ಸಿಇಟಿ ಪರೀಕ್ಷೆ | ಕ್ರೀಡಾ ಕೋಟಾ ನಿಯಮದಲ್ಲಿ ಬದಲಾವಣೆ; ಯಾರು ಅರ್ಹರು?

Date:

  • 2006ರ ನಿಯಮಗಳನ್ನು ಪರಿಷ್ಕರಿಸಲು ಕೆಇಎ ಸಭೆಯಲ್ಲಿ ನಿರ್ಧಾರ
  • ಕ್ರೀಡಾ ಕೋಟಾ; ಮುಂದಿನ ಶೈಕ್ಷಣಿಕ ವರ್ಷದಿಂದ ನಿಯಮ ಬದಲಾವಣೆ

ವೃತ್ತಿ ಶಿಕ್ಷಣ ಕೋರ್ಸ್‌ ಪ್ರವೇಶ ಸಂಬಂಧ ಕ್ರೀಡಾ ಕೋಟಾದ ನಿಯಮದ ಬ‌ಗ್ಗೆ ಬದಲಾವಣೆ ತರಲಾಗಿದ್ದು, ಮುಂದಿನ ಶೈಕ್ಷಣಿಕ ಸಾಲಿನಿಂದ ಹೊಸ ನಿಯಮ ಜಾರಿಗೆ ತರಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ.

- Advertisement -

ಉನ್ನತ ಶಿಕ್ಷಣ ಸಚಿವ ಡಾ. ಎಂ ಸಿ ಸುಧಾಕರ್ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, 2006ರ ನಿಯಮಗಳನ್ವಯ ಪ್ರಸ್ತುತ ಇರುವ ಕ್ರೀಡಾ ಕೋಟಾದ ನಿಯಮಗಳಲ್ಲಿ ಕೆಲವು ಅಸ್ಪಷ್ಟತೆಯಿದ್ದು, ಅದನ್ನು ಪರಿಷ್ಕರಿಸಲು ನಿರ್ಧರಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮುಸ್ಲಿಯಾರ್ ಹೇಳಿಕೆ ಎಬ್ಬಿಸಿದ ಪ್ರಶ್ನೆ— ಧಾರ್ಮಿಕ ಮೌಲ್ಯಗಳ ನಡುವೆ...

ಮಹಿಳೆಯ ಗೌರವವನ್ನು ರಕ್ಷಿಸುವ ಹೆಸರಿನಲ್ಲಿ ಆಕೆಯ ಶಿಕ್ಷಣ, ಪ್ರತಿಭೆ, ವೃತ್ತಿ ಅಥವಾ ಸಾಮಾಜಿಕ ಸೇವೆಯ ಬಾಗಿಲುಗಳನ್ನು ಮುಚ್ಚುವುದು ಒಂದು ವಿಷಯ; ಧಾರ್ಮಿಕ ಹಯಾ ಮತ್ತು ಮೌಲ್ಯಗಳನ್ನು ಕಾಪಾಡಿಕೊಂಡೇ ಸಮಾಜದಲ್ಲಿ ಜವಾಬ್ದಾರಿಯುತವಾಗಿ ಪಾಲ್ಗೊಳ್ಳಲು ಅವಕಾಶ...

ಧಾರವಾಡ | ಹುಲಕೊಪ್ಪ‌ ಶಾಲೆ ಶೌಚಾಲಯ ಕಾಮಗಾರಿ ಅಪೂರ್ಣ;...

ಧಾರವಾಡ ಜಿಲ್ಲೆಯ ಕಲಘಟಗಿ ಪ್ರಾಥಮಿಕ ಶಾಲೆಯಲ್ಲಿ‌ ಶೌಚಾಲಯ ಸೇರಿದಂತೆ ಮೂಲಭೂತ ಸೌಲಭ್ಯಗಳ ಕೊರತೆಯಿಂದ ವಿದ್ಯಾರ್ಥಿಗಳು ಸಮಸ್ಯೆ ಎದುರಿಸುತ್ತಿದ್ದಾರೆ. ಹೈಟೆಕ್ ಶೌಚಾಲಯ ಆರಂಭವಾಗಿ ಸುಮಾರು ವರ್ಷಗಳೇ ಕಳೆದರೂ ಇನ್ನೂ ಕಾಮಗಾರಿ ಮುಗಿದಿಲ್ಲ. ಶಾಲೆಯ...

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ ಮತ್ತು ಸದ್ಯದ ಬಿಕ್ಕಟ್ಟುಗಳು

ಇಂದು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನ. ಜಾಗತಿಕವಾಗಿ ಕುಸಿಯುತ್ತಿರುವ ಪ್ರಜಾಪ್ರಭುತ್ವವನ್ನು ಎತ್ತಿಹಿಡಿಯಲು ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಸೆಪ್ಟಂಬರ್ 15ನ್ನು ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನ್ನಾಗಿ ಆಚರಿಸುವ ಘೋಷಣೆ ಮಾಡಿತು. ಪರಿಣಾಮ ಇಂಟರ್ ಪಾರ್ಲಿಮೆಂಟರಿ ಯೂನಿಯನ್...

ರಾಜ್ಯ ಕ್ರೀಡಾ ಇಲಾಖೆ ಈಗಾಗಲೇ ಪರಿಷ್ಕೃತ ಕ್ರೀಡಾ ಕೋಟಾದ ವರದಿಯನ್ನು ನೀಡಿದ್ದು, ಈ ಪ್ರಕಾರ ಅಧಿಕೃತವಾಗಿ ರಾಜ್ಯ ಅಥವಾ ರಾಷ್ಟ್ರವನ್ನು ಪ್ರತಿನಿಧಿಸಿರುವ ವಿದ್ಯಾರ್ಥಿಗಳಿಗೆ ಮಾತ್ರ ಕ್ರೀಡಾ ಕೋಟಾ ಮೀಸಲಾತಿ ಮುಂದಿನ ಶೈಕ್ಷಣಿಕ ವರ್ಷದಿಂದ ಅನ್ವಯವಾಗುತ್ತದೆ.

ಕೆ.ಇ.ಎ ಕಟ್ಟಡದ ಮರುವಿನ್ಯಾಸ ಹಾಗೂ ಹೆಚ್ಚುವರಿ ಕಟ್ಟಡ ನಿರ್ಮಾಣ ಕುರಿತು ಚರ್ಚಿಸಲಾಯಿತು. ಸುಸಜ್ಜಿತ ನೂತನ ಕಟ್ಟಡದ ಅವಶ್ಯಕತೆಯಿರುವುದರಿಂದ ಈ ಬಗ್ಗೆ ಕರ್ನಾಟಕ ಹೌಸಿಂಗ್ ಬೋರ್ಡ್ ಇಂಜಿನಿಯರ್‌ಗಳು ನೀಡಿದ ಪಿಪಿಟಿ ವೀಕ್ಷಿಸಲಾಯಿತು. ಸುಮಾರು 33 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ಮಾಣದ ಕಾರ್ಯವನ್ನು ಕೈಗೊಳ್ಳುವ ಬಗ್ಗೆ ಒಪ್ಪಿಗೆ ನೀಡಲಾಯಿತು.

ಎಂ ಸಿ ಸುಧಾಕರ್ 3

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಧಾನಿಗೆ 9 ವರ್ಷಗಳಿಂದ ಕಾಣದ ಅಕ್ಕತಂಗಿಯರ ಸಂಕಟ ಈಗ ಕಂಡಿದ್ದು ಹೇಗೆ?

ಸಭೆಗೆ ಮುನ್ನ ಉನ್ನತ ಶಿಕ್ಷಣ ಸಚಿವರಾದ ಡಾ. ಎಂ. ಸಿ. ಸುಧಾಕರ್ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್ ಪಾಟೀಲ್ ಸಿಇಟಿ ಕೇಂದ್ರದಲ್ಲಿ ಕೌನ್ಸಿಲಿಂಗ್‌ಗೆ ಆಗಮಿಸಿದ್ದ ವಿದ್ಯಾರ್ಥಿಗಳೊಂದಿಗೆ ಸಮಾಲೋಚನೆ ನಡೆಸಿದರು. ಕಾಲೇಜುಗಳ ಆಯ್ಕೆ ಸಂಬಂಧ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲಿ ತರಬೇತಿ ನೀಡುವ ಕಾರ್ಯವನ್ನು ಮುಂದಿನ ವರ್ಷದಿಂದ ಕೈಗೊಳ್ಳಲು ಸೂಚಿಸಲಾಯಿತು.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಆಡಳಿತ ಮಂಡಳಿ ಸಭೆಯಲ್ಲಿ ಡಾ. ಶರಣಪ್ರಕಾಶ್ ಪಾಟೀಲ್, ಪ್ರಭಾರ ಕಾರ್ಯದರ್ಶಿ ಉಮಾಶಂಕರ್, ಆಯುಕ್ತರಾದ ಜಗದೀಶ್, ಕೆಇಎ ಕಾರ್ಯನಿರ್ವಾಹ ನಿರ್ದೇಶಕರಾದ ಶ್ರೀಮತಿ ರಮ್ಯ ಹಾಗೂ ಇಲಾಖೆಯ ಅಧಿಕಾರಿಗಳು ಪಾಲ್ಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | UAPA, NSA ಕಾಯ್ದೆಗಳು ಸಂವಿಧಾನಿಕ ಹಕ್ಕುಗಳ ದಮನಕ್ಕೆ ಅಸ್ತ್ರವಾಗುತ್ತಿವೆ : ಪ್ರೊ. ಫಣಿರಾಜ್

ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಬಂಧನವಾಗಿ ಆರು ವರ್ಷ ಪೂರ್ಣಗೊಂಡ ಹಿನ್ನೆಲೆಯಲ್ಲಿ,...

ಉಡುಪಿ | ಕಟ್‌ಬೇಲ್ತೂರು ರೈಲ್ವೆ ಸೇತುವೆ ಅಪಾಯಕಾರಿ ತಿರುವು ಸರಿಪಡಿಸಲು ಆಗ್ರಹಿಸಿ ಸಿಪಿಎಂ ಪ್ರತಿಭಟನೆ

ಕಟ್‌ಬೇಲ್ತೂರು ಗ್ರಾಮದ ರೈಲ್ವೆ ಸೇತುವೆಯಲ್ಲಿರುವ ಅಪಾಯಕಾರಿ ತಿರುವನ್ನು ತಕ್ಷಣ ಸರಿಪಡಿಸಿ, ಸಾರ್ವಜನಿಕರ...

ಉಡುಪಿ | ಮಲ್ಪೆ–ತೀರ್ಥಹಳ್ಳಿ ಹೆದ್ದಾರಿ ಕಾಮಗಾರಿ ಅಂತಿಮ ಹಂತ; ಬಾಕಿ ಭೂಸ್ವಾಧೀನಕ್ಕೆ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ರಾಷ್ಟ್ರೀಯ ಹೆದ್ದಾರಿ 169ಎರ ಮಲ್ಪೆ–ಕರಾವಳಿ ಬೈಪಾಸ್‌ವರೆಗಿನ ಬಾಕಿ ಉಳಿದಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು...