ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ರೈತರೊಬ್ಬರು ಗುಂಡಿಯಲ್ಲಿ ಕೂತು ತಲೆಯವರೆಗೆ ಮಣ್ಣು ಮುಚ್ಚಿಕೊಂಡು ಸಮಾಧಿ ಮಾಡಿಕೊಂಡು ಪ್ರತಿಭಟಸಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ರಾಜ್ಯದ ರೈತರಿಗೆ ಬೆಳೆ ಬೆಳೆಯಲು ನೀರಿಲ್ಲದ ಸಂದರ್ಭದಲ್ಲಿಯೂ ಕೆಆರ್‌ಎಸ್ ಜಲಾಶಯದಿಂದ ತಮಿಳುನಾಡಿಗೆ ನೀರು ಹರಿಸಲಾಗುತ್ತಿದೆ. ಇದರಿಂದ ರಾಜ್ಯದ ರೈತರಿಗೆ ಅನ್ಯಾಯವಾಗಿದೆ ಎಂದು ರೈತ ಸಂಘಟನೆಗಳು ಆರೋಪಿಸುತ್ತಿವೆ. ಪ್ರತಿಭಟನೆಗಳನ್ನು ನಡೆಸುತ್ತಿವೆ. ಇದೇ ಹೊತ್ತಿನಲ್ಲಿ, ಮಂಡ್ಯದ ಉಪ್ಪಾರಕನಹಳ್ಳಿ ಗ್ರಾಮದ ರೈತ ಶಿವಕುಮಾರ್ ಆರಾಧ್ಯ ಅವರು ತಲೆವರೆಗೆ ಮಣ್ಣಿನಲ್ಲಿ ಹೂತುಕೊಂಡು ಪ್ರತಿಭಟನೆ ನಡೆಸಿದ್ದಾರೆ.
“ರಾಜ್ಯದ ರೈತರಿಗೆ ನೀರು ಕೊಡದೆ ತಮಿಳುನಾಡಿಗೆ ನೀರು ಹಿರಿಸುವ ಮೂಲಕ ರೈತರನ್ನು ಜೀವಂತ ಸಮಾಧಿ ಮಾಡಲಾಗುತ್ತಿದೆ. ಎಷ್ಟೇ ಪ್ರತಿಭಟನೆ ನಡೆಸಿದರೂ ಪ್ರಯೋಜನವಾಗಿಲ್ಲ. ತಮಿಳುನಾಡಿಗೆ ನೀರು ಹರಿಸುವುದನ್ನು ಸರ್ಕಾರ ನಿಲ್ಲಿಸುತ್ತಿಲ್ಲ. ರೈತರನ್ನು ಸಮಾಧಿ ಮಾಡುವುದನ್ನು ಬಿಟ್ಟು, ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಬೇಕು” ಎಂದು ಅವರು ಒತ್ತಾಯಿಸಿದ್ದಾರೆ.
ಇತ್ತೀಚೆಗೆ, ಮಂಡ್ಯ ಬಂದ್‌ಗೆ ಕರೆಕೊಡಲಾಗಿತ್ತು. ಅಂದು ಬಿಜೆಪಿ ಕಾರ್ಯಕರ್ತರು ಚಡ್ಡಿ ಪ್ರತಿಭಟನೆ ನಡೆಸಿದ್ದರು. ರೈತಸಂಘದ ಕಾರ್ಯಕರ್ತರು ಕಾವೇರಿ ನದಿಯಲ್ಲಿ ನಿಂತು ಪ್ರತಿಭಟನೆ ನಡೆಸಿದ್ದರು. ಕಲವರು ಮದ್ಯದ ಬಾಟಲಿಗಳನ್ನು ಹಿಡಿದು, ಹಲವರು ಖಾಲಿ ಕೊಡ ಹಿಡಿದು ಪ್ರತಿಭಟನಡೆ ನಡೆಸಿದ್ದರು. ಇದೀಗ, ಈ ರೈತ ಸಮಾಧಿ ಮಾಡಿಕೊಂಡು ಪ್ರತಿಭಟನೆ ನಡೆಸಿದ್ದಾರೆ.