭಾಗದಿಂದ ಪಟ್ಟಣದ ಶಾಲಾ -ಕಾಲೇಜಿಗೆ ಆಗಮಿಸುವ ವಿದಾರ್ಥಿಗಳಿಗೆ ಮೂಲಭೂತ...

ಕೊಡಗು | ಕೆಎಂಎ ಪ್ರತಿಭಾ ಪುರಸ್ಕಾರ; ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ ಗೌರವ

ಕೊಡವ ಮುಸ್ಲಿಂ ಅಸೋಸಿಯೇಷನ್(ಕೆಎಂಎ) ವತಿಯಿಂದ ಕೊಡವ ಮುಸ್ಲಿಂ ಶಿಕ್ಷಣ ನಿಧಿಯ ಸಹಯೋಗದಲ್ಲಿ...

ಬೆಳಗಾವಿ | ಕಿತ್ತೂರು ಉತ್ಸವ: ಕವಿಗೋಷ್ಠಿಗೆ ಕವನ ಆಹ್ವಾನ

ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು (ಕಸಾಪ) ಆಯೋಜಿಸಿರುವ...