ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದ ಹೊರವಲಯದ ಅಡ್ಯಾರ್‌ನಲ್ಲಿರುವ ಬರಕಃ ಇಂಟರ್ ನ್ಯಾಷನಲ್ ಸಂಸ್ಥೆಯಲ್ಲಿ ಪಿಯುಸಿ ವಿದ್ಯಾರ್ಥಿಗಳಿಗೆ ಅವರ ಉನ್ನತ ವ್ಯಾಸಂಗಕ್ಕೆ ನೆರವಾಗಲು ನೀಟ್ / ಸಿಇಟಿ ಕ್ರ್ಯಾಶ್ ಕೋರ್ಸ್ ಆಯೋಜಿಸಲಾಗಿದೆ ಎಂದು ಕಾಲೇಜಿನ ಆಡಳಿತ ಮಂಡಳಿ ತಿಳಿಸಿದೆ.
45 ದಿನಗಳ ಕಾಲ ನಡೆಯುವ ಈ ತರಬೇತಿ ಕೋರ್ಸ್ ಮಾರ್ಚ್ 22ರಿಂದ ಆರಂಭಗೊಂಡು ಮೇ 3ನೇ ತಾರೀಕಿನ ವರೆಗೆ ನಡೆಯಲಿದೆ . ನೀಟ್ / ಸಿಇಟಿ ಕ್ರ್ಯಾಶ್ ಕೋರ್ಸಿನಲ್ಲಿ ನುರಿತ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಮಾಡಲಿದ್ದಾರೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಶರ್ಫುದ್ದೀನ್ ತಿಳಿಸಿದ್ದಾರೆ.
ಈ ಕೋರ್ಸಿನಲ್ಲಿ ಭಾಗವಹಿಲು ಇಚ್ಚಿಸುವ ವಿದ್ಯಾರ್ಥಿಗಳು ಮಾರ್ಚ್ 19ನೇ ತಾರೀಕಿನ ಸಂಜೆ 4 ಗಂಟೆಯ ಒಳಗೆ ಬರಕಃ ಶಾಲೆಗೆ ಅರ್ಜಿ ಸಲ್ಲಿಸಬೇಕಾಗಿದ್ದು, ವಿದ್ಯಾರ್ಥಿಗಳಿಗೆ ಬರಕಃ ವಿದ್ಯಾ ಸಂಸ್ಥೆಯಲ್ಲಿ ಮಾರ್ಚ್ 21 ರಂದು ಬೆಳಗ್ಗೆ 9 ಗಂಟೆಗೆ ಅರ್ಹತಾ ಪರೀಕ್ಷೆಯನ್ನು ಇಡಲಾಗಿದೆ. ಅದೇ ದಿನ 11:30ಕ್ಕೆ ಅರ್ಹತಾ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಲಾಗುವುದು ಎಂದು ಪ್ರಕಟಣೆಯಲ್ಲಿ ಅವರು ತಿಳಿಸಿದ್ದಾರೆ.
ಆಸಕ್ತ ಪೋಷಕರು ಮತ್ತು ವಿದ್ಯಾರ್ಥಿಗಳು ಇದರ ಪ್ರಯೋಜನ ಪಡೆಯಲು ನಸೀಮ್ 9845112379 ಇಮೇಲ್: barkahneet@gmail.com ಅನ್ನು ಸಂಪರ್ಕಿಸಬಹುದಾಗಿದೆ.
ಕೆಲವೇ ವಿದ್ಯಾರ್ಥಿಗಳಿಗೆ ಅವಕಾಶ ಇರುವುದರಿಂದ ಮೊದಲು ಬಂದವರಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಕಾಲೇಜಿನ ಆಡಳಿತ ಮಂಡಳಿ ಪ್ರಕಟಣೆಯಲ್ಲಿ ತಿಳಿಸಿದೆ.
