ಉಡುಪಿ | ಸಿಇಟಿ ಪರೀಕ್ಷೆ ಬರೆಯಲಿರುವ 5,712 ವಿದ್ಯಾರ್ಥಿಗಳು; ಅಗತ್ಯ ಸಿದ್ಧತೆಗೆ ಸೂಚನೆ

Date:

Advertisements
  • ಸಿಇಟಿ, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಕುರಿತ ಪೂರ್ವಭಾವಿ ಸಭೆ
  • ನಾನಾ ಇಲಾಖೆ ಅಧಿಕಾರಿಗಳಿಗೆ ಹಲವು ಸೂಚನೆ ನೀಡಿದ ಜಿಲ್ಲಾಧಿಕಾರಿ

ಪ್ರಸಕ್ತ ಸಾಲಿನ ಸಿಇಟಿ ಪರೀಕ್ಷೆ ಮೇ 20 ಮತ್ತು 21 ರಂದು ನಡೆಯಲಿದ್ದು, ಇದಕ್ಕಾಗಿ ಉಡುಪಿಯಲ್ಲಿ 6, ಕಾರ್ಕಳದಲ್ಲಿ 2, ಕುಂದಾಪುರದಲ್ಲಿ 2 ಹಾಗೂ ಬ್ರಹ್ಮಾವರದಲ್ಲಿ 2 ಸೇರಿದಂತೆ ಒಟ್ಟು 12 ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 5,712 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಾಗೂ ಜಿಲ್ಲಾಧಿಕಾರಿ (ಪ್ರಭಾರ) ಎಚ್ ಪ್ರಸನ್ನ ತಿಳಿಸಿದರು.

ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯಿತಿ ಡಾ. ವಿ ಎಸ್ ಆಚಾರ್ಯ ಸಭಾಂಗಣದಲ್ಲಿ ಬುಧವಾರ 2023ನೇ ನಾಲಿನ ಸಿಇಟಿ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ನಡೆಸುವ ಕುರಿತ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಸಿಇಟಿ ಪರೀಕ್ಷೆ ಕುರಿತು ಪ್ರಶ್ನೆಪತ್ರಿಕೆಯನ್ನು ಜಿಲ್ಲಾ ಖಜಾನೆಯಲ್ಲಿ ಸೂಕ್ತ ಪೊಲೀಸ್ ಭದ್ರತೆಯಲ್ಲಿ ಇಡುವಂತೆ ತಿಳಿಸಿದ ಅವರು, ಖಜಾನೆಯಲ್ಲಿ ಸಿಸಿ ಟಿವಿ ಕ್ಯಾಮೆರಾ ಅಳವಡಿಸುವಂತೆ ಹಾಗೂ ಪ್ರಶ್ನೆ ಪತ್ರಿಕೆ ವಿತರಣೆಗೆ ನೇಮಿಸಿರುವ ತಹಶೀಲ್ದಾರ್‌ಗಳು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಪ್ರಾಂಶುಪಾಲರನ್ನು ಒಳಗೊಂಡ ತ್ರಿಸದಸ್ಯ ಸಮಿತಿ ಪೊಲೀಸ್ ಭದ್ರತೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಪರೀಕ್ಷಾ ಕೇಂದ್ರಗಳಿಗೆ ನಿಗಧಿತ ಸಮಯಕ್ಕೆ ಸರಿಯಾಗಿ ತಲುಪಿಸುವಂತೆ ಸೂಚನೆ ನೀಡಿದರು. 

Advertisements

ಪ್ರತೀ ಪರೀಕ್ಷಾ ಕೇಂದ್ರಕ್ಕೆ ವೀಕ್ಷಕರನ್ನು ಮತ್ತು ಎಲ್ಲ ಪರೀಕ್ಷಾ ಕೇಂದ್ರಗಳ ಕೊಠಡಿಗಳಿಗೆ ಸಿಸಿ ಟಿವಿ  ಕೆಮರಾ ಅಳವಡಿಕೆ ಮತ್ತು ಕೊಠಡಿ ಮೇಲ್ವಿಚಾರಕನ್ನು ನೇಮಿಸಲಾಗುವುದು ಎಂದರು.

ಎಲ್ಲ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ ಪ್ರದೇಶವನ್ನು ನಿಷೇಧಿತ ಸ್ಥಳವೆಂದು ಘೋಷಿಸಿ, ಸೂಕ್ತ ಪೊಲೀಸ್ ಭದ್ರತೆ ನೀಡುವಂತೆ ಪೊಲೀಸ್ ಇಲಾಖೆಗೆ ಹಾಗೂ ಮುಂಜಾಗ್ರತೆಯಾಗಿ ಎಲ್ಲ ಕೇಂದ್ರಗಳಿಗೆ ಆರೋಗ್ಯ ಸಹಾಯಕರನ್ನು ನೇಮಿಸುವಂತೆ ಆರೋಗ್ಯ ಇಲಾಖೆಗೆ ಮತ್ತು ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ವಿದ್ಯುತ್ ಸಂಪರ್ಕ ವ್ಯತ್ಯಯವಾಗದಂತೆ ಎಚ್ಚರವಹಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಸಿಇಟಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದೊಳಗೆ ಯಾವುದೇ ರೀತಿಯ ವಾಚ್‌ಗಳು, ಮೊಬೈಲ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್‌ ಉಪಕರಣಗಳು, ತುಂಬು ತೋಳಿನ ಶರ್ಟ್ ಹಾಗೂ ಆಭರಣಗಳನ್ನು ಧರಿಸುವುದನ್ನು ನಿಷೇಧಿಸಲಾಗಿದ್ದು, ಪರೀಕ್ಷೆ ಆರಂಭವಾಗುವ ಸಮಯಕ್ಕಿಂತ ಮುಂಚಿತವಾಗಿ ವಿದ್ಯಾರ್ಥಿಗಳು ಕೇಂದ್ರದಲ್ಲಿ ಹಾಜರಿರುವಂತೆ ಹಾಗೂ ತಮ್ಮ ಪರೀಕ್ಷಾ ಪ್ರವೇಶ ಪತ್ರದ ಜೊತೆ ಯಾವುದಾದರೊಂದು ಗುರುತಿನ ಚೀಟಿಯನ್ನು (ಕಾಲೇಜಿನ ಗುರುತಿನ ಚೀಟಿ, ಬಸ್ ಪಾಸ್, ಡ್ರೈವಿಂಗ್ ಲೈಸೆನ್ಸ್, ಪಾಸ್ಪೋರ್ಟ್, ಆಧಾರ್ ಕಾರ್ಡ್, ಪಾನ್ ಕಾರ್ಡ್) ತರುವಂತೆ ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಕೊಪ್ಪಳದಲ್ಲಿ ‘ಜಿಂಕೆ ಪಾರ್ಕ್‌’ ನಿರ್ಮಾಣಕ್ಕೆ ರೈತ ಸಂಘ ಆಗ್ರಹ

ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಸಿಬ್ಬಂದಿ ತಮ್ಮ ಕರ್ತವ್ಯಕ್ಕೆ ಗೈರು ಹಾಜರಾಗದಂತೆ ಅಥವಾ ಬೇರೆಯವನ್ನು ನಿಯೋಜಿಸದಂತೆ ಸೂಚನೆ ನೀಡಿದ ಜಿಲ್ಲಾಧಿಕಾರಿ, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಸಮರ್ಥವಾಗಿ ಮತ್ತು ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸುವಂತೆ  ನಿರ್ದೇಶನ ನೀಡಿದರು.

ಜಿಲ್ಲೆಯಲ್ಲಿ ಮೇ 23 ರಿಂದ ಜೂನ್ 3 ರ ವರೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗಳು 4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಈ ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ತಿಳಿಸಿದರು.

ಸಭೆಯಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಮಾರುತಿ ಹಾಗೂ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸಿರುವ ಎಲ್ಲ ಅಧಿಕಾರಿಗಳು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಶಿವಮೊಗ್ಗ | ಮತ್ತೆ ಸದ್ದು ಮಾಡುತ್ತಿದೆ ವಾಹನಗಳ ಕರ್ಕಶ ಸೈಲೆಂಸರ್ ; ಕ್ರಮ ಕೈಗೊಳ್ಳುವರೆ ಟ್ರಾಫಿಕ್ ಪೊಲೀಸ್?

ಶಿವಮೊಗ್ಗ ನಗರದಲ್ಲಿ ಕೆಲವು ತಿಂಗಳು ಹಿಂದೆ ಸೈಲೆಂಟ್ ಆಗಿದ್ದ ಸೈಲೆಂಸರ್ ಕರ್ಕಶ...

ಕೋಲಾರ | ಎಫ್ಆರ್‌ಎಸ್ ನಿಲ್ಲಿಸುವಂತೆ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಅಂಗನವಾಡಿ ಕಾರ್ಯಕರ್ತೆಯರ ಮುಖಚರ್ಯೆ ಗುರುತಿಸುವ ಕ್ರಮಕ್ಕೆ (ಎಫ್ಆರ್‌ಎಸ್) ತಡೆ ಹಾಗೂ ಐಸಿಡಿಎಸ್...

Download Eedina App Android / iOS

X