ಕಾವೇರಿ ವಿವಾದ | ರಾಯಚೂರು: ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ಪ್ರತಿಭಟನೆ

Date:

Advertisements

ಕಾವೇರಿ ನೀರು ಹಂಚಿಕೆಯಲ್ಲಿ ರಾಜ್ಯಕ್ಕೆ ಆಗುತ್ತಿರುವ ಅನ್ಯಾಯ ಖಂಡಿಸಿ ಕನ್ನಡಪರ ಸಂಘಟನೆ ಕಾರ್ಯಕರ್ತರು ರಾಯಚೂರು ನಗರದ ಗ್ರಾಮದೇವತೆ ಕಂದುಗಡ್ಡೆ ಮಾರಮ್ಮದೇವಿಗೆ ಪೂಜೆ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿದ್ದಾರೆ.

ಕಾವೇರಿಗೆ ನೀರು ಹಂಚಿಕೆ ಅನ್ಯಾಯ ಖಂಡಿಸಿ ಶುಕ್ರವಾರ ಕರ್ನಾಟಕ ಬಂದ್‌ ಮಾಡಲಾಗಿತ್ತು. ಬಂದ್‌ಗೆ ಬೆಂಬಲ ನೀಡಿ ಪ್ರತಿಭಟನೆ ನಡೆಸಿರುವ ಪ್ರತಿಭಟನಾಕಾರರು ಮಾರಮ್ಮದೇವಿಗೆ ಪೂಜೆ ಸಲ್ಲಿಸಿದ್ದಾರೆ.

“ಕಾವೇರಿ ನೀರು ನಿಯಂತ್ರಣ ಸಮಿತಿ ಅಕ್ಟೋಬರ್‌ 15ರವರೆಗೆ ಪ್ರತಿದಿನ 3,000 ಕ್ಯೂಸೆಕ್‌ ನೀರು ಹರಿಸುವಂತೆ ಆದೇಶಿಸಿರುವುದು ರಾಜ್ಯದ ರೈತರಿಗೆ ಮರಣ ಶಾಸನವಾಗಿದೆ. ರಾಜ್ಯದಲ್ಲಿ ಮಳೆ ಕೊರತೆಯಿಂದಾಗಿ ಜಲಾಶಯಗಳು ಬರಿದಾಗಿದ್ದು, ತಮಿಳುನಾಡಿಗೆ ನೀರು ಹರಿಸುವ ಪರಸ್ಥಿತಿಯಿಲ್ಲ. ರಾಜ್ಯದ ರೈತರನ್ನು ರಕ್ಷಿಸಬೇಕು” ಎಂದು ಪೂಜೆ ಸಲ್ಲಿಸಿದ್ದಾರೆ.

Advertisements

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಕೂಡಲೇ ಮಧ್ಯಸ್ಥಿಕೆ ವಹಿಸಿ ರಾಜ್ಯಕ್ಕೆ ನ್ಯಾಯ ಕೊಡಿಸಬೇಕು. ಕನ್ನಡಿಗರ ರಕ್ಷಣೆಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮುಂದಾಗಬೇಕು” ಎಂದು ಆಗ್ರಹಿಸಿದರು.

ಈ ಸುದ್ದಿ ಓದಿದ್ದೀರಾ? ಬೀದರ್‌ | ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಸರ್ಕಾರದ ಹಸ್ತಕ್ಷೇಪ: ಉಮಾಕಾಂತ ನಾಗಮಾರಪಳ್ಳಿ

ಈ ಸಂದರ್ಭದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ(ಶಿವರಾಮೇಗೌಡ) ಜಿಲ್ಲಾಧ್ಯಕ್ಷ ಅಶೋಕ ಕುಮಾರ ಜೈನ್, ಕರ್ನಾಟಕ ರಣಧೀರ ಪಡೆಯ ಜಿಲ್ಲಾಧ್ಯಕ್ಷ ರಮೇಶ, ನಮ್ಮ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ವೆಂಕಟಗಿರಿ ಸಾಗರ, ವೆಂಕಟೇಶ ಯರಮರಸ್, ಮಲ್ಲಿಕಾರ್ಜುನ, ಸಂಗಮೇಶ, ಕಿಶನರಾವ್, ಆಸೀಫ್, ಅಜೀಜ್, ನಾಗರಾಜ, ಸುದರ್ಶನ, ವೀರನಗೌಡ, ಮಲ್ಲಿಕಾರ್ಜುನ ತಾತ, ನರಸಿಂಹಲು, ಸಂಜಯ, ವೈಷ್ಣವ್, ಬನದಯ್ಯಸ್ವಾಮಿ, ಮೌನೇಶ, ದೀನೇಶ ಚೌದ್ರಿ, ಆಕಾಶ, ಭೀಮೇಷ, ವೀರೇಶ ಏಗನೂರು ಸೇರಿದಂತೆ ಬಹುತೇಕರು ಇದ್ದರು.

ವರದಿ : ಹಫೀಜುಲ್ಲ, ಸಿಟಿಜನ್ ಜರ್ನಲಿಸ್ಟ್‌, ರಾಯಚೂರು
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Download Eedina App Android / iOS

X