ಕೊಡಗಿನಲ್ಲಿ ಜನಗಣತಿ ಚುರುಕು: ‘ನಮ್ಮ ಗಣತಿ, ನಮ್ಮ ಅಭಿವೃದ್ಧಿ’ ಅಭಿಯಾನಕ್ಕೆ ವೇಗ

Date:

‘ನಮ್ಮ ಗಣತಿ, ನಮ್ಮ ಅಭಿವೃದ್ಧಿ’ ಎಂಬ ಘೋಷಣೆಯಡಿ 2027ರ ಜನಗಣತಿಯ ಮೊದಲ ಹಂತ ಈಗಾಗಲೇ ಆರಂಭಗೊಂಡಿದ್ದು, ಸ್ವಯಂ ಗಣತಿ ಕಾರ್ಯ ಪೂರ್ಣಗೊಂಡಿದೆ ಎಂದು ಮಡಿಕೇರಿಯಲ್ಲಿ ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ತಿಳಿಸಿದ್ದಾರೆ.

- Advertisement -

ಕೊಡಗು ಜಿಲ್ಲೆಯಲ್ಲಿ ಒಟ್ಟು ಸುಮಾರು 1,74,114 ಕುಟುಂಬಗಳಿದ್ದು, ಇದುವರೆಗೆ 7,379 ಕುಟುಂಬಗಳ ಗಣತಿ ಪ್ರಗತಿ ಸಾಧಿಸಲಾಗಿದೆ. ಉಳಿದ ಗಣತಿ ಕಾರ್ಯವನ್ನು ಏಪ್ರಿಲ್ 16ರಿಂದ ಮೇ 15ರವರೆಗೆ ಗಣತಿದಾರರು ಮನೆಮನೆಗೆ ಭೇಟಿ ನೀಡಿ ಪೂರ್ಣಗೊಳಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಮನೆಮನೆ ಗಣತಿ ಕಾರ್ಯಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 999 ಗಣತಿದಾರರನ್ನು ನಿಯೋಜಿಸಲಾಗಿದೆ. ಮಡಿಕೇರಿ ತಾಲ್ಲೂಕಿಗೆ 187, ಮಡಿಕೇರಿ ನಗರಕ್ಕೆ 61, ಸೋಮವಾರಪೇಟೆ ತಾಲ್ಲೂಕಿಗೆ 186, ಸೋಮವಾರಪೇಟೆ ಪಟ್ಟಣ ಪಂಚಾಯಿತಿಗೆ 12, ವಿರಾಜಪೇಟೆ ತಾಲ್ಲೂಕಿಗೆ 133, ವಿರಾಜಪೇಟೆ ಪುರಸಭೆಗೆ 36, ಪೊನ್ನಂಪೇಟೆ ತಾಲ್ಲೂಕಿಗೆ 161, ಪೊನ್ನಂಪೇಟೆ ಪಟ್ಟಣ ಪಂಚಾಯಿತಿಗೆ 19, ಕುಶಾಲನಗರ ತಾಲ್ಲೂಕಿಗೆ 158 ಹಾಗೂ ಕುಶಾಲನಗರ ಪುರಸಭೆಗೆ 46 ಗಣತಿದಾರರನ್ನು ನಿಯೋಜಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಮೈಸೂರು | ಜಾಗೃತ ಕರ್ನಾಟಕ ಸಂಘಟನೆಯಿಂದ ಯುವಜನರಿಗೆ ಏ.20ರಂದು ಭಾಷಣ–ಪ್ರಬಂಧ ಸ್ಪರ್ಧೆ

ಇದರ ಜೊತೆಗೆ 172 ಮಂದಿ ಗಣತಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದ್ದು, ಶೇ.10ರಷ್ಟು ಗಣತಿದಾರರನ್ನು ಕಾಯ್ದಿರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | ಏ.21ರಂದು ಕರ್ನಾಟಕ ರಾಜ್ಯ ರೈತ ಸಂಘದಿಂದ ಪ್ರತಿಭಟನಾ ಸಭೆ

ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಲ್ಲಿ ಜನಗಣತಿ ಪ್ರಮುಖವಾಗಿದ್ದು, ಸಾರ್ವಜನಿಕರು ಸಹಕಾರ ನೀಡಿ ನಿಖರ ಮಾಹಿತಿಯನ್ನು ಒದಗಿಸಬೇಕು. ಜನಗಣತಿಯಲ್ಲಿ ಭಾಗವಹಿಸುವುದು ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ದೇಶದ ಅಭಿವೃದ್ಧಿಗೆ ಇದು ಮೂಲಾಧಾರವಾಗುತ್ತದೆ ಎಂದು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಕರೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....

ಕೋಲಾರ | ಚೈನಾ ಶಾಂಘೈನಲ್ಲಿ ಕನ್ನಡದ ಮೊದಲ ಜಾನಪದ ಕಾರ್ಯಕ್ರಮ: ಗೋ.ನಾ. ಸ್ವಾಮಿ ಭಾಗಿ

ಚೈನಾ ದೇಶದ ಶಾಂಘೈನಲ್ಲಿ ಕನ್ನಡಿಗರ ಸಂಘದ ವತಿಯಿಂದ ಆಯೋಜಿಸಿದ್ದ ಕನ್ನಡದ ಮೊದಲ...