ತಮಿಳುನಾಡಿಗೆ ನೀರು ಹರಿಸಲು ಸಾಧ್ಯವಿಲ್ಲ; ಕೇಂದ್ರ ಜಲಶಕ್ತಿ ಸಚಿವರಿಗೆ ಪತ್ರ ಬರೆದು ಸಿಎಂ ಮನವರಿಕೆ

Date:

Advertisements
  • ರಾಜ್ಯದ ರೈತರನ್ನು ಸಂಕಷ್ಟಕ್ಕೆ ದೂಡಲು ಸರ್ಕಾರ ಸಿದ್ಧವಿಲ್ಲ
  • ಕರ್ನಾಟಕದ ಮನವಿಯನ್ನು ಪರಿಗಣಿಸಲು ಸಿಎಂ ಕೋರಿಕೆ

ಕಾವೇರಿ ನೀರಿನ ಮೇಲೆ ಅವಲಂಬಿತರಾಗಿರುವ ರೈತರು, ಕುಡಿಯುವ ನೀರಿಗಾಗಿ ಅವಲಂಬಿತರಾಗಿರುವ ಜಾನುವಾರು ಹಾಗೂ ಮಾನವರ ಹಿತಾಸಕ್ತಿಯನ್ನು ಸಂಕಷ್ಟಕ್ಕೆ ದೂಡಿ ಕಾವೇರಿ ನೀರು ನಿಯಂತ್ರಣಾ ಸಮಿತಿಯ ತೀರ್ಪನ್ನು ಅನುಷ್ಠಾನ ಮಾಡಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರಿಗೆ ತಿಳಿಸಿದ್ದಾರೆ.

ಈ ಕುರಿತು ಪತ್ರ ಬರೆದಿರುವ ಮುಖ್ಯಮಂತ್ರಿಗಳು, “ಕಾವೇರಿ ನೀರು ನಿಯಂತ್ರಣಾ ಸಮಿತಿ ನಿರ್ಧರಿಸಿರುವಂತೆ 15 ದಿನಗಳ ಕಾಲ ಕೆ.ಆರ್.ಎಸ್. ಹಾಗೂ ಕಬಿನಿಯಿಂದ 5000 ಕ್ಯೂಸೆಕ್‌ ನೀರನ್ನು ಬಿಳಿಗುಂಡ್ಲುವಿನಿಂದ ಹರಿಸುವುದು ಸಾಧ್ಯವಿಲ್ಲ” ಎಂದು ಸ್ಪಷ್ಟಪಡಿಸಿದ್ದಾರೆ.

“ಕರ್ನಾಟಕದ ಮನವಿಯನ್ನು ಪರಿಗಣಿಸಿ ಕಾವೇರಿ ನೀರು ನಿಯಂತ್ರಣಾ ಸಮಿತಿಯ ನಿರ್ಧಾರವನ್ನು ಮರುಪರಿಶೀಲಿಸಬೇಕು. ಬರಪೀಡಿತವಾಗಿರುವ ರಾಜ್ಯದ ಜನತೆ ಹಾಗೂ ಜಾನುವಾರುಗಳ ಹಿತಾಸಕ್ತಿಯನ್ನು ಕೇಂದ್ರ ಸರ್ಕಾರ ಕಾಪಾಡಬೇಕು” ಎಂದು ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರೈತರ ಆತ್ಮಹತ್ಯೆ ತೀವ್ರ ಹೆಚ್ಚಳ; ಅನ್ನದಾತರ ಬದುಕಿಗೆ ಬೇಕಿದೆ ಭರವಸೆ

“ಕರ್ನಾಟಕ ರಾಜ್ಯವು ಸಮಿತಿಯ ಹಿಂದಿನ ನಿರ್ದೇಶನವನ್ನು ಪಾಲಿಸಿದ್ದು, ಕಾವೇರಿ ಜಲಾನಯನ ಪ್ರದೇಶದಲ್ಲಿರುವ ಬಹುತೇಕ ತಾಲ್ಲೂಕುಗಳು ಮುಂಗಾರು ವೈಫಲ್ಯದಿಂದ ತೀವ್ರ ಬರಕ್ಕೆ ತುತ್ತಾಗಿವೆ. ಜೂನ್ ಮಾಹೆಯಿಂದ ಸೆಪ್ಟೆಂಬರ್ ಮಧ್ಯದವರೆಗೂ 92 ದಿನಗಳ ಕಾಲ 100 ಟಿಎಂಸಿ ನೀರನ್ನು ತಮಿಳುನಾಡು ಬಳಸಿಕೊಂಡಿದ್ದು, ಇದು ಹಿಂದೆ 1987-88, 2002-03, 2012-13, 2016-17 ಹಾಗೂ 2017-18 ರ ಬರಪರಿಸ್ಥಿತಿಯಲ್ಲಿ ಬಳಕೆಯಾದ ನೀರಿಗಿಂತಲೂ ಹೆಚ್ಚಾಗಿದೆ. ಕರ್ನಾಟಕದ ಜಲಾಶಯಗಳಲ್ಲಿ ಸಂಕಷ್ಟದ ಸ್ಥಿತಿಯಿದ್ದರೂ ತಮಿಳುನಾಡು ಭತ್ತವನ್ನು ವ್ಯಾಪಕವಾಗಿ ಬೆಳೆಯುತ್ತಿದೆ” ಎಂದು ಮುಖ್ಯಮಂತ್ರಿಗಳು ವಿವರಿಸಿದ್ದಾರೆ.

“ಸೆಪ್ಟೆಂಬರ್ 12 ಹಾಗೂ 24ರವರೆಗೆ ಐಎಂಡಿ ಹವಾಮಾನ ಮುನ್ಸೂಚನೆಯಂತೆ ಮಳೆಯಾಗುವ ಲಕ್ಷಣಗಳಿಲ್ಲ. ಮೆಟ್ಟೂರು ಜಲಾಶಯದಲ್ಲಿ ಡಿ: 12.09.2023 ರಂದು 24.233 ಟಿಎಂಸಿ ಸಂಗ್ರಹವಿದ್ದು ( live storage) ಪ್ರಸ್ತುತ ಬಿಡುಗಡೆಯಾಗಿರುವ ನೀರನ್ನು ಪರಿಗಣಿಸಿದರೆ, ತಮಿಳುನಾಡಿನ ಅವಶ್ಯಕತೆಯನ್ನು ಪೂರೈಸಲು ಸಾಕಾಗುವಷ್ಟು ನೀರು ಲಭ್ಯವಿದೆ. ಕರ್ನಾಟಕದ ಬೆಳೆಗಳ ರಕ್ಷಣೆಗೆ 70 ಟಿಎಂಸಿ, ಕುಡಿಯುವ ನೀರಿಗೆ 33 ಹಾಗೂ ಕೈಗಾರಿಕೆಗಳಿಗೆ 3 ಟಿಎಂಸಿ ನೀರು ಅಗತ್ಯವಿದೆ. ನಮ್ಮ ಸಂಗ್ರಹದಲ್ಲಿ 53 ಟಿಎಂಸಿ ಮಾತ್ರವಿದ್ದು, ನಮ್ಮ ಅವಶ್ಯಕತೆಗಳನ್ನು ಪೂರೈಸಿಕೊಳ್ಳಲು ಈ ಸಂಗ್ರಹ ಸಾಕಾಗುವುದಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X