ಗ್ಯಾರಂಟಿ ಯೋಜನೆ ಜನರಿಗೆ ತಲುಪದಂತೆ ಕೇಂದ್ರ ಸರ್ಕಾರ ತಂತ್ರಾಂಶ ಹ್ಯಾಕ್ ಮಾಡಿದೆ: ಸತೀಶ್‌ ಜಾರಕಿಹೊಳಿ ಆರೋಪ

Date:

  • ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ: ಜಾರಕಿಹೊಳಿ
  • ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿ: ಜೋಶಿ

ಕಾಂಗ್ರೆಸ್‌ ಗ್ಯಾರಂಟಿ ಯೋಜನೆಗಳು ಜನರಿಗೆ ತಲುಪದಂತೆ ಪಿತೂರಿ ನಡೆಸಲು ಇವಿಎಂ ಮಾದರಿಯಲ್ಲಿ ಕೇಂದ್ರ ಸರ್ಕಾರ ತಂತ್ರಾಂಶಗಳನ್ನು ಹ್ಯಾಕ್ ಮಾಡಿ ಸರ್ವರ್ ಡೌನ್ ಆಗುವಂತೆ ಮಾಡಿದೆ. ಲಕ್ಷ್ಮೀ ಹೆಬ್ಬಾಳ್ಕರ್ ಅವರ ಇಲಾಖೆಯ ಸರ್ವರ್​ ಕೂಡ ಹ್ಯಾಕ್ ಆಗಿದೆ ಎಂದು ಸಚಿವ ಸತೀಶ್‌ ಜಾರಕಿಹೊಳಿ ಆರೋಪಿಸಿದರು.

- Advertisement -

ಬೆಳಗಾವಿಯಲ್ಲಿ ಸುದ್ದಿಗಾರರ ಜತೆ ಮಂಗಳವಾರ ಮಾತನಾಡಿದ ಅವರು, “ಕೇಂದ್ರ ಸರ್ಕಾರ ನಮ್ಮ ಸರ್ವರ್ ಹಾಗೂ ಸಿಸ್ಟಮ್‌ಗಳನ್ನು ಹ್ಯಾಕ್ ಮಾಡಿದೆ. ಇದರಿಂದ ಗ್ಯಾರಂಟಿ ಯೋಜನೆ ಅರ್ಜಿ ಸಲ್ಲಿಸಲು ಸಮಸ್ಯೆಯಾಗುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಡತನದ ಮಾಪನ ಮತ್ತು ವಾಸ್ತವ ಚಿತ್ರಣ: ಆಳ ಅಗಲ

ವಿಶ್ವಬ್ಯಾಂಕ್‌ನ ಬಡತನ ಮತ್ತು ಸಮಾನತೆಯ ಇತ್ತೀಚಿನ ವರದಿಯ ಪ್ರಕಾರ 2011ರಿಂದ 2023ರ ಅವಧಿಯಲ್ಲಿ ಭಾರತದಲ್ಲಿ ಅಂದಾಜು 49.6 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. ಈ ವರದಿಯನ್ನು ಆಧರಿಸಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ...

ಗಾಂಧೀಯ ‘ರಾಮ’-ಮನುವಾದಿಗಳ ‘ಶ್ರೀರಾಮ’ನಲ್ಲ

ಸಮಾನತೆಯ ರಾಮರಾಜ್ಯಕ್ಕೂ, ವರ್ಣಾಶ್ರಮದ ರಾಜಕಾರಣಕ್ಕೂ ಇರುವ ವ್ಯತ್ಯಾಸವೇನು? ಗಾಂಧೀಜಿಯವರ ಪಾಲಿಗೆ ರಾಮ ಎಂದರೆ ಸತ್ಯ, ಅಹಿಂಸೆ, ಪ್ರೀತಿ ಮತ್ತು ಸರ್ವಧರ್ಮ ಸಮಭಾವದ ಸಂಕೇತ; ಅಂಬೇಡ್ಕರ್ ಅವರ ವಿಮರ್ಶೆಯಲ್ಲಿ ಪುರಾಣದ ರಾಮನ ಆಡಳಿತದಲ್ಲಿ ಜಾತಿ...

ಮಂಡೇಲ ನೇತೃತ್ವದಲ್ಲಿ ಗುಲಾಮಗಿರಿ – ವರ್ಣಭೇದ ನೀತಿ ವಿರುದ್ಧ...

ನೆಲ್ಸನ್ ಮಂಡೇಲಾ ಅವರಂತಹ ಮಹಾನ್ ನಾಯಕರು ಕಟ್ಟಿದ್ದ ಈ ಪಕ್ಷ ದಾರಿ ತಪ್ಪಿದ್ದಾದರೂ ಹೇಗೆ ಎಂಬ ಪ್ರಶ್ನೆಗೆ ರಾಜಕೀಯ ತಜ್ಞರು ಸ್ಪಷ್ಟ ಕಾರಣಗಳನ್ನು ನೀಡಿದ್ದಾರೆ. ಆಡಳಿತಶಾಹಿಯ ಭ್ರಷ್ಟಾಚಾರ, ಮಿತಿಮೀರಿದ ಬಡತನ, ನಿರುದ್ಯೋಗ, ಮತ್ತು...

“ಆನ್‌ಲೈನ್‌ನಲ್ಲಿ ಸಮಸ್ಯೆ ಹೆಚ್ಚಾದರೆ, ನೇರವಾಗಿ (ಆಫ್​ಲೈನ್) ಅರ್ಜಿ ಸ್ವೀಕರಿಸುತ್ತೇವೆ. ಇದರಿಂದ ಒಂದು ತಿಂಗಳು ತಡ ಆಗಬಹುದು. ಅದಕ್ಕಿಂತ ಹೆಚ್ಚೇನು ಆಗುವುದಿಲ್ಲ” ಎಂದರು.

“ಸರಿಯಾದ ಯೋಜನೆ ರೂಪಿಸದೆ ಗ್ಯಾರಂಟಿ ಯೋಜನೆ ಜಾರಿಗೆ ತರುತ್ತಿದ್ದಾರೆ” ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಆರೋಪಿಸಿದ್ದಾರಲ್ಲಾ ಎಂದು ಪತ್ರಕರ್ತರು ಪ್ರಶ್ನಿಸಿದಾಗ, “ಸಮಸ್ಯೆಗಳನ್ನು ಸರಿಪಡಿಸಲು ಪ್ರಯತ್ನ ಮಾಡುತ್ತಿದ್ದೇವೆ. ಆದರೆ ಹ್ಯಾಕ್‌ ಮಾಡಿದರೆ ಹೇಗೆ? ಎಷ್ಟೇ ಹ್ಯಾಕ್ ಮಾಡಿದರೂ ನಮ್ಮ ಯೋಜನೆ ಜಾರಿಗೆ ತರುತ್ತೇವೆ”‌ ಎಂದರು.

ಈ ಸುದ್ದಿ ಓದಿದ್ದೀರಾ? ಸಕಾಲಕ್ಕೆ ಕೇಂದ್ರ ಅಕ್ಕಿ ವಿತರಣೆ ಮಾಡದಿದ್ದಲ್ಲಿ ಕಾನೂನು ಹೋರಾಟ: ಸಚಿವ ಪ್ರಿಯಾಂಕ್ ಖರ್ಗೆ

ಪ್ರಲ್ಹಾದ್‌ ಜೋಶಿ ತಿರುಗೇಟು

“ರಾಜ್ಯ ಸರ್ಕಾರದ ಸರ್ವರ್ ಹ್ಯಾಕ್ ಮಾಡಿದರೆ ದೂರು ನೀಡಲಿ” ಎಂದು ಹೇಳುವ ಮೂಲಕ ಸಚಿವ ಸತೀಶ್ ಜಾರಕಿಹೊಳಿ ಮಾಡಿದ ಆರೋಪಕ್ಕೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ಹ್ಯಾಕ್ ಆಗಿದ್ದರೆ ಸೈಬರ್​ ಕ್ರೈಂ ವಿಭಾಗಕ್ಕೆ ದೂರು ನೀಡಿ ತನಿಖೆ ಮಾಡಿಸಲಿ. ಸತೀಶ್ ಜಾರಕಿಹೊಳಿ ಹೇಳಿಕೆ ಹಾಸ್ಯಾಸ್ಪದವಾಗಿದೆ. ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲು ಸುಮ್ಮನೇ ಕುಂಟು ನೆಪ ಹೇಳುತ್ತಿದ್ದಾರೆ” ಎಂದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ದ್ವೇಷ ಭಾಷಣ, ಕೋಮುವಾದಿ ಪ್ರಚೋದನೆ ತಡೆಗೆ ಸಮಗ್ರ ನೀತಿ ರೂಪಿಸಿ

ಕರ್ನಾಟಕ ಧಾರ್ಮಿಕ ಸ್ವಾತಂತ್ರ್ಯ ಹಕ್ಕಿನ ಸಂರಕ್ಷಣಾ ಕಾಯ್ದೆ–2022 (ಮತಾಂತರ ನಿಷೇಧ ಕಾಯ್ದೆ)...

ಜಾತಿ ಗಣತಿ ಪ್ರಸ್ತಾವನೆಗೆ ಬ್ಯಾನರ್ಜಿ ವಿರೋಧವೇ ನಿತೀಶ್ ಇಂಡಿಯಾ ಒಕ್ಕೂಟದಿಂದ ದೂರವಾಗಲು ಕಾರಣ: ಜೆಡಿಯು

ಜಾತಿ ಗಣತಿ ನಡೆಸುವ ಪ್ರಸ್ತಾವನೆಗೆ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ...

ಕಲಬುರಗಿ | ಕನ್ನಡ ರಾಜ್ಯೋತ್ಸವ ಅಂಗವಾಗಿ; ಸಸಿ ನೆಡುವ ಮೂಲಕ ಕನ್ನಡ ಜಾಗೃತಿ ಕಾರ್ಯಕ್ರಮ

ಕನ್ನಡ ರಾಜ್ಯೋತ್ಸವದ ಅಂಗವಾಗಿ ಕನ್ನಡ ನಾಡು, ನುಡಿಯ ಅಭಿಮಾನದ ಜೊತೆಗೆ ಪರಿಸರ...