ಚಿಂತಾಮಣಿ ನಗರದಲ್ಲಿ ಏಪ್ರಿಲ್ 1ರಿಂದ ಜನಗಣತಿ ಕಾರ್ಯ ಆರಂಭ

Date:

ಚಿಂತಾಮಣಿ : ಭಾರತ ಸರ್ಕಾರದ ಮಹತ್ವಾಕಾಂಕ್ಷೆಯ ರಾಷ್ಟ್ರೀಯ ಜನಗಣತಿ ಕಾರ್ಯಕ್ರಮವು ಚಿಂತಾಮಣಿ ನಗರ ವ್ಯಾಪ್ತಿಯಲ್ಲಿ ಏಪ್ರಿಲ್ 1ರಿಂದ ಅಧಿಕೃತವಾಗಿ ಚಾಲನೆ ಪಡೆಯಲಿದೆ ಎಂದು ಚಿಂತಾಮಣಿ ನಗರಸಭೆ ಪೌರಾಯುಕ್ತರಾದ ಜೆ.ಎನ್. ಚಲಪತಿ ಅವರು ತಿಳಿಸಿದ್ದಾರೆ.

- Advertisement -

​ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಜನಗಣತಿ ಪ್ರಕ್ರಿಯೆ ಜನಗಣತಿ ಪ್ರಕ್ರಿಯೆಯನ್ನು ಸುಗಮವಾಗಿ ನಡೆಸಲು ಈಗಾಗಲೇ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಏಪ್ರಿಲ್ 1 ರಿಂದ ಏಪ್ರಿಲ್ 15 ರವರೆಗೆ ಸಾರ್ವಜನಿಕರು ಸ್ವಯಂ ಘೋಷಿತವಾಗಿ ಮಾಹಿತಿ ನೀಡಲು ಅವಕಾಶವಿದೆ.ಸಾರ್ವಜನಿಕರು ac.census.gov.in ಪೋರ್ಟಲ್‌ಗೆ ಲಾಗಿನ್ ಆಗಿ ತಮ್ಮ ಕುಟುಂಬದ ವಿವರಗಳನ್ನು ದಾಖಲಿಸಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಯುಪಿ ಚುನಾವಣೆ | BJPಗೆ ಕ್ಷೇತ್ರ ಹಂಚಿಕೆ ಸವಾಲು;...

ಉತ್ತರ ಪ್ರದೇಶದ 2027ರ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಿದ್ಧತೆ ಆರಂಭಿಸಿವೆ. ಸತತ ಮೂರನೇ ಬಾರಿಗೆ ಅಧಿಕಾರ ಉಳಿಸಿಕೊಳ್ಳಲು ಬಿಜೆಪಿ ಹೆಣಗಾಡುತ್ತಿದ್ದು, ಎನ್‌ಡಿಎ ಮಿತ್ರಪಕ್ಷಗಳೊಂದಿಗೆ ಸ್ಥಾನ ಹಂಚಿಕೆ ಮಾತುಕತೆ ಆರಂಭಿಸಿದೆ. ಮತ್ತೊಂದೆಡೆ ಸಮಾಜವಾದಿ...

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ಏಪ್ರಿಲ್ 15ರ ನಂತರ ನುರಿತ ಬಿಎಲ್‌ಒ ಹಾಗೂ ಶಿಕ್ಷಕರು ಪ್ರತಿ ಮನೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಲಿದ್ದಾರೆ.ನಗರದ ಪ್ರತಿ ಬ್ಲಾಕ್‌ಗೆ ಒಬ್ಬರಂತೆ ಒಟ್ಟು 140 ಬಿಎಲ್‌ಒಗಳನ್ನು ಈ ಕಾರ್ಯಕ್ಕೆ ನಿಯೋಜಿಸಲಾಗಿದೆ ಎಂದು ವಿವರಿಸಿದರು.

ಜನಗಣತಿಯ ಸಂದರ್ಭದಲ್ಲಿ ಸಾರ್ವಜನಿಕರು ನೀಡುವ ಮಾಹಿತಿಯು ಅತ್ಯಂತ ಗೌಪ್ಯವಾಗಿರುತ್ತದೆ.ಈ ಮಾಹಿತಿಯನ್ನು ಯಾವುದೇ ತನಿಖಾ ಸಂಸ್ಥೆಗಳಿಗಾಗಲಿ ಅಥವಾ ಇತರ ಉದ್ದೇಶಗಳಿಗಾಗಲಿ ಬಳಸಲಾಗುವುದಿಲ್ಲ. ಇದು ಕೇವಲ ರಾಷ್ಟ್ರದ ಅಭಿವೃದ್ಧಿ ಮತ್ತು ಯೋಜನಾ ರೂಪಣೆಯ ಉದ್ದೇಶಕ್ಕಾಗಿ ಮಾತ್ರ ಬಳಸಲ್ಪಡುತ್ತದೆ ಎಂದು ಪೌರಾಯುಕ್ತರು ಸ್ಪಷ್ಟಪಡಿಸಿದರು.

ಇದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು, ಸಾರ್ವಜನಿಕರು ತಮ್ಮ ಮನೆಗೆ ಬರುವ ಅಧಿಕಾರಿಗಳಿಗೆ ನಿಖರವಾದ ಮಾಹಿತಿ ನೀಡಿ ಸಹಕರಿಸಬೇಕು.ಈಗಾಗಲೇ ಬಸ್‌ ನಿಲ್ದಾಣ ಮತ್ತು ನಗರದ ವಿವಿಧ ವಾರ್ಡ್‌ಗಳಲ್ಲಿ ಆಟೋ ಅನೌನ್ಸ್‌ಮೆಂಟ್ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದ ಅವರು ಆಸ್ತಿ ತೆರಿಗೆ ಪಾವತಿದಾರರಿಗೆ ಶೇ.5 ರಷ್ಟು ರಿಯಾಯಿತಿ
​ಏಪ್ರಿಲ್ 1 ರಿಂದ ನಗರದಾದ್ಯಂತ ಆಸ್ತಿ ತೆರಿಗೆ ಪಾವತಿಸುವ ನಾಗರಿಕರಿಗೆ ಶೇ.5 ರಷ್ಟು ರಿಯಾಯಿತಿ ಘೋಷಿಸಲಾಗಿದೆ.

​ನಾಗರಿಕರು ಸುಲಭವಾಗಿ ತೆರಿಗೆ ಪಾವತಿಸಲು ಅನುಕೂಲವಾಗುವಂತೆ ನಗರಸಭೆ ಕಚೇರಿಯಲ್ಲೇ ಬ್ಯಾಂಕ್ ಕೌಂಟರ್ ತೆರೆಯಲಾಗಿದೆ.ನಾಗರಿಕರು ಸರತಿ ಸಾಲಿನಲ್ಲಿ ನಿಲ್ಲುವ ಅವಶ್ಯಕತೆ ಇಲ್ಲದೆ ಶೀಘ್ರವಾಗಿ ಚಲನ್ ಪಡೆದು ತೆರಿಗೆ ಪಾವತಿಸಬಹುದು. ವಾಣಿಜ್ಯ ಮಳಿಗೆಗಳ ತೆರಿಗೆ ಮೌಲ್ಯಮಾಪನವನ್ನು ಕ್ರಾಸ್ ವೆರಿಫಿಕೇಶನ್ ಮಾಡಲಾಗುವುದು. ತೆರಿಗೆಯಲ್ಲಿ ಮೋಸ ಕಂಡುಬಂದಲ್ಲಿ ದುಪ್ಪಟ್ಟು ದಂಡ ವಿಧಿಸಲಾಗುವುದು.

ಕುಡಿಯುವ ನೀರು ಮತ್ತು ಬೀದಿ ದೀಪಗಳ ವ್ಯವಸ್ಥೆ ಬೇಸಿಗೆಯ ಹಿನ್ನೆಲೆಯಲ್ಲಿ ನೀರಿನ ಸಮಸ್ಯೆ ನೀಗಿಸಲು ಈಗಾಗಲೇ 20 ಹೊಸ ಬೋರ್‌ವೆಲ್‌ಗಳನ್ನು ಕೊರೆಸಲಾಗಿದೆ.

ಇದನ್ನು ಓದಿದ್ದೀರಾ..? ರೈತ ಮುಖಂಡ ಟಿ.ಎಂ ವೆಂಕಟೇಶ್ ಕುಟುಂಬಕ್ಕೆ ಪರಿಹಾರ ನೀಡಲು ಮನವಿ

​ಸಾರ್ವಜನಿಕರು ನೀರನ್ನು ಮಿತವಾಗಿ ಬಳಸಬೇಕು ಮತ್ತು ಪೋಲು ಮಾಡಬಾರದು ಎಂದು ವಿನಂತಿಸಲಾಗಿದೆ.
​ನಗರದಾದ್ಯಂತ ಸುಮಾರು ಸಾವಿರ ಹೊಸ ಬೀದಿ ದೀಪಗಳನ್ನು ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಮುಂದಿನ ನಾಲ್ಕೈದು ದಿನಗಳಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ.ನಗರದ ಸರ್ವತೋಮುಖ ಅಭಿವೃದ್ಧಿಗೆ ನಾಗರಿಕರು ಸಹಕರಿಸಬೇಕೆಂದು ಪೌರಾಯುಕ್ತರು ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ |ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್‌ನಲ್ಲಿ ನಾವಲಗಿ ಕೆಪಿಎಸ್ ಶಾಲೆ ವಿದ್ಯಾರ್ಥಿಗಳ ಪ್ರಥಮ ಸ್ಥಾನ

ತುಳಸಿಗೇರಿಯಲ್ಲಿ ನಡೆದ ಬಾಗಲಕೋಟೆ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಪಂದ್ಯಾವಳಿಯಲ್ಲಿ ನಾವಲಗಿ...

ವಿಜಯಪುರ |ಚುನಾವಣೆ ವಿಳಂಬ ಖಂಡಿಸಿ ನ. 26ರಂದು ಕರಾಳ ಸಂವಿಧಾನ ದಿನಾಚರಣೆ

ರಾಜ್ಯದಲ್ಲಿ ಜಿಲ್ಲಾ, ತಾಲೂಕು ಹಾಗೂ ಗ್ರಾಮ ಪಂಚಾಯಿತಿ ಚುನಾವಣೆಗಳನ್ನು ವಿಳಂಬ ಮಾಡುತ್ತಿರುವುದನ್ನು...

ಕಲಬುರಗಿ | ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯರ ವರ್ಗಾವಣೆಗೆ ಆಗ್ರಹಿಸಿ ವಿದ್ಯಾರ್ಥಿಗಳ ಮನವಿ

ಮರತೂರಿನ ವಿಜ್ಞಾನೇಶ್ವರ ಸರ್ಕಾರಿ ಕಾನೂನು ಕಾಲೇಜಿನ ಪ್ರಾಚಾರ್ಯ ಶಿವಾನಂದ ಎಚ್. ಲೇಗಂಟಿ...

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...