ಕಾವೇರಿ ವಿಚಾರ । ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸುವಂತೆ ಕೇಂದ್ರ ಜಲಶಕ್ತಿ ಸಚಿವರಿಗೆ ಮನವಿ

Date:

Advertisements

ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ನಗರದ 1.3 ಕೋಟಿ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ತಮಿಳನಾಡಿಗೆ ನೀರು ಹರಿಸುವಂತೆ ನೀಡಲಾಗಿರುವ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಅವೈಜ್ಞಾನಿಕ ಆದೇಶವನ್ನು ಹಿಂತೆಗೆದುಕೊಳ್ಳಬೇಕು. ಮಧ್ಯ ಪ್ರವೇಶಿಸಿ ಉಭಯ ರಾಜ್ಯಗಳ ಸಮಸ್ಯೆ ಬಗೆಹರಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಜಲ ಸಂರಕ್ಷಣಾ ಸಮಿತಿ ವತಿಯಿಂದ ಕೇಂದ್ರ ಜಲಶಕ್ತಿ ಸಚಿವರಿಗೆ ಹಕ್ಕೊತ್ತಾಯಗಳನ್ನು ಮಾಡಿದ್ದಾರೆ.

ಜತೆಗೆ ಕಾವೇರಿ ನೀರು ನಿಯಂತ್ರಣ ಪ್ರಾಧಿಕಾರದ ಅಧ್ಯಕ್ಷರಾದ ಎಸ್.ಕೆ.ಹಲ್ದಾರ್ ಅವರನ್ನು ಭೇಟಿಯಾಗಿ ರಾಜ್ಯದ ಪರಿಸ್ಥಿತಿ ಬಗ್ಗೆ ತಿಳಿಸಿದ್ದಾರೆ. ಇದೇ ವೇಳೆ ರಾಜಧಾನಿ ಬೆಂಗಳೂರಿಗೆ ಕುಡಿಯುವ ನೀರಿಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಮೇಕೆದಾಟು ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮತಿ ನೀಡಬೇಕು. ತನ್ನ ಪಾಲಿನ ನೀರನ್ನು ಕೇಳುವ ತಮಿಳುನಾಡಿಗೆ ಕರ್ನಾಟಕದ ಅರಣ್ಯಗಳ ರಕ್ಷಣೆ ಮತ್ತು ಸಂರಕ್ಷಣೆಗೆ ವರ್ಷಕ್ಕೆ ಕನಿಷ್ಠ ₹2000 ಕೋಟಿ ನೀಡುವಂತೆ ನಿರ್ದೇಶನ ನೀಡಬೇಕು ಎಂದು ಕೇಂದ್ರ ಸಚಿವರನ್ನು ಒತ್ತಾಯಿಸಿದ್ದಾರೆ.

ಕೇಂದ್ರ ಸಚಿವರ ಮುಂದಿಟ್ಟ ಐದು ಪ್ರಮುಖ ಹಕ್ಕೊತ್ತಾಯಗಳು

Advertisements

1. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಕಾವೇರಿ ನೀರು ನಿಯಂತ್ರಣ ಸಮಿತಿಯು ತಕ್ಷಣವೇ ತಮ್ಮ ಆದೇಶಗಳನ್ನು ಕಾಯ್ದಿರಿಸಬೇಕು ಮತ್ತು ಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು. ಕಾಗದದ ಮೇಲೆ ಒದಗಿಸಿದ ಅಂಕಿ ಅಂಶಗಳನ್ನು ಅವಲಂಬಿಸದೆ ನೇರ ವಾಸ್ತವತೆಯನ್ನು ಪರಿಗಣಿಸಬೇಕು.

2. ತಮಿಳುನಾಡಿಗೆ ಅವೈಜ್ಞಾನಿಕವಾಗಿ ಮಂಜೂರು ಮಾಡಲಾಗಿದೆ. ಜಲಶಕ್ತಿ ಸಚಿವಾಲಯ ಕೂಡಲೇ ಮಧ್ಯಪ್ರವೇಶಿಸಿ ಕಾವೇರಿ ನೀರು ಬಿಡುವುದನ್ನು ನಿಲ್ಲಿಸಬೇಕು. ಬಿಕ್ಕಟ್ಟನ್ನು ನಿರ್ಣಯಿಸಲು ತಜ್ಞರ ತಂಡವನ್ನು ನಿಯೋಜಿಸಬೇಕು.

3. ಕಾವೇರಿ ಜಲಾನಯನ ಪ್ರದೇಶದ ಬರ ಪರಿಸ್ಥಿತಿಯನ್ನು ನೇರವಾಗಿ ಅರ್ಥ ಮಾಡಿಕೊಳ್ಳಲು ಕರ್ನಾಟಕ ಮತ್ತು ತಮಿಳುನಾಡು ಎರಡೂ ರಾಜ್ಯಗಳ ಮುಖ್ಯಮಂತ್ರಿಗಳು, ಜಲಸಂಪನ್ಮೂಲ ಸಚಿವರು ಮತ್ತು ಸಂಬಂಧಪಟ್ಟ ಅಧಿಕಾರಿಗಳ ಸಭೆಯನ್ನು ಕರೆಯಬೇಕು.

4. ಉತ್ತಮ ಮಳೆಯಾಗುವ ವರ್ಷಗಳಲ್ಲಿ ತಮಿಳುನಾಡಿಗೆ 480 ಟಿಎಂಸಿಗಿಂತ ಹೆಚ್ಚು ನೀರು ಬಿಡಲಾಗುತ್ತದೆ. ತಮಿಳುನಾಡಿಗೆ ಹೆಚ್ಚುವರಿ ನೀರನ್ನು ನಿರ್ವಹಿಸಲು ಸಾಕಷ್ಟು ಯಾಂತ್ರಿಕ ವ್ಯವಸ್ಥೆ ಇಲ್ಲ. ಅದು ಬಂಗಾಳಕೊಲ್ಲಿಯಲ್ಲಿ ಕೊನೆಗೊಳ್ಳುತ್ತದೆ. ಮೇಕೆದಾಟು ಅಣೆಕಟ್ಟು ನಿರ್ಮಿಸಿದಾಗ 65 ಟಿಎಂಸಿ ನೀರನ್ನು ಸುಲಭವಾಗಿ ಸಂಗ್ರಹಿಸಬಹುದು. ಇದು ಕರ್ನಾಟಕ ಮತ್ತು ತಮಿಳುನಾಡು ಎರಡಕ್ಕೂ ಬರಗಾಲವನ್ನು ಸಮರ್ಪಕವಾಗಿ ನಿಭಾಯಿಸಲು ಸಹಾಯ ಮಾಡುತ್ತದೆ. ಜಲಶಕ್ತಿ ಸಚಿವಾಲಯವು ಈ ಯೋಜನೆಯನ್ನು ಪೂರ್ವಭಾವಿಯಾಗಿ ಕೈಗೆತ್ತಿಕೊಳ್ಳಲು ಮತ್ತು ಅಗತ್ಯವಿರುವ ಅನುಮತಿಗಳನ್ನು ತ್ವರಿತಗೊಳಿಸಬೇಕು.

5. ಸಮೃದ್ಧ ಮಳೆಗೆ ನಮಗೆ ಸಹಾಯ ಮಾಡುವ ಪಶ್ಚಿಮ ಘಟ್ಟಗಳಲ್ಲಿನ ಅರಣ್ಯಗಳನ್ನು ಸಂರಕ್ಷಿಸುವ ಮತ್ತು ನಿರ್ವಹಿಸುವ ಸಂಪೂರ್ಣ ಹೊರೆಯನ್ನು ಕರ್ನಾಟಕ ರಾಜ್ಯ ಹೊತ್ತಿದೆ. ತನ್ನ ಪಾಲಿನ ನೀರನ್ನು ಕೇಳುವ ತಮಿಳುನಾಡು ಕರ್ನಾಟಕದ ಅರಣ್ಯಗಳ ರಕ್ಷಣೆ ಮತ್ತು ಸಂರಕ್ಷಣೆಗೆ ವರ್ಷಕ್ಕೆ ಕನಿಷ್ಠ ₹2000 ಕೋಟಿ ನೀಡುವಂತೆ ನಿರ್ದೇಶನ ನೀಡಬೇಕು.

ರೈತ ಮುಖಂಡ ಕುರುಬೂರು ಶಾಂತಕುಮಾರ್‌, ಆಮ್‌ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್‌ ದಾಸರಿ, ಕನ್ನಡ ಚಳವಳಿ ನಾಯಕರು ಸಂಘಟನೆಯ ಅಧ್ಯಕ್ಷರಾದ ಗುರುದೇವ್‌ ನಾರಾಯಣಕುಮಾರ್‌, ಕಾರ್ಯದರ್ಶಿ ವಿಜಯ್ ಸಿಂಗ್, ಎಎಪಿ ಮುಖಂಡರಾದ ಜಗದೀಶ್ ಬಾಬು ಒಳಗೊಂಡ ನಿಯೋಗವು ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಸೋಮವಾರ ದೆಹಲಿಯ ಕಚೇರಿಯಲ್ಲಿ ಭೇಟಿ ಮಾಡಿದರು.

ಈ ಸುದ್ದಿ ಓದಿದ್ದೀರಾ? ಬಿಎಂಟಿಸಿ | ಅನಧಿಕೃತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ₹6.10 ಲಕ್ಷ ದಂಡ ಸಂಗ್ರಹ

ಆಮ್ ಆದ್ಮಿ ಪಕ್ಷದಿಂದ ಮೇಕೆದಾಟು ಅಣೆಕಟ್ಟು ಯೋಜನೆಗಾಗಿ ಮುಂದುವರಿದ ಪತ್ರ ಚಳವಳಿ

ಬೆಂಗಳೂರಿನಲ್ಲಿ ಕುಡಿಯುವ ನೀರಿನ ಶಾಶ್ವತ ಯೋಜನೆಗೆ ಮೇಕೆದಾಟು ಅಣೆಕಟ್ಟು ಅನುಷ್ಠಾನಕ್ಕೆ ತರಲು ಪಕ್ಷದ ವತಿಯಿಂದ ಪತ್ರ ಚಳವಳಿ ನಡೆಯುತ್ತಿದೆ. ಪ್ರಧಾನ ಮಂತ್ರಿಗಳಿಗೆ ಈ ಪತ್ರ ನೀಡಲು ಚಳವಳಿ ಕಾರ್ಯಕ್ರಮವು ಮಂಗಳವಾರ ಶಾಂತಿನಗರ ವಿಧಾನಸಭಾ ಕ್ಷೇತ್ರದ ಕೇಂಬ್ರಿಡ್ಜ್ ಬಡಾವಣೆಯಲ್ಲಿ ನಡೆಯಿತು.

ಸ್ಥಳೀಯ ನಾಗರಿಕರಿಂದ ಅತ್ಯುತ್ತಮವಾದ ಬೆಂಬಲ ದೊರೆತು ನೂರಾರು ಜನ ಪತ್ರಕ್ಕೆ ಸಹಿ ಹಾಕಿದರು. ಪಕ್ಷದ ರಾಜ್ಯ ಉಪಾಧ್ಯಕ್ಷ ಮೋಹನ್ ದಾಸರಿ ನೇತೃತ್ವದಲ್ಲಿ ನಡೆಯುತ್ತಿರುವ ಅಭಿಯಾನ ಬೆಂಗಳೂರು ಪ್ರಧಾನ ಕಾರ್ಯದರ್ಶಿ ಜಗದೀಶ್ ಚಂದ್ರ, ಅನಿಲ್ ನಾಚಪ್ಪ, ಶಿವಕುಮಾರ್ ಇನ್ನಿತರ ನಾಯಕರುಗಳು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

Download Eedina App Android / iOS

X