ಬಸವಣ್ಣನವರ ಜಯಂತಿಯೊಂದಿಗೆ ರೇಣುಕಾಚಾರ್ಯ ಜಯಂತಿ ಆಚರಣೆ ಖಂಡನೀಯ : ಬಸವಲಿಂಗ ಪಟ್ಟದ್ದೇವರು

Date:

Advertisements

ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯೊಂದಿಗೆ ಪೌರಾಣಿಕ, ಕಾಲ್ಪನಿಕ ರೇಣುಕಾಚಾರ್ಯರ ಜಯಂತಿ ಆಚರಿಸಬೇಕೆಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಶಂಕರ ಬಿದರಿ ಹೊರಡಿಸಿರುವ ಸುತ್ತೋಲೆ ತೀವ್ರ ಖಂಡನಾರ್ಹವಾಗಿದ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ಬಸವಲಿಂಗ ಪಟ್ಟದ್ದೇವರು ತಿಳಿಸಿದ್ದಾರೆ.

ಶಂಕರ ಬಿದರಿ ಅವರ ನಡೆ ಇತಿಹಾಸಕ್ಕೆ ಮಾಡುವ ಬಹುದೊಡ್ಡ ದ್ರೋಹ. ಅವರ ಈ ನಿರ್ಧಾರದಿಂದ ಇಡೀ ಲಿಂಗಾಯತ ಸಮಾಜಕ್ಕೆ ಬೇಸರವಾಗಿದೆ. ಬಿದರಿ ಅವರು ಬಸವತತ್ವ ಅರಿತುಕೊಂಡವರು. ಬಸವತತ್ವದ ದಂಡನಾಯಕರಾದ ಇಳಕಲ್ ಮತ್ತು ಗದಗ ಹಿರಿಯ ಸ್ವಾಮೀಜಿಗಳ ಆತ್ಮೀಯ ಶಿಷ್ಯರಾಗಿದ್ದವರು. ಬಸವ ಜಯಂತಿಯೊಂದಿಗೆ ಬೇರೊಂದು ಜಯಂತಿ ತಳುಕು ಹಾಕುವುದು ಸರಿಯಲ್ಲ. ಅವರು ತಮ್ಮ ನಿರ್ಧಾರ ಹಿಂಪಡೆಯಬೇಕೆಂದು ಆಗ್ರಹಿಸಿದ್ದಾರೆ

ʼವಿಶ್ವಗುರು ಬಸವಣ್ಣನವರು ಜಗತ್ತು ಕಂಡ ಅಪರೂಪದ ಐತಿಹಾಸಿಕ ಮಹಾಪುರುಷರು ಎಂಬುದು ಸರ್ವಶೃತವಾದದ್ದು. ಅವರ ಚಿಂತನೆಗಳು ಇಂದು ಜಗತ್ತನ್ನೆ ಬೆಳೆಗುತ್ತಿವೆ. ರಾಷ್ಟ್ರ, ರಾಜ್ಯ ನಾಯಕರು ಬಸವಣ್ಣನವರ ತತ್ವಾದರ್ಶಗಳು ದೇಶ ವಿದೇಶದ ವೇದಿಕೆಗಳಲ್ಲಿ ಅಭಿವ್ಯಕ್ತಗೊಳಿಸುತ್ತಿದ್ದಾರೆ. ಕರ್ನಾಟಕ ಸರಕಾರವೇ ವಿಶ್ವಗುರು ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿದೆʼ ಎಂದರು.

Advertisements

ʼಬಸವಣ್ಣನವರ ಜಯಂತಿಗೆ ಶತಮಾನಕ್ಕಿಂತಲೂ ಹೆಚ್ಚಿನ ಇತಿಹಾಸವಿದೆ. ಇದನ್ನು ಆಚರಿಸಲು ಹರ್ಡೆಕರ್‌ ಮಂಜಪ್ಪ ಮತ್ತು ಇನ್ನಿತರ ಮಹನೀಯರು ಪಟ್ಟ ಪರಿಶ್ರಮ ಮರೆಯುವಂತಹದ್ದಲ್ಲ. ಬಿದರಿ ಅವರ ನಿರ್ಧಾರವು ಅವರ ಪರಿಶ್ರಮ, ತ್ಯಾಗಕ್ಕೆ ಚ್ಯುತಿ ತರುವಂತಹದ್ದು. ಈಗಾಗಲೇ ರೇಣುಕಾಚಾರ್ಯರನ್ನು ನಂಬುವ ಸದ್ಭಕ್ತರು ಫಾಲ್ಗುಣ ಶುದ್ಧ ತ್ರಯೋದಶಿದಂದು ಅವರ ಜಯಂತಿ ಆಚರಿಸುತ್ತಿದ್ದಾರೆ. ಆದರೆ, ಅದನ್ನು ಬಸವ ಜಯಂತಿಗೆ ತಳಕು ಹಾಕುವುದು ಅನೈತಿಕ ಮತ್ತು ಅಕ್ಷಮ್ಯವಾದದ್ದುʼ ಎಂದಿದ್ದಾರೆ.

ʼತಮ್ಮ ಒಂದು ತಪ್ಪು ಹೆಜ್ಜೆ ಸಮಾಜದ ನೂರಾರು ವರ್ಷಗಳ ಭವಿಷ್ಯ ಕೆಡಿಸುತ್ತದೆ. ಇದು ಶರಣ ಚರಿತ್ರೆಯ ಇತಿಹಾಸದಲ್ಲಿ ಕಪ್ಪು ಚುಕ್ಕೆಯಾಗಿ ನಿಮ್ಮ ಹಣೆಪಟ್ಟಿಗೆ ಅಂಟಿಕೊಳ್ಳುತ್ತದೆ. ಇದನ್ನು ಅರಿತುಕೊಳ್ಳಬೇಕು. ತಿಳಿದು ತಿಳಿಯಲಾರದೋ ಆದ ಈ ತಪ್ಪನ್ನು ವೀರಶೈವ-ಲಿಂಗಾಯತ ಮಹಾಸಭೆ ಸರಿಪಡಿಸಬೇಕು. ಇಲ್ಲದಿದ್ದರೆ ಭವ್ಯ ಪರಂಪರೆಯ ಇತಿಹಾಸ ಇರುವ ಲಿಂಗಾಯತ ಸಮಾಜ ನಿಮ್ಮನ್ನು ಎಂದು ಕ್ಷಮಿಸುವುದಿಲ್ಲʼ ಎಂದಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೀದರ್‌ ಜಿಲ್ಲಾಡಳಿತದಿಂದ ಡಾ.ಬಿ.ಆರ್.ಅಂಬೇಡ್ಕರ್ ಅವರ 134ನೇ ಜಯಂತೋತ್ಸವ ಕಾರ್ಯಕ್ರಮ

ಬಸವಾಭಿಮಾನಿಗಳಾದ ಶಂಕರ ಬಿದರಿ ಅವರು ಈ ನಿರ್ಧಾರ ಹಿಂದೆ ಪಡೆಯುತ್ತಾರೆ ಎಂದು ನಾವು ನಂಬಿದ್ದೇವೆ ಎಂದು ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ಅಧ್ಯಕ್ಷ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ಶನಿವಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X