ಕೋಲಾರ | ಜನವಿರೋಧಿ ನೀತಿಗಳು ಅನುಸರಿಸುತ್ತಿರುವ ಸರಕಾರಗಳು : ಟಿ.ಎಂ.ವೆಂಕಟೇಶ್ ಖಂಡನೆ

Date:

Advertisements

ಕೋಲಾರ ಸಿಪಿಐಎಂ ನಗರ ಸಮ್ಮೇಳನದಲ್ಲಿ ಸಿಪಿಐಎಂ ತಾಲೂಕು ಕಾರ್ಯದರ್ಶಿ ವೆಂಕಟೇಶ್‌ ಆರೋಪ

ಕೇಂದ್ರ ಹಾಗೂ ರಾಜ್ಯ ಸರಕಾರಗಳು ಕಾರ್ಪೊರೇಟ್ ಸಂಸ್ಥೆಗಳ ಪರವಾಗಿದ್ದು, ಜನವಿರೋಧಿ ನೀತಿಗಳನ್ನು ಅನುಸರಿಸುತ್ತಿವೆ ಎಂದು ಸಿಪಿಐ(ಎಂ) ತಾಲೂಕು ಕಾರ್ಯದರ್ಶಿ ಟಿ ಎಂ ವೆಂಕಟೇಶ್ ಆರೋಪಿಸಿದರು.

ಕೋಲಾರ ನಗರದ ಕೆ.ಪಿ.ಆರ್.ಎಸ್ ಜಿಲ್ಲಾ ಸಮಿತಿ ಕಚೇರಿಯಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಭಾರತ ಕಮ್ಯುನಿಷ್ಟ್‌(ಮಾರ್ಕ್ಸ್‌ವಾದಿ) ಪಕ್ಷ ಆಯೋಜಿಸಿದ್ದ ನಗರ ಸಮ್ಮೇಳನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ದಿನದಿಂದ ದಿನಕ್ಕೆ ಅಗತ್ಯ ವಸ್ತುಗಳ ಬೆಲೆ ಏರಿಕೆ ಮಾಡುತ್ತಿದೆ. ಬೆಲೆ ಏರಿಕೆಯಿಂದಾಗಿ ಜನರು ತತ್ತರಿಸುವಂತಾಗಿದೆ. ಆದರೆ, ಕೇಂದ್ರ ಸರ್ಕಾರವು ಈ ಬಗ್ಗೆ ಯಾವುದೇ ಚಿಂತೆಯಿಲ್ಲದಂತೆ ವರ್ತಿಸುತ್ತಿದೆ. ಇನ್ನೂ ಕಾಂಗ್ರೆಸ್ ಭ್ರಷ್ಟಾಚಾರದ ಆರೋಪದಲ್ಲಿ ಜನರನ್ನು ಮರೆತಿದ್ದಾರೆ ಎಂದು ದೂರಿದರು.

ಕೋಲಾರ ಜಿಲ್ಲೆಗೆ ಶಾಶ್ವತವಾದ ನೀರಾವರಿ ಯೋಜನೆಗಳು ಜಾರಿಯಾಗಬೇಕು, ಕೆ.ಸಿ ವ್ಯಾಲಿಗೆ ಮೂರನೇ ಹಂತದ ಶುದ್ದೀಕರಣ, ಕೈಗಾರಿಕೆಗಳ ಸ್ಥಾಪನೆ ಸೇರಿದಂತೆ ಜಿಲ್ಲೆಯ ಸಮಗ್ರ ಅಭಿವೃದಿಗೆ ಕೈಗೊಂಡಿರುವ ನಿರ್ಣಯಗಳನ್ನು ಜಾರಿ ಮಾಡಬೇಕಾದ ಜವಾಬ್ದಾರಿ ನಮ್ಮ ಮೇಲಿದೆ. ಸಿಪಿಐಎಂ ಪಕ್ಷವನ್ನು ಬಲಪಡಿಸಿ ಜನಪರವಾದ ಹೋರಾಟಗಳನ್ನು ಹೆಚ್ಚು ಹೆಚ್ಚಾಗಿ ಮಾಡಬೇಕಾಗಿದೆ ಎಂದರು.

Advertisements

ಪಕ್ಷದ ತಾಲೂಕು ಸಮಿತಿ ಸದಸ್ಯೆ ಆಶಾ ಮಾತನಾಡಿ, ಜನರಿಗೆ ಹುಸಿ ಭರವಸೆ ನೀಡಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಮತ್ತು ಕಾಂಗ್ರೆಸ್ ಸರ್ಕಾರಗಳು ಜನತೆಯ ಆಶಯಗಳನ್ನು ಈಡೇರಿಸುವಲ್ಲಿ ವಿಫಲವಾಗಿವೆ. ಜೊತೆಗೆ ಭ್ರಷ್ಟಾಚಾರ ಮಿತಿ ಮೀರಿದ್ದು, ಜನ ಸಾಮಾನ್ಯರು ಪರದಾಡುವಂತೆ ಮಾಡಿದ್ದಾರೆ. ಚುನಾವಣೆಯಲ್ಲಿ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.

ಇದೇ ವೇಳೆ ಕಳೆದ ಅವಧಿಯಲ್ಲಿ ಕಾರ್ಯದರ್ಶಿಯಾಗಿ ಕೆಲಸ ಮಾಡಿದ ಎಂ.ಭೀಮರಾಜ್ ಅವರನ್ನು ಮುಂದಿನ ಅವಧಿಗೆ ಕಾರ್ಯದರ್ಶಿಯಾಗಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಾತಲ್ಲಿ ಅಭಿವೃದ್ಧಿ, ಮಾಧ್ಯಮಗಳಲ್ಲಿ ಬ್ರ್ಯಾಂಡ್ ಬೆಂಗಳೂರು

ಕಾರ್ಯಕ್ರಮದಲ್ಲಿ ಮುಖಂಡರಾದ ಭೀರಮಾನಹಳ್ಳಿ ರಮೇಶ್, ಮುಸ್ತಫಾ, ನಾಗರಾಜ್, ನಾರಾಯಣಪ್ಪ, ಶಾರದಮ್ಮ, ರಾಮಚಂದ್ರಪ್ಪ ಮುಂತಾದವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X